ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಸಿ ವಿತರಣೆ
Team Udayavani, Jul 25, 2017, 11:18 AM IST
ಕೆಂಗೇರಿ: ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಅದಕ್ಕೆ ಸರ್ಕಾರ ಮಾತ್ರ ಸೀಮಿತವಾಗದೆ ಸಂಘಸಂಸ್ಥೆಗಳು ಕೈಜೋಡಿಸಿದಾಗ ಮಾತ್ರ ಸುಂದರ ಹಾಗೂ ಉತ್ತಮ ಪರಿಸರ ಹೊಂದಲು ಸಾಧ್ಯ ಎಂದು ಮಹೀಂದ್ರ ಫೈನಾನ್ಸ್ನ ವೃತ್ತ ಮುಖ್ಯಸ್ಥ ಪಿ.ಪ್ರಸಾದ್ ಹೇಳಿದರು.
ಕೆಂಗೇರಿ ಉಪನಗರದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಹೀಂದ್ರ ಫೈನಾನ್ಸ್ ಸಂಸ್ಥೆ ಹಾಗೂ ಸಾಲುಮರದ ತಿಮ್ಮಕ್ಕ ಶ್ರಮಜೀವಿ ಗ್ರಾಮೀಣ ನಗರಾಭಿವೃದ್ಧಿ ಸಂಸ್ಥೆ ಮತ್ತು ಇಕೋ ಕ್ಲಬ್ ವತಿಯಿಂದ ಪರಿಸರ ದಿನಾಚರಣೆ ಹಾಗೂ ಸ್ವತ್ಛಭಾರತ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಕರ್ನಾಟಕದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸಸಿ ನೆಡಲು ಸಸಿ ಹಾಗೂ ಕಸ ವಿಂಗಡನೆಗಾಗಿ ಬುಟ್ಟಿಗಳನ್ನು ವಿತರಿಸಿ ಮಾತನಾಡಿದರು.
ಹಿಂದಿನ ವರ್ಷ ಸಂಸ್ಥೆಯ ವತಿಯಿಂದ 8350 ಗಿಡಗಳನ್ನು ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ವಿತರಿಸಲಾಗಿತ್ತು. ಈ ವರ್ಷ 12500 ಗಿಡಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಬಿಬಿಎಂಪಿ ಸದಸ್ಯ ವಿ.ವಿ.ಸತ್ಯನಾರಾಯಣ್ ಮಾತನಾಡಿ, ಮಹೀಂದ್ರ ಫೈನಾನ್ಸ್ ಸಂಸ್ಥೆ ಪರಿಸರದ ಬಗ್ಗೆ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಸಸಿ ವಿತರಿಸುವ ಮೂಲಕ ಹಾಗೂ ಸ್ವತ್ಛತೆಗಾಗಿ ಕಸ ಸಂಗ್ರಹಣಾ ಡಬ್ಬಿಗಳನ್ನು ವಿತರಿಸುತ್ತಿರುವುದಲ್ಲದೆ ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಸಂಸ್ಥೆಯ ಕಾಳಜಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಥೆಯ ವಿಭಾಗೀಯ ಮುಖ್ಯಸ್ಥ ಮಧುಸೂದನ್, ಎಫ್ಡಿ ವಿಭಾಗ ಮುಖ್ಯಸ್ಥ ರವೀಂದ್ರ ಎನ್, ವಿಭಾಗೀಯ ನಿರ್ವಾಹಕ ಮಹೇಶ್ಕುಮಾರ್ ಶೆಟ್ಟಿ, ಶಶಿಧರ್ರಾವ್, ಶ್ರಮಜೀವಿ ಸಂಸ್ಥೆ ಅಧ್ಯಕ್ಷ ಮಲ್ಲಯ್ಯ ಗೋರ್ಕಲ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ.ವಿ.ಶ್ರೀನಿವಾಸಮೂರ್ತಿ, ಉಪಾಧ್ಯಾಯಿನಿ ಆರ್.ಸುಶೀಲ ಇತರರು ಇದ್ದರು. ಸುಮಾರು 835 ಸಸಿಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.