ಕೆಂಪೇಗೌಡರ 3ಡಿ ಸಂಗ್ರಹಾಲಯ


Team Udayavani, Jul 25, 2017, 11:18 AM IST

kempegowda.jpg

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ “3ಡಿ ತಂತ್ರಜ್ಞಾನ’ ಆಧಾರಿತ ನಾಡಪ್ರಭು ಕೆಂಪೇಗೌಡರ ಸಂಗ್ರಹಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದೆ. ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಐದು ಎಕರೆ ಜಮೀನು ನೀಡುವಂತೆ ನಾಗರಿಕ ವಿಮಾನಯಾನ ಇಲಾಖೆಗೆ ಕೋರಿಕೆ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ವಿಮಾನ ನಿಲ್ದಾಣಕ್ಕೆ ಬರುವ ಪ್ರವಾಸಿಗರಿಗೆ ನಾಡಪ್ರಭು ಕೆಂಪೇಗೌಡರ ಇತಿಹಾಸ ಮತ್ತು ಬೆಂಗಳೂರು ಅಭಿವೃದ್ಧಿಯ ಹಾದಿ ಕುರಿತು ಸಮಗ್ರ ಮಾಹಿತಿ ನೀಡಲು 3 ಡಿ ತಂತ್ರಜ್ಞಾನ ಆಧಾರಿತ ಸಂಗ್ರಹಾಲಯ ಸ್ಥಾಪಿಸಲಾಗುವುದು ಎಂದು ಹೇಳಿದರು.
ಕೆಂಪೇಗೌಡರ ಕಾಲದ ಅಳ್ವಿಕೆ ಹಾಗೂ ಸಾಧನೆಗಳ ಕುರಿತ ಸಾಕ್ಷ್ಯಾಚಿತ್ರ ಹಾಗೂ ದಾಖಲೀಕರಣಕ್ಕಾಗಿ ಇತಿಹಾಸ ತಜ್ಞರು ಸೇರಿ ವಿವಿಧ ಕ್ಷೇತ್ರದ ಗಣ್ಯರ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆ ವತಿಯಿಂದ ಕೆಂಪೇಗೌಡರ ಹುಟ್ಟು ಸ್ಥಳ, ರಾಜ್ಯಭಾರ, ಅಭಿವೃದ್ಧಿ ಮತ್ತಿತರ ವಿಷಯಗಳನ್ನು ಆಧರಿಸಿ ಬೆಂಗಳೂರು ಸುವರ್ಣ ದಾರಿ ಕಾರಿಡಾರ್‌ ಯೋಜನೆ ಸಹ ರೂಪಿಸಲಾಗುವುದು ಎಂದು ತಿಳಿಸಿದರು. ಮೆಯೋ ಹಾಲ್‌ನಲ್ಲಿರುವ ಕೆಂಪೇಗೌಡರ ಸಂಗ್ರಹಾಲಯದ ಮೇಲ್ದರ್ಜೆಗೆ ಏರಿಸಿ ಮತ್ತಷ್ಟು ಮಾಹಿತಿ ಹಾಗೂ ಕೆಂಪೇಗೌಡರ ವಂಶಸ್ಥರಿಗೆ ಸೇರಿ ಅಮೂಲ್ಯ ವಸ್ತುಗಳ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗುವುದು.

ಪ್ರಾಧಿಕಾರದ ಕಚೇರಿ ಮೆಯೋಹಾಲ್‌ನಲ್ಲಿ ಆರಂಭಿಸಲು ಮೂರು ತಿಂಗಳಲ್ಲಿ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಲು ನಿರ್ಧರಿಸಲಾಯಿತು. ರಾಮನಗರ ಜಿಲ್ಲೆಯಲ್ಲಿ ಕೆಂಪೇಗೌಡರಿಗೆ ಸಂಬಂಧಿಸಿದ ಸ್ಥಳ ಪತ್ತೆ ಹಚ್ಚುವುದು ಹಾಗೂ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ಎರಡು ಸಮಿತಿ ರಚಿಸಲು ಹಾಗೂ ಕೆಂಪಾಪುರ ಸುತ್ತಲ ಐದು ಎಕರೆ ಜಾಗ ರೈತರಿಂದ ಸ್ವಾಧೀನಪಡಿಸಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.