ತಮಿಳುನಾಡಿಗೆ ನೀರು ಬಿಡದಂತೆ ಒತ್ತಾಯಿಸಿ ರಸ್ತೆ ತಡೆ


Team Udayavani, Jul 25, 2017, 11:37 AM IST

mys3.jpg

ನಂಜನಗೂಡು: ಮತ ನೀಡಿದ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ಇಲ್ಲದ ನೀರು ಪಕ್ಕದ ರಾಜ್ಯಕ್ಕೆಕೆ ಎಂದು ಪ್ರಶ್ನಿಸಿ ತಾಲೂಕು ಕಬ್ಬು ಬೆಳೆಗಾರರ ಸಂಘ ಹಾಗೂ ರೈತಸಂಘಗಳ ಆಶ್ರಯದಲ್ಲಿ ಸೋಮವಾರ ರೈತರು ರಾಷ್ಟ್ರೀಯ ಹೆದ್ದಾರಿ 212 ತಡೆ ನಡೆಸಿ ಪ್ರತಿಭಟಿಸಿದರು.

ಕಬ್ಬುಬೆಳೆಗಾರರ ಸಂಘ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು ರಾಜ್ಯ ಸರಕಾರದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ದಿಕ್ಕಾರ ಕೂಗಿ, ಮತನೀಡಿದ ನಮಗೆ ನೀರಿಲ್ಲ ಆದರೆ ಪಕ್ಕದ ರಾಜ್ಯಕ್ಕೆ ಮಾತ್ರ ನೀರು ಇದ್ಯಾವ ನ್ಯಾಯ ಮೊದಲು ನಮಗೆ ನೀರಿ ಕೊಡಿ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ತಾಲೂಕು ಕಬ್ಬು ಬೆಳೆಗಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹಾಡ್ಯ ರವಿ ಮಾತನಾಡಿ, ಜಲಾಶಯ ತುಂಬುವ ಮೊದಲೆ  ತಮಿಳುನಾಡಿಗೆ ನೀರು ಬಿಟ್ಟರೆ ಕಬಿನಿ, ಕಾವೇರಿ ಜಲಾಶಯಗಳು ತುಂಬುವುದು ಹೇಗೆ ನಿಮ್ಮನ್ನು ಆಯ್ಕೆ ಮಾಡಿದವರಿಗೆ ದ್ರೋಹ ಮಾಡುವುದು ಸರಿಯೇ ಎಂದು ಪ್ರಶ್ನಿಸಿದರು.

ಈಗಾಗಲೇ ರೈತರು ಮೂರು ವರ್ಷ ಸತತ ಬರ ದಿಂದ ಕಂಗೆಟ್ಟಿದ್ದಾರೆ, ಕೂಡಲೆ ಜಲಾಶಯಗಳಿಂದ ನದಿಗೆ ನೀರು ಹರಿಸುವುದನ್ನು ನಿಲ್ಲಿಸಿ ನಾಲೆಗಳಿಗೆ ಬಿಡಿ ಅಲ್ಲಿಯವರಿಗೂ ರಸ್ತೆ ತಡೆ ಮುಂದುವರಿಯುತ್ತದೆ ಎಂದು ಎಚ್ಚರಿಸಿದರು.

ಹೋರಾಟದ ಸ್ಥಳಕ್ಕೆ ಆಗಮಿಸಿದ ಕಬಿನಿ ನೀರಾವರಿ ಮುಖ್ಯ ಎಂಜಿನಿಯರ್‌ ಮರಿಸ್ವಾಮಿ ಮಾತನಾಡಿ, ರೈತರು ಸಲ್ಲಿಸಿರುವ ಮನವಿಯನ್ನು ಮೇಲಿನ ಅಧಿಕಾರಿಗಳಿಗೆ ತಲುಪಿಸಲಾಗಿದೆ. ಬುಧವಾರ ನೀರಾವರಿ ಸಲಹಾ ಸಮಿತಿ ಸಭೆ ಇದೆ, ಅಲ್ಲಿ ನಾಲೆಗಳಿಗೆ ನೀರು ಬಿಡುವ ಕುರಿತು ಚರ್ಚೆ ನಡೆಯಲಿದ್ದು ಅಲ್ಲಿಯವರಿಗೆ ಅವಕಾಶ ನೀಡಿ ಎಂದರು. 

ಆದರೆ ಇದನ್ನೊಪ್ಪದ ರೈತರು ಕೂಡಲೇ ನೀರು ಹರಿಸಿ ಎಂದು ಪಟ್ಟು ಹಿಡಿದಾಗ ಮರಿಸ್ವಾಮಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತಮ್ಮ ವ್ಯಾಪ್ತಿಯ ಹುಲ್ಲಹಳ್ಳಿ ಹಾಗೂ ರಾಂಪುರ ನಾಲೆಗೆ ಈ ಕ್ಷಣದಿಂದಲೇ ನೀರು ಬಿಡಲಾಗುತ್ತದೆ. ಕಬಿನಿ ಬಲ ಹಾಗೂ ಎಡದಂಡೆಗಳಿಗೆ ಸಲಹಾ ಸಮಿತಿಯ ಸಭೆಯ ನಂತರವೇ ನೀರು ಎಂದು ತಿಳಿಸಿದ ನಂತರ ರೈತರು ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆಯಲ್ಲಿ ಮುಖಂಡರಾದ ಬೊಕ್ಕಳ್ಳಿ ನಂಜುಂಡಸ್ವಾಮಿ, ಅಂಬಳೆ ಮಂಜುನಾಥ್‌, ಸತೀಶ್‌ ರಾವ್‌, ಮಹಾದೇವಸ್ವಾಮಿ, ಕಪಿಲೇಶ, ದೊಡ್ಡೇಗೌಡ, ಸಿರಮಳ್ಳಿ ಸಿದ್ದಪ್ಪ, ಸಿಂಧುವಳ್ಳಿ ಬಸವಣ್ಣ, ಚಿಕ್ಕಸ್ವಾಮಿ, ಹಲ್ಲರೆ ಬಸವಣ. ಶಿವಣ್ಣ ಇದ್ದರು.

ಟಾಪ್ ನ್ಯೂಸ್

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.