ಪಜಿರಡ್ಕ ಟೆಂಟ್‌ ಮನೆಗೆ ಅಧಿಕಾರಿಗಳ ದಂಡು

Team Udayavani, Jul 25, 2017, 12:15 PM IST

Vasathi-24-7.jpg

ಉದಯವಾಣಿ ವರದಿಗೆ ಸ್ಪಂದನೆ; ಅಗತ್ಯ ಕ್ರಮದ ಭರವಸೆ 

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಪಜಿರಡ್ಕದ ಕಾಡಿನಲ್ಲಿ ಟೆಂಟ್‌ ಹಾಕಿ ವಾಸಿಸುತ್ತಿದ್ದ ಮನೆಗಳಿಗೆ ಅಧಿಕಾರಿಗಳ ದಂಡು ಭೇಟಿ ನೀಡತೊಡಗಿದೆ. ರವಿವಾರ ರಜಾದಿನವಾದರೂ ಶಾಸಕರ ಹಾಗೂ ತಹಶೀಲ್ದಾರ್‌ ಸೂಚನೆಯಂತೆ ಕಂದಾಯ ನಿರೀಕ್ಷಕ ರವಿ ಹಾಗೂ ಕಲ್ಮಂಜ ಗ್ರಾಮ ಕರಣಿಕ ರಾಘವೇಂದ್ರ ಅವರು ಭೇಟಿ ನೀಡಿದ್ದಾರೆ. ಎರಡು ದಿನಗಳ ಒಳಗೆ ಈ ಐದೂ ಮನೆಯವರಿಗೆ ನಿವೇಶನ ಮಂಜೂರು ಮಾಡಲು ಅವರು ಕ್ರಮ ಕೈಗೊಂಡಿದ್ದಾರೆ. ಸೋಮವಾರ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಮೋಹನ್‌ ಕುಮಾರ್‌ ಭೇಟಿ ನೀಡಿದರು.

ಶೀಘ್ರ ಮಂಜೂರಾತಿ ಪತ್ರ
ಸೋಮವಾರ ಶಾಸಕ ಕೆ. ವಸಂತ ಬಂಗೇರ ಅವರನ್ನು ಸಂತ್ರಸ್ತರು ಭೇಟಿ ಮಾಡಿದರು. ಮಂಜೂರಾತಿ ಪತ್ರ ಸಿದ್ಧಗೊಳ್ಳುತ್ತಿದ್ದು ಎರಡು ದಿನಗಳ ಒಳಗಾಗಿ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. 1 ವಾರದ ಒಳಗೆ ತಲಾ 2 ಲಕ್ಷ ರೂ.ಗಳಂತೆ ಮಂಜೂರು ಮಾಡಿಸುತ್ತೇನೆ. ಅದರಲ್ಲಿ ಮನೆ ಕಟ್ಟಿಸಬೇಕು ಎಂದು ಹೇಳಿದರು. ನಗರ ಪಂಚಾಯತ್‌ ಅಧ್ಯಕ್ಷ ಮುಗುಳಿ ನಾರಾಯಣ ರಾವ್‌, ಜಿ.ಪಂ. ಸದಸ್ಯೆ ನಮಿತಾ, ದಲಿತ ಹಕ್ಕುಗಳ ಹೋರಾಟಗಾರ ಶೇಖರ್‌ ಎಲ್‌., ಕಾಂಗ್ರೆಸ್‌ ಮುಖಂಡ ಸುಬ್ಬಯ್ಯ  ಶೆಟ್ಟಿ ಉಪಸ್ಥಿತರಿದ್ದರು.

ಉಜಿರೆ – ಧರ್ಮಸ್ಥಳ ರಸ್ತೆ ಅಥವಾ ಉಜಿರೆ ಚಾರ್ಮಾಡಿ ರಸ್ತೆಯಿಂದ ಸಮಾನವಾಗಿ 3 ಕಿಮೀ. ದೂರದಲ್ಲಿ ಕಲ್ಮಂಜ ಗ್ರಾಮ ಪಂಚಾಯತ್‌ ಸರಹದ್ದಿನ ಪಜಿರಡ್ಕ ಎಂಬಲ್ಲಿ ಸರಕಾರಿ ಕಾಡಿನಲ್ಲಿ ಸೂರಿನ ಆಸರೆಯ ನಿರೀಕ್ಷೆಯಲ್ಲಿ ಕೊರಗುತ್ತಿದ್ದ ಕುಟುಂಬಗಳ ಕುರಿತು ಉದಯವಾಣಿ ವರದಿ ಮಾಡಿತ್ತು. ಇವರಿಗೆ ಸರಕಾರದ ಮನೆ, ನಿವೇಶನ, ಶೌಚಾಲಯ, ಪಡಿತರ ಚೀಟಿ, ಚುನಾವಣ ಗುರುತುಪತ್ರ ಸಿಕ್ಕಿಲ್ಲ. ಆಧಾರ್‌ ಕಾರ್ಡು  ಬಿಟ್ಟರೆ ಬೇರೇನಿಲ್ಲ.  ಸುಶೀಲಾ, ದೇವಕಿ, ಥಾಮಸ್‌, ಲಕ್ಷ್ಮೀ ಮಲೆಕುಡಿಯ, ಕಮಲಾ ಮೊಗೇರ ಅವರ ಮನೆಗಳಿವೆ. ‘ಉದಯವಾಣಿ‘ಯಲ್ಲಿ ಈ ಬಗ್ಗೆ ವರದಿ ಪ್ರಕಟವಾದುದನ್ನು ಗಮನಿಸಿ ತತ್‌ಕ್ಷಣ ಸಂಬಂಧಪಟ್ಟವರನ್ನು ಕರೆಸಿ ಕ್ರಮಕ್ಕೆ ಸೂಚಿಸಿದ್ದಾರೆ.

ಟೆಂಟ್‌ ಮನೆಗೆ ಅಧಿಕಾರಿಗಳು ಭೇಟಿ ನೀಡಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.