ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ
Team Udayavani, Jul 25, 2017, 12:43 PM IST
ಹಗರಿಬೊಮ್ಮನಹಳ್ಳಿ: ಕೂಲಿ ಕಾರ್ಮಿಕರಿಗೆ ಹೆಚ್ಚುವರಿ 100 ದಿನಗಳ ಕೆಲಸ ಹಾಗೂ ಕೂಲಿ ಮೊತ್ತವನ್ನು ದಿನಕ್ಕೆ 400 ರೂ. ನೀಡುವಂತೆ ಆಗ್ರಹಿಸಿ ತಾಲೂಕು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು (ಗ್ರಾಕೂಸ್) ತಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಂಘಟನೆಯ ಸಂಚಾಲಕ ಕೋಗಳಿ ಮಲ್ಲೇಶ ಮಾತನಾಡಿ, ಸರಕಾರ ಕೂಲಿ ಕಾರ್ಮಿಕರಿಗೆ ಇನ್ನೂ 100 ದಿನಗಳ ಕಾಲ ಕೆಲಸ ನೀಡುವ ಮೂಲಕ ಕೂಲಿ ಕಾರ್ಮಿಕರಿಗೆ ನೆರವಾಗಬೇಕು. ಕೆಲಸವನ್ನು ನೀಡದೆ ಇದ್ದರೆ ಕೂಲಿ ಕಾರ್ಮಿಕರು ಬೇರೆಡೆ ಗುಳೆ ಹೋಗುವ ಭೀತಿ ಇದೆ. ಗುಳೆಯಿಂದ ಕೂಲಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ. ಕೂಡಲೇ ಹೆಚ್ಚುವರಿ ಮಾನವ
ದಿನ ಹೆಚ್ಚಿಸಬೇಕು. ಕೂಲಿ ಕಾರ್ಮಿಕರಿಗೆ ವಾರಕ್ಕೊಮ್ಮೆ ಕೂಲಿ ನೀಡಬೇಕು. ಮುಂಗಾರು ಕೈಕೊಟ್ಟಿದ್ದರಿಂದ ರೈತರು ಹೊಲಗಳಲ್ಲಿ ಬಿತ್ತನೆ ಮಾಡದೇ ಮಳೆಗಾಗಿ ಕಾಯುತ್ತಿದ್ದಾರೆ. ಸರಕಾರ ಮೋಡ ಬಿತ್ತನೆಗೆ ಮುಂದಾಗಬೇಕು. ರಾಜ್ಯ ಸರಕಾರ ಸಹಕಾರಿ ಸಂಘಗಳಲ್ಲಿನ ಸಾಲ ಮನ್ನಾ ಮಾಡಿರುವುದು ಸ್ವಾಗಾತಾರ್ಹ. ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಸಾಲ ಮನ್ನಾ ಮಾಡಲು ಮುಂದಾಗಬೇಕು ಎಂದರು.
ಪ್ರತಿಭಟನೆಯಲ್ಲಿ 2ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು ಭಾಗವಹಿಸಿದ್ದರು. ಪಟ್ಟಣದ ಈಶ್ವರ ದೇವಸ್ಥಾನದಿಂದ ಬಸವೇಶ್ವರ ರಸ್ತೆಯಲ್ಲಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಗ್ರಾಕೂಸ್ ತಾಲೂಕು ಅಧ್ಯಕ್ಷ ನೆಲ್ಕುದ್ರಿ ದೊಡ್ಡಬಸಪ್ಪ, ಮೈಲಪ್ಪ ಅಂಕಸಮುದ್ರ, ಮೇಘರಾಜ, ರಿಜ್ವಾನ್, ಉಮೇಶ್ ಕೋಗಳಿ, ಅಕ್ಕಮಹಾದೇವಿ, ಹನುಮಂತ ಇಟಗಿ, ಕೋಗಳಿ ಕಮಲಮ್ಮ, ಗಂಗಮ್ಮ, ಕೊಟ್ರಮ್ಮ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.