ಹಾಸ್ಟೆಲ್‌ ನೌಕರರಿಗೆ ಬಾಕಿ ವೇತನ ಪಾವತಿಗೆ ಆಗ್ರಹ


Team Udayavani, Jul 26, 2017, 8:47 AM IST

26GUB-1.jpg

ಕಲಬುರಗಿ: ಸರಕಾರಿ ಹಾಸ್ಟೆಲ್‌ಗ‌ಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ವಿನಾ ಕಾರಣ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಹಲವು ತಿಂಗಳಿಂದ ವೇತನವನ್ನು ಸರಿಯಾಗಿ ನೀಡುತ್ತಿಲ್ಲ. ಆದ್ದರಿಂದ ಕೂಡಲೇ ಬಾಕಿ ಇರುವ ವೇತನ ನೀಡುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಆಗ್ರಹಿಸಿದೆ.

ಸಚಿವರಿಗೆ ಮನವಿ ಸಲ್ಲಿಸಿರುವ ಸಂಘದ ಸದಸ್ಯರು, ಇದಕ್ಕೂ ಮುನ್ನ ಸಚಿವರ ಮನೆ ಮುಂದೆ ಘೋಷಣೆಗಳನ್ನು ಕೂಗಿ
ನ್ಯಾಯಕ್ಕಾಗಿ ಆಗ್ರಹಿಸಿದರು. ಸರಕಾರ ನಿಗದಿ ಪಡಿಸಿರುವ ಕನಿಷ್ಠ ವೇತನ ಜಾರಿ ಮಾಡಬೇಕು. ಇದರಿಂದ ಕಿರುಕುಳ ತಪ್ಪುತ್ತದೆ. ಅಲ್ಲದೆ, ಕಳೆದ ಐದಾರು ತಿಂಗಳಿಂದ ವೇತನ ನೀಡಿಲ್ಲ. ಇದರಿಂದ ಜಿಲ್ಲೆಯ ಹಾಸ್ಟೆಲ್‌ಗ‌ಳಲ್ಲಿ ಕೆಲಸ ಮಾಡುತ್ತಿರುವ ಒಂದು ಸಾವಿರ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರು ಸಂಕಷ್ಟದಲ್ಲಿದ್ದಾರೆ. 2016ರಲ್ಲಿ ನೌಕರರ ಸಂಬಳವನ್ನು ಹೆಚ್ಚು ಮಾಡಿದಾಗಿನಿಂದ ಅಧಿಕಾರಿಗಳು ಕಿರುಕುಳ ನೀಡಿ ನೌಕರರನ್ನು ಕೆಲಸದಿಂದ ತೆಗೆದು ಹಾಕಲು ಮಸಲತ್ತು ಮಾಡುತ್ತಿದ್ದಾರೆ ಎಂದು ಮನವಿಯಲ್ಲಿ ದೂರಿದ್ದಾರೆ. ಇದರಿಂದ 500ರೂ.ಗಳಲ್ಲಿ ಕೆಲಸ ಮಾಡುತ್ತಾ ಬಂದಿರುವ ಸಿಬ್ಬಂದಿ ಈಗ ರಕ್ಷಣೆ ಇಲ್ಲದೆ ಅಪಾಯ ಎದುರಿಸುವಂತಾಗಿದೆ.

ಕಿತ್ತೂರು ರಾಣಿ ಚೆನ್ನಮ್ಮ ವಸತಿನಿಲಯದ ನಾಲ್ವರು ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ಮೊರಾರ್ಜಿ ದೇಸಾಯಿ ವಸತಿ ನಿಲಯಗಳಲ್ಲಿ ನೌಕರರಿಗೆ ನೀವು ವೇತನಕ್ಕೆ ಆಗ್ರಹಿಸಿ ಮಾಡುವ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಕೆಲಸದಿಂದ ತೆಗೆಯುತ್ತೇವೆ ಎಂದು ಭಯವೊಡ್ಡುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ 10-12 ತಿಂಗಳಿಂದ ಸಂಬಂಳ ನೀಡಿಲ್ಲ. ಹಣ ನೀಡಿದವರಿಗೆ ಸಂಬಳ ನೀಡಲಾಗುತ್ತಿದೆ ಎಂದು ದೂರಿದ್ದಾರೆ. ಕಳೆದ 19ರಿಂದ ಬಾಕಿ ವೇತನಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿದ್ದರೂ, ನಮ್ಮ ಗೋಳು ಯಾರೂ ಕೇಳುತ್ತಿಲ್ಲ. ಯಾವ ಅಧಿಕಾರಿಯೂ ನಮ್ಮ ಬೇಡಿಕೆಯನ್ನು ಕೇಳಲು ತಯಾರಿಲ್ಲ. ಆದ್ದರಿಂದ ಕೂಡಲೇ ನ್ಯಾಯ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಜಿಲ್ಲಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಕಾರ್ಯದರ್ಶಿ ಮೋಹನ ಕಟ್ಟಿಮನಿ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.