ರಾಜ್ಯಾದ್ಯಂತ ಸ್ಮಾರ್ಟ್‌ಗ್ರಿಡ್‌ ವ್ಯವಸ್ಥೆ ವಿಸ್ತರಣೆ


Team Udayavani, Jul 26, 2017, 12:10 PM IST

mys2.jpg

ಮೈಸೂರು: ದೇಶದಲ್ಲೇ ಪ್ರಥಮಬಾರಿಗೆ ಪ್ರಾಯೋಗಿಕವಾಗಿ ಕೈಗೊಂಡಿರುವ ಸ್ಮಾರ್ಟ್‌ಗ್ರಿಡ್‌ ಯೋಜನೆ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಮೈಸೂರು ಸೇರಿದಂತೆ ರಾಜ್ಯದ ಇನ್ನಿತರ ನಗರಗಳಿಗೂ ವಿಸ್ತರಿಸಲು ಕ್ರಮಕೈಗೊಳ್ಳುವುದಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದರು. ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಕಚೇರಿಗೆ ಭೇಟಿ ನೀಡಿ ಪ್ರಾಯೋಗಿಕ ಸ್ಮಾರ್ಟ್‌ಗ್ರಿಡ್‌ ಯೋಜನೆಯ ಪ್ರಗತಿ ಪರಿಶೀಲಿಸಿ, ಯೋಜನೆಯ ಕಾರ್ಯದ ಬಗ್ಗೆ ಮಾಹಿತಿ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ವರ್ಷ ಕೇಂದ್ರ ಸರ್ಕಾರದೊಂದಿಗೆ ಮಾಡಿಕೊಂಡಿರುವ ಒಪ್ಪಂದ ದಂತೆ ಸ್ಮಾರ್ಟ್‌ಗ್ರಿಡ್‌ ಯೋಜನೆ ಆರಂಭಿಸಲಾಗಿದ್ದು, ಅದರಂತೆ ಮೊದಲ ಬಾರಿಗೆ ಮೈಸೂರಿನಲ್ಲಿ ಸ್ಮಾರ್ಟ್‌ಗ್ರಿಡ್‌ ಯೋಜನೆಯನ್ನು ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸ್ಮಾರ್ಟ್‌ಗ್ರಿಡ್‌ ಯೋಜನೆಯನ್ನು ಮೈಸೂರಿನ ಜತೆಗೆ ಹುಬ್ಬಳ್ಳಿ, ಬೆಂಗಳೂರು ಹಾಗೂ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯಾಪ್ತಿಗೆ ವಿಸ್ತರಿಸಲು ಸರ್ಕಾರ ಮುಂದಾಗಿದೆ ಎಂದರು.

ಮೈಸೂರಿನಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಆರಂಭಿಸಿರುವ ಸ್ಮಾರ್ಟ್‌ಗ್ರಿಡ್‌ ಯೋಜನೆಯಡಿ ವಿವಿ ಮೊಹಲ್ಲಾ ವ್ಯಾಪ್ತಿಯ 25 ಸಾವಿರ ಮನೆಗಳಿಗೆ 32.56 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‌ ಮೀಟರ್‌ಗಳನ್ನು ಅಳವಡಿಸಲಾಗಿದೆ. ಬಳಿಕ ಸ್ಮಾರ್ಟ್‌ ಗ್ರಿಡ್‌ ತಂತ್ರಜಾnನದ ಮೂಲಕ ಈ ಸ್ಮಾರ್ಟ್‌ ಮೀಟರ್‌ಗಳನ್ನು ನಿಯಂತ್ರಿಸುವ ವ್ಯವಸ್ಥೆ ಆರಂಭಿಸಲಾಗಿದ್ದು, ಇದು ಸಂಪೂರ್ಣವಾಗಿ ಯಶಸ್ವಿಯಾಗಿದೆ.

ಹೀಗಾಗಿ ಸೆಸ್ಕ್ ವ್ಯಾಪ್ತಿಯ ನಾಲ್ಕು ಜಿಲ್ಲೆಗಳಲ್ಲೂ ಈ ಯೋಜನೆ ಅನುಷ್ಠಾನಗೊಳಿಸಲು ಯೋಜನೆ ಸಿದ್ದಪಡಿಸಲಾಗಿದೆ. ಅದೇ ರೀತಿ 400 ಕೋಟಿ ರೂ. ವೆಚ್ಚದಲ್ಲಿ ಸೆಸ್ಕ್ ವ್ಯಾಪ್ತಿಯ 4 ಲಕ್ಷ ಗ್ರಾಹಕರನ್ನು ಈ ಯೋಜನೆಯ ವ್ಯಾಪ್ತಿಗೆ ಒಳಪಡಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರದೊಂದಿಗೆ 14 ರಾಜ್ಯಗಳಲ್ಲಿ ಈ ಪ್ರಾಯೋಗಿಕ ಯೋಜನೆ ಅಳವಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಕರ್ನಾಟಕ ರಾಜ್ಯ ಮಾತ್ರವೇ ಇದರಲ್ಲಿ ಯಶಸ್ವಿಯಾಗಿದೆ. ಈ ಹಿನ್ನೆಲೆ ಮುಂದಿನ 2018ರೊಳಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶೇ.100 ಸ್ಮಾರ್ಟ್‌ ಮೀಟರ್‌ಗಳನ್ನು ಅಳವಡಿಸಿ, ಇಂಧನ ಸೋರಿಕೆ ತಡೆಯುವುದರ ಜತೆಗೆ ಕೃಷಿ ಹೊರತುಪಡಿಸಿ 500 ಯೂನಿಟ್‌ ವಿದ್ಯುತ್‌ ಬಳಕೆ ಮಾಡುವ ಗ್ರಾಹಕರನ್ನು 2017ರೊಳಗೆ ಸ್ಮಾರ್ಟ್‌ಗ್ರಿಡ್‌ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ ಹಾಗೂ 2019 ರೊಳಗೆ 200 ಯೂನಿಟ್‌ ಬಳಕೆದಾರರನ್ನು ಸಹ ಈ ಯೋಜನೆ ವ್ಯಾಪ್ತಿಗೆ ಸೇರಿಸುವುದಾಗಿ ಒಪ್ಪಂದದಲ್ಲಿ ಭ ರವಸೆ ನೀಡಲಾಗಿದೆ ಎಂದರು.

ಈ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಶೇ.30 ಅನುದಾನ ನೀಡಲಿದ್ದು, ಉಳಿದ ಹಣವನ್ನು ರಾಜ್ಯ ಸರ್ಕಾರ ಭರಿಸಲಿದ್ದು, ಗ್ರಾಹಕರಿಗೆ ಯಾವುದೇ ಹೊರೆಯಾಗುವುದಿಲ್ಲ. ಬದಲಿಗೆ ಹೆಚ್ಚುವರಿ ಹಣವನ್ನು ಗ್ರಾಹಕರಿಂದ ಹಂತ ಹಂತವಾಗಿ ವಿದ್ಯುತ್‌ ಶುಲ್ಕದೊಂದಿಗೆ ವಸೂಲಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಸೆಸ್ಕ್ ಕಚೇರಿಗೆ ಭೇಟಿ ನೀಡಿದ ಅವರು ಸ್ಮಾರ್ಟ್‌ ಗ್ರಿಡ್‌ ಯೋಜನೆಯ ಕಾರ್ಯ ಚಟುವಟಿಕೆ, ತಂತ್ರಜಾnನದ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್‌ಗಳಿಂದ ಮಾಹಿತಿ ಪಡೆದರು.  ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಡಿ.ಕಿರಣ್‌, ಸ್ಮಾರ್ಟ್‌ಗ್ರಿಡ್‌ ಯೋಜನೆ ಎಂಜಿನಿಯರ್‌ ಅಫ್ತಾಬ್‌ ಪಾಷಾ ಇತರರು ಇದ್ದರು.

ಇತರೆಡೆಗೂ ವಿಸ್ತರಣೆ: ವಿದ್ಯುತ್‌ ಬಳಕೆಯಲ್ಲಿ ಗ್ರಾಹಕರ ಶಿಸ್ತು ಅತ್ಯಂತ ಮುಖ್ಯವಾಗಲಿದ್ದು, ಈ ಹಿನ್ನೆಲೆ ಸ್ಮಾರ್ಟ್‌ಗ್ರಿಡ್‌ ಅತ್ಯುತ್ತಮ ಯೋಜನೆಯಾಗಿದೆ. ಈ ಯೋಜನೆ ಅಳವಡಿಕೆಯಿಂದ ಯಾವುದೇ ಗ್ರಾಹಕ ನಿಗದಿಗಿಂತ ಹೆಚ್ಚುವರಿಯಾಗಿ ವಿದ್ಯುತ್‌ ಬಳಕೆ, ಕಳವು ಮಾಡುವುದು ಸೇರಿದಂತೆ ಕಾನೂನು ಬಾಹಿರವಾಗಿ ವಿದ್ಯುತ್‌ ಬಳಕೆ ಮಾಡಲು ಸಾಧ್ಯವಿಲ್ಲ.

ಒಂದೊಮ್ಮೆ ಈ ರೀತಿ ಮಾಡಿದ್ದೇ ಆದಲ್ಲಿ ಸ್ಥಳದಲ್ಲೇ ಈ ಬಗ್ಗೆ ಮಾಹಿತಿ ದೊರೆಯಲಿದ್ದು, ಇದರಿಂದ ಸಂಬಂಧಪಟ್ಟ ಗ್ರಾಹಕರಿಗೆ ದಂಡ ವಿಧಿಸಬಹುದಾಗಿದೆ. ಹೀಗಾಗಿ ಸ್ಮಾರ್ಟ್‌ಗ್ರಿಡ್‌ ಯೋಜನೆಯಿಂದ ಇಲಾಖೆಗೆ ಲಾಭ ದೊರೆಯುವ ಜತೆಗೆ ಗ್ರಾಹಕರಿಗೂ ಉಪಯುಕ್ತವಾಗಲಿದೆ. ಹೀಗಾಗಿ ಬೆಸ್ಕಾಂ, ಮೆಸ್ಕಾಂ ಸೇರಿದಂತೆ ಇತರೆ ಕಂಪನಿಗಳಿಗೆ ವಿಸ್ತರಿಸಲು ಟೆಂಡರ್‌ ಕರೆಯಲಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

ರಾಜ್ಯದಲ್ಲಿ ಬರಗಾಲದ ಹಿನ್ನೆಲೆ ವಿದ್ಯುತ್‌ ಉತ್ಪಾದನೆಯ ಜಲ ಸ್ಥಾವರಗಳು ಬತ್ತಿ ಹೋಗಿದೆ. ಆದರೂ ಗ್ರಾಹಕರಿಗೆ ವಿದ್ಯುತ್‌ ಪೂರೈಕೆಯಲ್ಲಿ ತೊಂದರೆಯಾಗದಂತೆ ಕ್ರಮವಹಿಸಲು 1 ಸಾವಿರ ಮೆಗಾ ವ್ಯಾಟ್‌ ವಿದ್ಯುತ್‌ ಖರೀದಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ವಿದ್ಯುತ್‌ ಉತ್ಪಾದನೆಯಲ್ಲಿ ರಾಜ್ಯ ಸರ್ಕಾರ ಸ್ವಾವಲಂಬಿಯಾಗಲಿದ್ದು, ಬೇರೆ ರಾಜ್ಯಗಳಿಗೆ ವಿದ್ಯುತ್‌ ಪೂರೈಕೆ ಮಾಡಲಿದೆ.
-ಡಿ.ಕೆ.ಶಿವಕುಮಾರ್‌, ಇಂಧನ ಸಚಿವ.

ಸ್ಮಾರ್ಟ್‌ಗ್ರಿಡ್‌ ಯೋಜನೆ
* ಉತ್ತಮ ಗುಣಮಟ್ಟದ ಅಡಚಣೆ ರಹಿತ ವಿದ್ಯುತ್‌ ಸಿಗಲಿದೆ.
* ವಿದ್ಯುತ್‌ ವಿತರಣೆಯ ಸಮಗ್ರ ಮಾಹಿತಿ ಸಿಗುವುದರಿಂದ ಅನಿಯಮಿತ ಲೋಡ್‌ ಶೆಡ್ಡಿಂಗ್‌ ಸಮಸ್ಯೆ ನಿವಾರಣೆಯಾಗಲಿದೆ.
* ಗ್ರಾಹಕರು ತಮ್ಮ ಮನೆಯ ನಿರ್ದಿಷ್ಟ ಸಮಯದ ವಿದ್ಯುತ್‌ ಉಪಯೋಗವನ್ನು ಆನ್‌ಲೈನ್‌ ಮೂಲಕ ತಿಳಿಯಬಹುದು.
* ನಿಗದಿಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡಿದರೆ ಗ್ರಾಹಕರಿಗೆ ಎಚ್ಚರಿಕೆ ನೀಡುವ ಜತೆಗೆ ದಂಡ ವಿಧಿಸಬಹುದು. ಇದರಿಂದ ವಿದ್ಯುತ್‌ ದುರ್ಬಳಕೆಯಾಗದು.
* ಮಾಪಕ ಬಿಲ್‌ ವಿತರಿಸಲು, ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ಮತ್ತು ಮರು ಸಂಪರ್ಕ ಕಲ್ಪಿಸಲು ಸಿಬ್ಬಂದಿ ಅವಶ್ಯಕತೆ ಇಲ್ಲ.

ಟಾಪ್ ನ್ಯೂಸ್

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.