ಆಗಸ್ಟ್‌ನಿಂದ ಹುಬ್ಬಳ್ಳಿ-ಬೆಂಗಳೂರು ವಿಮಾನ ಸಂಚಾರ
Team Udayavani, Jul 26, 2017, 12:31 PM IST
ಹುಬ್ಬಳ್ಳಿ: ಆಗಸ್ಟ್ ಮೊದಲ ವಾರದಿಂದ ಹುಬ್ಬಳ್ಳಿ-ಬೆಂಗಳೂರು ಪ್ರತಿದಿನ ಏರ್ ಇಂಡಿಯಾ ವಿಮಾನ ಸಂಚಾರಕ್ಕೆ ಏರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಲೋಹಾನಿ ಹೇಳಿದ್ದಾರೆಂದು ಸಂಸದ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಏರ್ ಇಂಡಿಯಾ ಮುಖ್ಯ ಕಚೇರಿಯಲ್ಲಿ ಮಂಗಳವಾರ ಸಂಸದ ಪ್ರಹ್ಲಾದ ಜೋಶಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ ಅವರೊಂದಿಗೆ ಎಂ.ಡಿ. ಅಶ್ವಿನ್ ಅವರನ್ನು ಭೇಟಿಯಾಗಿ ಬೆಂಗಳೂರು-ಹುಬ್ಬಳ್ಳಿ ಏರ್ ಇಂಡಿಯಾ ವಿಮಾನವು ಪ್ರತಿದಿನ ಹಾರಾಟ ನಡೆಸುವಂತೆ ಆಗ್ರಹಿಸಲಾಯಿತು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಂಡಿ ಲೋಹಾನಿ, ಆಗಸ್ಟ್ ಮೊದಲ ವಾರದಿಂದ ಬೆಂಗಳೂರು-ಹುಬ್ಬಳ್ಳಿ ಪ್ರತಿದಿನ ಹಾರಾಟ ನಡೆಸಲಾಗುವುದೆಂದು ತಿಳಿಸಿದ್ದಾರೆ. ಇದರಿಂದ ಬಹುದಿನಗಳ ನಮ್ಮ ಒತ್ತಾಸೆಯಾದ ಪ್ರತಿದಿನ ರಾಜಧಾನಿಯೊಂದಿಗೆ ವಾಯು ಸಂಪರ್ಕ ಕಲ್ಪಿಸುವ ಕಾರ್ಯ ಕೈಗೂಡಿದಂತಾಗಿದೆ.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಬೋಯಿಂಗ್ ವಿಮಾನಗಳ ಹಾರಾಟಕ್ಕೆ ಯೋಗ್ಯವಾದ ರನ್‌ವೇ ನಿರ್ಮಿಸಿದ್ದು, ಇದು ಬೋಯಿಂಗ್ ವಿಮಾನಗಳ ಹಾರಾಟಕ್ಕೆ ಯೋಗ್ಯವಾಗಿದೆಯೆಂದು ಎಂಡಿಯವರಿಗೆ ವಿವರಿಸಲಾಯಿತು.
ಹುಬ್ಬಳ್ಳಿ-ಮುಂಬೈ ನಡುವೆ ಸಂಪರ್ಕ ಕಲ್ಪಿಸಲು ಬಹುದಿನಗಳ ಒತ್ತಾಯವನ್ನು ಈಡೇರಿಸುವಂತೆ ಈ ವೇಳೆ ಕೋರಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಎಂಡಿ ಅಶ್ವಿನ್, ಈ ಮಾರ್ಗ ಮಧ್ಯ ವಿಮಾನ ಹಾರಾಟಕ್ಕೆ ಪೂರ್ವಭಾವಿಯಾಗಿ ಕೈಗೊಳ್ಳಬೇಕಾದ ತಾಂತ್ರಿಕ ಹಾಗೂ ವೇಳಾಪಟ್ಟಿ ಹೊಂದಾಣಿಕೆ ಕಾರ್ಯ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿದರು.
ಇದೊಂದು ಉತ್ತಮ ಸಕಾರಾತ್ಮಕ ಬೆಳವಣಿಗೆಯಾಗಿದ್ದು, ಕೆಲವೇ ದಿನಗಳಲ್ಲಿ ಹುಬ್ಬಳ್ಳಿ, ಮುಂಬೈ ನಗರದೊಂದಿಗೆ ವಾಯು ಸಂಪರ್ಕ ಹೊಂದಲಿದೆಂದು ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.