ಕೈಯಲ್ಲಿದ್ದ ಫೋನ್ ಜೀವ ಉಳಿಸಿತು! ಕಟ್ಟಡದ ಅವಶೇಷಗಳಡಿ 15 ಗಂಟೆ
Team Udayavani, Jul 26, 2017, 4:21 PM IST
ಮುಂಬಯಿ:ಇಲ್ಲಿನ ಘಾಟ್‌ಕೋಪರ್‌ನಲ್ಲಿ ಮಂಗಳವಾರ ಕುಸಿದ 4 ಅಂತಸ್ತಿನ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯನ್ನು 15 ಗಂಟೆಗಳ ಬಳಿಕ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಟ್ಟಡದಲ್ಲಿದ್ದ ನಿವಾಸದಲ್ಲಿ ರಾಜೇಶ್ ಧೋಶಿ ಎಂಬ 57 ವರ್ಷದ ವ್ಯಕ್ತಿ ಒಬ್ಬರೇ ಇದ್ದರು, ಪತ್ನಿ ಮತ್ತು ಪುತ್ರ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಕಟ್ಟಡ ಕುಸಿದು ಗೊಡೆಯ ತುಂಡಿನಡಿ ಕಾಲು ಸಿಲುಕಿಕೊಂಡು ಏಳಲು ಸಾಧ್ಯವಾಗದೆ ಪರದಾಡಿದ್ದಾರೆ. ಈ ವೇಳೆ ಕೈಯಲ್ಲಿದ್ದ ಮೊಬೈಲ್‌ನಿಂದ ಪುತ್ರನಿಗೆ ಕರೆ ಮಾಡಿ ರಕ್ಷಿಸುವಂತೆ ಕೇಳಿದ್ದಾರೆ.
ತಕ್ಷಣ ಸ್ಥಳಕ್ಕಾಗಮಿಸಿದ ಪುತ್ರ ಎನ್‌ಡಿಆರ್‌ಎಫ್ ಸಿಬಂದಿಗೆ ಮಾಹಿತಿ ನೀಡಿ ರಕ್ಷಣೆ ಮಾಡುವಂತೆ ಕೋರಿದ್ದಾರೆ. ಅತ್ಯಂತ ಆಪಾಯಕಾರಿ ಸನ್ನಿವೇಶದಲ್ಲಿ ಸತತ 15 ಗಂಟೆಗಳ ಕಾರ್ಯಾಚರಣೆ ನಡೆಸಿ ರಾಜೇಶ್‌ರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ದುರಂತದಲ್ಲಿ 17 ಮಂದಿ ಸಾವನ್ನಪ್ಪಿ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದುರಂತಕ್ಕೆ ಸಂಬಂಧಿಸಿ ಕಟ್ಟಡದ ಮಾಲಿಕ ಶಿವಸೇನೆ ನಾಯಕನನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.