‘ಆಟಿಯ ಅನುಭವ ಮಹತ್ವದ್ದು ‘

Team Udayavani, Jul 27, 2017, 9:50 AM IST

AAti-26-7.jpg

ವಿಟ್ಲ: ಆಟಿ ಆಚರಣೆಯ ಕಾರ್ಯಕ್ರಮಗಳು ನೈಜ ಅನುಭವ ಒದಗಿಸಿದಾಗ ಮಾತ್ರ ಮಹತ್ವ ಅರ್ಥವಾಗಲು ಸಾಧ್ಯ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಡಿ.ಎಂ.ಕುಲಾಲ್‌ ಹೇಳಿದರು. ಅವರು ಬುಧವಾರ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಆಟಿಡೊಂಜಿ ಕೂಟವನ್ನು ಉದ್ಘಾಟಿಸಿ, ಆಟಿ -ಆಚರಣೆ-ನಂಬಿಕೆ ಕುರಿತಾಗಿ ಉಪನ್ಯಾಸ ನೀಡಿದರು.

ಹಿಂದಿನ ಕಾಲದಿಂದಲೂ ಹಿರಿಯರು ಆಟಿ ತಿಂಗಳಿಗೆ ವಿಶೇಷ ಒತ್ತು ನೀಡುತ್ತಾ ಬಂದಿರುವುದಕ್ಕೆ ಹಲವು ಕಾರಣಗಳಿವೆ. ಈ ನಂಬಿಕೆಗಳು ಮೂಢನಂಬಿಕೆಗಳಲ್ಲ, ಇದರ ಹಿಂದೆ ವೈಜ್ಞಾನಿಕ ಸತ್ಯ ಅಡಗಿದೆ ಎಂಬುದು ಇತ್ತೀಚಿನ ದಿನಗಳಲ್ಲಿ ಋಜುವಾತಾಗುತ್ತಾ ಬಂದಿದೆ. ನಮ್ಮ ಹಿರಿಯರು ಅಂತರ್ಜಾಲವಿಲ್ಲದ ಕಾಲದಲ್ಲೂ ಅಂತರ್‌ಜ್ಞಾನದ ಮೂಲಕ ಸತ್ಯವನ್ನು ಗ್ರಹಿಸಿಕೊಂಡಿದ್ದಾರೆ. ಆಟಿಕಳೆಂಜವೂ ಕೂಡ ಆಪ್ತಸಮಾಲೋಚಕನಂತೆ ಜನರ ಕಷ್ಟಪರಿಹರಿಸುವ ಕಾರ್ಯ ನಡೆಸುತ್ತಿದೆ ಎಂದರು.

ಸಂಚಾಲಕ ಪ್ರಹ್ಲಾದ್‌ ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿ, ಮಾತನಾಡಿ ಮಕ್ಕಳು ಸಸ್ಯಪ್ರಭೇದಗಳ ಬಗ್ಗೆ ಹೆಚ್ಚು ಅರಿವು ಬೆಳೆಸಿಕೊಳ್ಳಬೇಕು. ಮರೆಯಾಗುತ್ತಿರುವ ಕೃಷಿಪದ್ಧತಿ, ಔಷಧೀಯ ಗುಣವುಳ್ಳ ಸಸ್ಯಗಳ ಕುರಿತಾಗಿ ಹಿರಿಯರಿಂದ ತಿಳಿದುಕೊಳ್ಳಬೇಕು ಎಂದರು. ಆಡಳಿತಾಧಿಕಾರಿ ಸಿ.ಶ್ರೀಧರ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಹಿರಿಯರು ಬಾಳಿ ಬದುಕಿದ ರೀತಿ, ಪದ್ಧತಿ ನಮ್ಮ ಬದುಕಿಗೆ ಆಧಾರ ಎಂಬುದನ್ನು ನಾವು ತಿಳಿದುಕೊಳ್ಳಬೇಕು. ಆದರೆ ಭೂತಕಾಲವನ್ನು ಮರೆತು ವರ್ತಮಾನದಲ್ಲಿ ಬದುಕುತ್ತಿರುವ ನಮ್ಮಲ್ಲಿ ಈಗ ಮನುಷ್ಯತ್ವ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು.

ಆಡಳಿತ ಮಂಡಳಿ ಕಾರ್ಯದರ್ಶಿ ನಾರಾಯಣ ಶೆಟ್ಟಿ ಕೊಂಬಿಲ, ಪುಷ್ಪಲತಾ ಎಸ್‌. ನಾಯ್ಕ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಉಪಾಧ್ಯಕ್ಷೆ ಲಕ್ಷ್ಮೀ ಟೀಚರ್‌, ಪ್ರೌಢಶಾಲಾ ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ ವಿ.ಶೆಟ್ಟಿ, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಗ್ರೇಸ್‌ ಪಿ. ಸಲ್ದಾನ ಉಪಸ್ಥಿತರಿದ್ದರು. ಶಿಕ್ಷಕಿ ಲೀಲಾ ಸ್ವಾಗತಿಸಿ, ಶುಭಾ.ಕೆ ವಂದಿಸಿದರು. ಸುಧಾ ರಾವ್‌ ಕಾರ್ಯಕ್ರಮ ನಿರ್ವಹಿಸಿದರು. ವೇದಿಕೆಯ ಮುಂಭಾಗದಲ್ಲಿ ವಿವಿಧ ಔಷಧೀಯ ಸಸ್ಯಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ವಿದ್ಯಾರ್ಥಿನಿ ಗ್ರೀಷ್ಮಾ ಆಳ್ವ ಔಷಧೀಯ ಸಸ್ಯಗಳ ಕುರಿತು ಮಾಹಿತಿ ನೀಡಿದರು. ಸಭಾಕಾರ್ಯಕ್ರಮದ ಬಳಿಕ ಶಾಲಾಮಕ್ಕಳಿಂದ ಆಟಿ, ತುಳುನಾಡು, ಕೃಷಿಪದ್ಧತಿಯನ್ನು ಬಿಂಬಿಸುವ ವೈವಿಧ್ಯಮಯ ಸಾಂಸ್ಕೃತಿಕ  ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

ud

Puttur: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.