ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ ಹೈಕೋರ್ಟ್ ಡಬಲ್ ಶಾಕ್
Team Udayavani, Jul 27, 2017, 8:05 AM IST
ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪರ ಇನ್ನು ಮುಂದೆ ಯಾವುದೇ ಪ್ರಕರಣದಲ್ಲಿ ವಾದ ಮಂಡಿಸದಿರಲು ಹಿರಿಯ ವಕೀಲ ರಾಮ್ ಜೇಠ್ಮಲಾನಿ ನಿರ್ಧರಿಸಿದ್ದಾರೆ. ಇದೇ ವೇಳೆ ತಮಗೆ ನೀಡಬೇಕಿದ್ದ 2 ಕೋಟಿ ರೂ. ಫೀಸ್ ಅನ್ನು ಅವರೇ ಇಟ್ಟುಕೊಳ್ಳಲಿ ಎಂದಿದ್ದಾರೆ. ಬೆನ್ನಿಗೇ ಸೂಕ್ತ ದಾಖಲೆ ಒದಗಿಸದೇ ಇರುವ ಹಿನ್ನೆಲೆಯಲ್ಲಿ ಕೇಜ್ರಿವಾಲ್‌ಗೆ ದಿಲ್ಲಿ ಹೈಕೋರ್ಟ್ ಹತ್ತು ಸಾವಿರ ರೂ. ದಂಡ ವಿಧಿಸಿದೆ. ಈ ಮೂಲಕ ದಿಲ್ಲಿ ಮುಖ್ಯಮಂತ್ರಿಗೆ ಭಾರಿ ಹಿನ್ನಡೆ ಯಾಗಿದೆ. ಜತೆಗೆ ಮಾನಹಾನಿ ಕಾರಕವಾಗುವಂತೆ ಮಾತನಾಡ ದಂತೆ ದಿಲ್ಲಿ ಹೈಕೋರ್ಟ್ ಆದೇಶ ನೀಡಿದೆ.
ದಿಲ್ಲಿ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಪ್ರಕರಣಕ್ಕೆ ಸಂಬಂಧಿಸಿ ಇಬ್ಬರ ನಡುವೆ ಹುಟ್ಟಿಕೊಂಡ ಆರೋಪ-ಪ್ರತ್ಯಾರೋಪ ಈಗ ತಾರಕಕ್ಕೆ ಏರಿದೆ. ಇದರಿಂದಾಗಿ ಕೇಜ್ರಿವಾಲ್ ಈಗ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಎರಡು ಮಾನನಷ್ಟ ಮೊಕದ್ದಮೆ ಯಿಂದ ಜೇಟಿÉ ಬೇಡಿಕೆ ಇಟ್ಟಂತೆ ತಲಾ 10 ಕೋಟಿ ರೂ. (ಒಟ್ಟು 20 ಕೋಟಿ ರೂ.) ಹಾಗೂ ಜೇಠ್ಮಲಾನಿಗೆ ನೀಡಬೇಕಾದ ಫೀಸ್ 2 ಕೋಟಿ ಸೇರಿ ಒಟ್ಟು 22 ಕೋಟಿ ರೂ. ತೆರಬೇಕಾದ ಸಂದರ್ಭ ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.