ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‌ನಿಂದ ಧರ್ಮದ ಪ್ರಸ್ತಾಪ: ಮುತಾಲಿಕ್
Team Udayavani, Jul 27, 2017, 10:10 AM IST
ಚಿಕ್ಕಮಗಳೂರು: ಕಳೆದ 50 ವರ್ಷಗಳಿಂದಲೂ ಸಮಾಜ ಹಾಗೂ ಧರ್ಮವನ್ನು ಒಡೆದು ಆಳುತ್ತಿರುವ ಕಾಂಗ್ರೆಸ್ ಈಗ ರಾಜಕೀಯ ಲಾಭಕ್ಕಾಗಿ ಲಿಂಗಾಯಿತ ಧರ್ಮದ ವಿಚಾರ ಎತ್ತಿದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಿಂದಿನಿಂದಲೂ ಬ್ರಿಟೀಷರಂತೆಯೇ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಈವರೆಗೂ ಅದು ಸಮುದಾಯ, ಧರ್ಮ ಹಾಗೂ ಸಂಘಟನೆಗಳನ್ನು
ಒಡೆದು ಕುತಂತ್ರದ ರಾಜಕಾರಣವನ್ನೇ ಮಾಡುತ್ತಿತ್ತು. ವೀರಶೈವ-ಲಿಂಗಾಯಿತ ಎಂದು ಎರಡು ಹೆಸರುಗಳಿದ್ದರೂ
ಅದು ಒಂದೇ ಆತ್ಮವಿದ್ದಂತೆ. ಈವರೆಗೂ ಇಲ್ಲದ ವಿಚಾರವನ್ನು ಕಾಂಗ್ರೆಸ್ ಈಗೇಕೆ ಎತ್ತಿದೆ ಎಂದು ಪ್ರಶ್ನಿಸಿದರು.
ಸ್ವಾಮೀಜಿಗಳು, ಸಮಾಜದ ಮುಖಂಡರು ಕಾಂಗ್ರೆಸ್ ಪಕ್ಷದ ಈ ಕುತಂತ್ರಕ್ಕೆ ಬಲಿಯಾಗಬಾರದು. ಈಗಾಗಲೇ ಹಿಂದೂ ಸಮಾಜ ಒಡೆದು ಛಿದ್ರವಾಗಿದೆ. ಇದನ್ನು ಮತ್ತಷ್ಟು ಛಿದ್ರಗೊಳಿಸಲು ಮಾಡಲು ಅವಕಾಶ ಮಾಡಿಕೊಡಬಾರದು ಎಂದು ಮನವಿ ಮಾಡಿಕೊಂಡರು.
ಮತ್ತೂಂದು ಅಯೋಧ್ಯೆ: ದತ್ತಪೀಠ ವಿವಾದವನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು. ಹಿಂದೂಗಳಿಗೆ ದತ್ತಪೀಠ ಬಿಟ್ಟುಕೊಟ್ಟು, ನಾಗೇನಹಳ್ಳಿಯಲ್ಲಿ ಇರುವ ದರ್ಗಾವನ್ನು ಮುಸ್ಲಿಮರಿಗೆ ಬಿಟ್ಟುಕೊಡಬೇಕು. ಈ ಕೆಲಸವನ್ನು ಬೇಗನೆ
ಮಾಡಬೇಕು. ಹಿಂದೂಗಳ ತಾಳ್ಮೆ ಪರೀಕ್ಷಿಸಬಾರದು. ಇಲ್ಲವಾದಲ್ಲಿ ಇದು ಮತ್ತೂಂದು ಅಯೋಧ್ಯೆ ಆಗುವುದರಲ್ಲಿ
ಯಾವುದೇ ಸಂಶಯವಿಲ್ಲ ಎಂದು ಎಚ್ಚರಿಸಿದರು.
ರಾಜಕೀಯ ಪಕ್ಷಗಳಿಗೆ ಈ ವಿವಾದ ಬಗೆಹರಿಸುವ ಇಚ್ಚಾಶಕ್ತಿ ಇಲ್ಲ. ಈ ವಿಚಾರದಲ್ಲಿ ಬಿಜೆಪಿಯೂ ಹೊರತಾಗಿಲ್ಲ. 5 ವರ್ಷಗಳ ಕಾಲ ರಾಜ್ಯದಲ್ಲಿ ಅವರು ಆಡಳಿತ ನಡೆಸಿದರು. ಅವರು ಅಧಿಕಾರಕ್ಕೆ ಬಂದಿದ್ದೂ ದತ್ತಪೀಠದ ವಿಚಾರದಿಂದಲೆ. ಆಗ ಅವರೇಕೆ ಸಮಸ್ಯೆ ಬಗೆಹರಿಸಲಿಲ್ಲ ಎಂದು ಪ್ರಶ್ನಿಸಿದ ಮುತಾಲಿಕ್, ಈ ವಿವಾದವನ್ನು ಜೀವಂತವಾಗಿಟ್ಟು ಅದರ
ಲಾಭ ಪಡೆಯುವ ಹುನ್ನಾರ ರಾಜಕೀಯ ಪಕ್ಷಗಳದ್ದಾಗಿದೆ. ಈ ವಿವಾದದ ಮೂಲಕ ಹಿಂದೂ ಭಕ್ತರನ್ನು ಹಾಗೂ ಸಂಘಟನೆಗಳ ಮುಖಂಡರ ಬಲಿ ಪಡೆಯಲಾಗುತ್ತಿದೆ ಎಂದು ದೂರಿದರು.
ಯೋಗ್ಯರಲ್ಲ: ರಮಾನಾಥ ರೈ ಅವರನ್ನು ಗೃಹ ಸಚಿವರನ್ನಾಗಿ ನೇಮಿಸಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಒಂದು ಜಿಲ್ಲೆಯನ್ನೇ ಸರಿಯಾಗಿ ನೋಡಿಕೊಳ್ಳಲು ಆಗದ ವ್ಯಕ್ತಿಯಿಂದ ಗೃಹಖಾತೆಯಂತಹ ಪ್ರಮುಖ ಸ್ಥಾನವನ್ನು ನಿಭಾಯಿಸಲು ಸಾಧ್ಯವೆ ಎಂದು ಪ್ರಶ್ನಿಸಿದರು. ರಮಾನಾಥ ರೈ ಅವರಿಗೆ ಗೃಹ ಸಚಿವ ಸ್ಥಾನ ನೀಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಅಶಾಂತಿ ಉಂಟಾಗುವ ಸಾಧ್ಯತೆ ಇದೆ. ಇದರಿಂದ ದುರಂತಗಳು ಹೆಚ್ಚಾಗಲಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.