ಗುಣರತ್ನೆ ಸರಣಿಯಿಂದಲೇ ಔಟ್
Team Udayavani, Jul 28, 2017, 7:05 AM IST
ಗಾಲೆ: ಗಾಲೆ ಟೆಸ್ಟ್ ಪಂದ್ಯದ ಮೊದಲ ದಿನ ಎಡಗೈ ಹೆಬ್ಬೆರಳಿನ ಮೂಳೆ ಮುರಿತಕ್ಕೊಳಗಾಗಿದ್ದ ಶ್ರೀಲಂಕಾದ ಬ್ಯಾಟ್ಸ್‌ಮನ್ ಅಸೇಲ ಗುಣರತ್ನೆ ಭಾರತದೆದುರಿನ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಪೂರ್ತಿ ಚೇತರಿಸಿಕೊಳ್ಳಲು ಅವರಿಗೆ 6ರಿಂದ 8 ವಾರಗಳ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರಿಂದ ಉಳಿದೆರಡು ಟೆಸ್ಟ್, ಏಕದಿನ ಹಾಗೂ ಟಿ-20 ಸರಣಿಗಳಲ್ಲೂ ಅವರ ಸೇವೆ ಲಭಿಸದು ಎಂಬುದಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.
ಹೆಬ್ಬೆರಳಿನ ಮೂಳೆಯಲ್ಲಿ 3 ಬಿರುಕುಗಳು ಕಾಣಿಸಿಕೊಂಡಿದ್ದು, ಇದೊಂದು ಗಂಭೀರ ಆಘಾತ ಎಂಬುದಾಗಿ ಶ್ರೀಲಂಕಾ ಕ್ರಿಕೆಟ್ ಮ್ಯಾನೇಜರ್ ಅಸಂಕ ಗುರುಸಿನ್ಹ ಹೇಳಿದ್ದಾರೆ. ಗುಣರತ್ನೆ ಕೊಲಂಬೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೊದಲ ದಿನದಾಟದ 14ನೇ ಓವರ್ ವೇಳೆ ಶಿಖರ್ ಧವನ್ ಕ್ಯಾಚ್ ಪಡೆಯುವ ಸಂದರ್ಭದಲ್ಲಿ ಗುಣರತ್ನೆ ಅವರಿಗೆ ಈ ಕಂಟಕ ಎದುರಾಗಿತ್ತು. ದ್ವಿತೀಯ ಸ್ಲಿಪ್‌ನಲ್ಲಿದ್ದ ಗುಣರತ್ನೆ ಈ ಆಘಾತದಿಂದ ಕ್ಯಾಚನ್ನೂ ನೆಲಕ್ಕೆ ಚೆಲ್ಲಿದ್ದರು. ಆಗ ಧವನ್ ಗಳಿಕೆ ಕೇವಲ 31 ರನ್. ಇದರ ಲಾಭವೆತ್ತಿದ ಅವರು 190ರ ತನಕ ಬೆಳೆದರು.
ಅಸೇಲ ಗುಣರತ್ನೆ ಉತ್ತಮ ಫಾರ್ಮ್ನಲ್ಲಿದ್ದು, ಜಿಂಬಾಬ್ವೆ ಎದುರಿನ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅಜೇಯ 80 ರನ್ ಹೊಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.