ಡೌರಿ ಕೇಸ್‌: ಆರೋಪ ಪರಾಮರ್ಶಿಸದೆ ಅರೆಸ್ಟ್‌ ಮಾಡಕೂಡದು: ಸುಪ್ರೀಂ


Team Udayavani, Jul 28, 2017, 12:04 PM IST

Supreme Court-700.jpg

ಹೊಸದಿಲ್ಲಿ : ವರದಕ್ಷಿಣೆ ವಿರೋಧಿ ಕಾನೂನನ್ನು ಅಸಮಾಧಾನಿತ ಹೆಂಡತಿಯರು ತಮ್ಮ ಗಂಡ, ಅತ್ತೆ, ಮಾವನ ವಿರುದ್ಧ  ದುರ್ಬಳಕೆ ಮಾಡುತ್ತಿರುವುದನ್ನು ಗಮನಿಸಿರುವ ಸುಪ್ರೀಂ ಕೋರ್ಟ್‌,  ಡೌರಿ ಕೇಸ್‌ಗಳಲ್ಲಿ  ಆರೋಪಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಯಾವುದೇ ಬಂಧನ ನಡೆಸಬಾರದು ಎಂದು ಹೇಳಿದೆ. 

ದಾಂಪತ್ಯದಲ್ಲಿನ ಬಿರುಕು, ಅಸಮಾಧಾನ ಇತ್ಯಾದಿಗಳ ಕಾರಣಕ್ಕೆ ವಿವಾಹಿತ ಮಹಿಳೆಯರು ಐಪಿಸಿ ಸೆ.498ಎ ಇದರ ದುರ್ಬಳಕೆ ಮಾಡಿ ಪತಿಯ ಹೆತ್ತವರು, ಅಪ್ರಾಪ್ತ ವಯಸ್ಸಿನ ಮಕ್ಕಳು, ಸಂಬಂಧಿಕರು, ಅಜ್ಜ-ಅಜ್ಜಿ ಮುಂತಾದವರ ವಿರುದ್ಧ ಸುಳ್ಳು ಕ್ರಿಮಿನಲ್‌  ಕೇಸುಗಳನ್ನು  ಹಾಕುವ ಪ್ರವೃತ್ತಿ ಹೆಚ್ಚುತ್ತಿರುವುದನ್ನು ಗಮನಿಸಿದ ಜಸ್ಟಿಸ್‌ ಎ ಕೆ ಗೋಯಲ್‌ ಮತ್ತು ಯು ಯು ಲಲಿತ್‌ ಅವರನ್ನು ಒಳಗೊಂಡ ಪೀಠವು, “ಅಮಾಯಕರ ವಿರುದ್ಧ ಹಾಕಲಾಗುವ ಈ ಬಗೆಯ ಸುಳ್ಳು ಕ್ರಿಮಿನಲ್‌ ಕೇಸುಗಳು ಮೂಲಕ ಮಾನವ ಹಕ್ಕುಗಳ ಉಲ್ಲಂಘನೆ ಆಗುವುದರಿಂದ  ಅವುಗಳ ಸತ್ಯಾಸತ್ಯತೆಯನ್ನು ಸರಿಯಾಗಿ ಪರಾಮರ್ಶೆ ಮಾಡಿಯೇ  ಕಾನೂನು ಕ್ರಮಕ್ಕೆ ಮುಂದಾಗಬೇಕು’ ಎಂದು ಸ್ಪಷ್ಟಪಡಿಸಿದೆ.

ವರದಕ್ಷಿಣೆ ಹಿಂಸೆಯ ನೆಪದಲ್ಲಿ ಹಾಕಲಾಗುವ ಸುಳ್ಳು ಕ್ರಿಮಿನಲ್‌ ಕೇಸುಗಳಿಂದ ಕುಟುಂಬಕ್ಕೆ ಕೆಟ್ಟ ಹೆಸರು ಬರುತ್ತದೆ; ಕೌಟುಂಬಿಕ ವಿಷಯ ಮನೆಯ ನಾಲ್ಕು ಗೋಡೆಗಳಿಂದ ಹೊರಗೆ ಹೋಗಿ ಮನೆಯ ಸದಸ್ಯರಿಗೆ ತೀವ್ರವಾದ ಸಾಮಾಜಿಕ ಮುಜುಗರ ಉಂಟಾಗುತ್ತದೆ; ಮಹಿಳೆಯರಿಂದಲೇ ಅಮಾಯಕ ಮಹಿಳೆಯರು, ಪುರುಷರು ಮತ್ತು ಮಕ್ಕಳು ಕಾನೂನು ಕ್ರಮದ ಬಲಿಪಶುಗಳಾಗುತ್ತಾರೆ’ ಎಂದು ಕೋರ್ಟ್‌ ಹೇಳಿತು. 

ಡೌರಿ ಕೇಸುಗಳಲ್ಲಿ ಆರೋಪಿತ ಸಂತ್ರಸ್ತರ ಹೇಳಿಕೆಗಳನ್ನು ನಿಜವೆಂದು ಒಪ್ಪಬೇಕಾಗಿಲ್ಲ ಎಂಬ ಈ ವರೆಗಿನ ಸಾಂಪ್ರದಾಯಿಕ  ಕ್ರಮವನ್ನು ಮುರಿಯುವ ರೀತಿಯಲ್ಲಿ ಕೋರ್ಟ್‌ ತನ್ನ ತೀರ್ಪನ್ನು ನೀಡಿತು. 

ಇದೇ ವೇಳೆ ಸುಪ್ರಿಂ ಕೋರ್ಟ್‌, “ವರದಕ್ಷಿಣೆ ಹಿಂಸೆ ಪ್ರಕರಣಗಳ ದೂರನ್ನು ನಿಭಾಯಿಸಲು ನೆರವಾಗುವ ಸಲುವಾಗಿ ಎಲ್ಲ ರಾಜ್ಯಗಳು ಪ್ರತಿಯೊಂದು ಜಿಲ್ಲೆಯಲ್ಲಿ ಕುಟುಂಬ ಕಲ್ಯಾಣ ಸಮಿತಿಯೊಂದನ್ನು ರೂಪಿಸಬೇಕು’ ಎಂಬ ಸಲಹೆಯನ್ನು  ನೀಡಿತು. 
 

ಟಾಪ್ ನ್ಯೂಸ್

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.