ರಾಷ್ಟ್ರಧ್ವಜ ಇಳಿಸಿ ಶೋಕಾಚರಣೆ ಮಾಡದ ಗ್ರಾಪಂ
Team Udayavani, Jul 28, 2017, 12:12 PM IST
ಜಗಳೂರು: ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಅರ್ಧಮಟ್ಟಕ್ಕೆ ರಾಷ್ಟ್ರಧ್ವಜ ಇಳಿಸಿ ಶೋಕಾಚರಣೆ ನಡೆಸಬೇಕಾಗಿದ್ದ ತಾಲೂಕಿನ ಕ್ಯಾಸೇನಹಳ್ಳಿ ಗ್ರಾಪಂ ಅಧಿಕಾರಿಗಳ ಮತ್ತು ಸಿಬ್ಬಂದಿ ಕಚೇರಿಯಲ್ಲಿ ಸುಳಿವೇ ಇರಲಿಲ್ಲ.
ಇದರಿಂದಾಗಿ ಸಂಜೆಯಾದರೂ ಪೂರ್ಣ ಮಟ್ಟದಲ್ಲಿ ಧ್ವಜ ಹಾರಾಡಿತು. ರಾಷ್ಟ್ರದ ಅಥವಾ ರಾಜ್ಯದ ಅತಿಗಣ್ಯ ವ್ಯಕ್ತಿಗಳು ನಿಧನ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಇಳಿಸಿ ಶೋಕಾಚರಣೆ ನಡೆಸುವುದು ನಿಯಮ. ಆದರೆ ಮಾಜಿ ಮುಖ್ಯಮಂತ್ರಿ ನಿಧನರಾದ ಸುದ್ದಿ ತಿಳಿದ ಗ್ರಾಪಂ ಅಧಿಕಾರಿಗಳು ಧ್ವಜ ಇಳಿಸಲಿಲ್ಲ. ಕಚೇರಿ ಮುಂದೆ ಧ್ವಜ ಸ್ತಂಬದಲ್ಲಿ ಪೂರ್ಣಮಟ್ಟದಲ್ಲಿ ಹಾರಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಹೊಸಕೆರೆ ಗ್ರಾಪಂನಲ್ಲಿ ಹಾರಾಟ: ತಾಲೂಕಿನ ಹೊಸಕೆರೆ ಗ್ರಾಪಂ ಕಚೇರಿಯ ಮೇಲೆ ಕೂಡಾ ಪೂರ್ಣ ಮಟ್ಟದ ರಾಷ್ಟ್ರ ಧ್ವಜ ಹಾರಾಡುತ್ತಿತ್ತು. ಮಾಜಿ ಮುಖ್ಯಮಂತ್ರಿ ನಿಧನರಾದ ಕೂಡಲೇ ಎಲ್ಲಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ವಾಟ್ಸಪ್ ಮೂಲಕ ಅರ್ಧಮಟ್ಟಕ್ಕೆ ಧ್ವಜ ಇಳಿಸುವಂತೆ ಸಂದೇಶ ರವಾನಿಸಿ ಶೋಕಾಚರಣೆ ನಡೆಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಧ್ವಜ ಇಳಿಸದೇ ಇರುವ ಕ್ಯಾಸೇನಹಳ್ಳಿ ಮತ್ತು ಹೊಸಕೆರೆ ಗ್ರಾಪಂ
ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಜಾನಕಿರಾಮ್ ತಿಳಿಸಿದರು.
ಕ್ರಮಕ್ಕೆ ಸೂಚನೆ..
ಶೋಕಾಚರಣೆ ಆಚರಿಸದ ಗ್ರಾಪಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಪಂ ಇಒ ಅವರಿಗೆ ಸೂಚನೆ ನೀಡಿದ್ದೇನೆ.
ಅಶ್ವತಿ, ಜಿಪಂ ಸಿಇಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.