ನೆಲೋಗಿ; ಮಾಜಿ ಸಿಎಂ ಧರಂಸಿಂಗ್ ಪಂಚಭೂತಗಳಲ್ಲಿ ಲೀನ
Team Udayavani, Jul 28, 2017, 5:32 PM IST
ಜೇವರ್ಗಿ: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಹೃದಯಾಘಾತದಿಂದ ವಿಧಿವಶರಾಗಿದ್ದ ಮಾಜಿ ಮುಖ್ಯಮಂತ್ರಿ, ಸೋಲಿಲ್ಲದ ಸರದಾರ, ಅಜಾತಶತ್ರು ಎನ್. ಧರಂಸಿಂಗ್ ಅವರ ಅಂತ್ಯಕ್ರಿಯೆ ಹುಟ್ಟೂರಾದ ಜೇವರ್ಗಿಯ ನೆಲೋಗಿಯ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಶುಕ್ರವಾರ ರಜಪೂತ ಸಂಪ್ರದಾಯದಂತೆ ನಡೆಯಿತು.
ರಜಪೂತ ಆರ್ಯ ಸಂಪ್ರದಾಯದಂತೆ ಹಿರಿಯ ಮಗ ವಿಜಯ್ ಸಿಂಗ್ ಅವರು ಅಂತಿಮ ಕಾರ್ಯ ನೆರವೇರಿಸಿದರು. ಪುತ್ರ ವಿಜಯ್ ಸಿಂಗ್ ಅವರು ಗಂಧದ ಕಟ್ಟಿಗೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ನರಸಿಂಹ ಶಾಸ್ತ್ರಿ, ವಿಶ್ವಶರ್ಮ ನೇತೃತ್ವದಲ್ಲಿ ಅಂತಿಮ ವಿಧಿ ನೆರವೇರಿಸಲಾಯಿತು.
ಅಗ್ನಿಸ್ಪರ್ಶಕ್ಕೂ ಮೊದಲು ಮುಕ್ತಿ ಹವನ ನೆರವೇರಿಸಲಾಯಿತು. ಗಂಧದ ಕಟ್ಟಿಗೆಯ ಚಿತೆಗೆ ವಿಜಯ್ ಅವರು ಗಡಿಗೆ ನೀರು ತುಂಬಿಕೊಂಡು ಮೂರು ಸುತ್ತು ಸುತ್ತಿ, ಬಳಿಕ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಇಡೀ ನೆಲೋಗಿ ಗ್ರಾಮಸ್ಥರು ಶೋಕಸಾಗರದಲ್ಲಿ ಮುಳುಗಿದ್ದರು. ತಮ್ಮ ನೆಚ್ಚಿನ ನಾಯಕನನ್ನು ನೆನೆದು ಕಣ್ಣೀರು ಹಾಕಿದರು. ಅಜಾತಶತ್ರುವಿನ ಪಾರ್ಥಿವ ಶರೀರ ನೋಡಲು ಸುಡು ಬಿಸಿಲಿನಲ್ಲೂ ಜನಸಾಗರವೇ ಹರಿದು ಬಂದಿತ್ತು. ಅಂತ್ಯ ಸಂಸ್ಕಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ದಿಗ್ವಿಜಯ್ ಸಿಂಗ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.