ಬಿಜೆಪಿ ರೈತ ಮೋರ್ಚಾದಿಂದ “ಕೆರೆ ತುಂಬಿಸಿ’ ಅಭಿಯಾನ


Team Udayavani, Jul 29, 2017, 8:30 AM IST

bjp.jpg

ಬೆಂಗಳೂರು: ರಾಜ್ಯಾದ್ಯಂತ ಜಲಾಶಯಗಳ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಜಲಾಶಯಗಳ ನೀರಿನಿಂದ
ತುಂಬಿಸುವಂತೆ ಆಗ್ರಹಿಸಿ ಅಭಿಯಾನ ಹಮ್ಮಿಕೊಳ್ಳಲು ಬಿಜೆಪಿ ರಾಜ್ಯ ರೈತ ಮೋರ್ಚಾ ತೀರ್ಮಾನಿಸಿದೆ. ರೈತ ಮೋರ್ಚಾ ರಾಜ್ಯಾಧ್ಯಕ್ಷ ಸಿ.ಎಚ್‌.ವಿಜಯಶಂಕರ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಮೋರ್ಚಾದ ರಾಜ್ಯ ಕಾರ್ಯಕಾರಿಣಿಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಅಭಿಯಾನದ ಅಂಗವಾಗಿ ಧರಣಿ, ಸತ್ಯಾಗ್ರಹ ಮತ್ತಿತರ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು. ಸಚಿವರ ಮನೆ ಮುಂದೆಯೂ ಧರಣಿ ನಡೆಸಲಾಗುವುದು ಎಂದು ಸಿ.ಎಚ್‌.ವಿಜಯ ಶಂಕರ್‌ ಸುದ್ದಿಗಾರರಿಗೆ ತಿಳಿಸಿದರು.

15 ದಿನ ಮುತ್ತಿಗೆ ಹೋರಾಟ:
ಕೆರೆ ತುಂಬಿಸಿ ಅಭಿಯಾನದ ಹೋರಾಟ ಅಂಗವಾಗಿ ಆಗಸ್ಟ್‌ 1ರಿಂದ 15ರವರೆಗೆ ರಾಜ್ಯದ ಎಲ್ಲಾ ಜಲಾಶಯಗಳು, ಅದರ ವ್ಯಾಪ್ತಿಯ ಅಧೀಕ್ಷಕ ಎಂಜಿನಿಯರ್‌ಗಳ ಕಚೇರಿಗಳಿಗೆ ಮುತ್ತಿಗೆ ಹಾಕಲಾಗುವುದು. ಆ. 30ರೊಳಗೆ ಈ ಕುರಿತು
ಕ್ರಮ ಕೈಗೊಳ್ಳದಿದ್ದರೆ ಇಲಾಖೆಯ ಪ್ರಧಾನ ಕಚೇರಿ ಮತ್ತು ಸಂಬಂಧಿಸಿದ ಸಚಿವರ ಮನೆ ಮುಂದೆ ಧರಣಿ
ನಡೆಸಲಾಗುವುದು ಎಂದು ಎಚ್ಚರಿಸಿದರು. ಮುಂಗಾರಿನ ಪ್ರಾರಂಭಿಕ ಮೂರು ತಿಂಗಳ ಅವಧಿ (ಜೂನ್‌ನಿಂದ ಆಗಸ್ಟ್‌ ಅಂತ್ಯದವರೆಗೆ) ಅಚ್ಚುಕಟ್ಟು ವ್ಯಾಪ್ತಿಯ ರೈತರ ಹಿತ ಕಾಯುವ ಅವಧಿ ಎಂದು ಪರಿಗಣಿಸಿ ಅಚ್ಚುಕಟ್ಟು ವ್ಯಾಪ್ತಿಯ ಕೆರೆಗಳನ್ನು ತುಂಬಿಸುವ ಕೆಲಸ ಮಾಡಬೇಕು. ಇಲಾಖೆಯ ಟೆಂಡರ್‌, ಸಭೆಗಳನ್ನು ರದ್ದುಗೊಳಿಸಬೇಕು. ರಾಜ್ಯದ ಎಲ್ಲಾ ಜಲಾಶಯಗಳ ನೀರಾವರಿ ಸಲಹಾ ಸಮಿತಿ ಸಭೆಗಳನ್ನು ಕಾಲಕಾಲಕ್ಕೆ ನಡೆಸ ಬೇಕು. ಅದು ಸಾಧ್ಯವಾಗದಿದ್ದರೆ ನೀರು ಬಳಕೆದಾರರ ಸಂಘಗಳಿಗೆ ಜಲಾಶಯಗಳ ಉಸ್ತುವಾರಿ ವಹಿಸಿ ನೀರು ಬಳಸುವ ಅಧಿಕಾರ ಕಲ್ಪಿಸಬೇಕೆಂದು ಆಗ್ರಹಿಸಿದರು.

ಫ‌ಸಲ್‌ ಬೀಮಾಗೆ ಒತ್ತಾಯ: ಪ್ರಸಕ್ತ ಸಾಲಿನಲ್ಲೂ ಬರ ಪರಿಸ್ಥಿತಿ ಮುಂದುವರಿಯುವ ಲಕ್ಷಣ ಇರುವುದರಿಂದ
ಜಲಾಶಯಗಳ ಅಚ್ಚುಕಟ್ಟು ಪ್ರದೇಶಗಳ ರೈತರಿಗೆ ಕಡಿಮೆ ನೀರು ಬಳಸುವ ಪರ್ಯಾಯ ಬೆಳೆಗಳನ್ನು ಬೆಳೆಯಲು
ಪೂರಕ ಸೌಲಭ್ಯ ಕಲ್ಪಿಸಬೇಕು. ಎಲ್ಲಾ ರೀತಿಯ ತೋಟಗಾರಿಕಾ ಬೆಳೆಗಳನ್ನು ಪ್ರಧಾನಮಂತ್ರಿ ಫ‌ಸಲ್‌ ಬೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಎಂದು ಒತ್ತಾಯಿ ಸಿದ ಅವರು, ಹವಾಮಾನ ಇಲಾಖೆಗೆ ಕಾಯಕಲ್ಪ ನೀಡುವ ಮೂಲಕ ಹವಾಮಾನ ಮುನ್ಸೂಚನೆ ಸಮರ್ಪ ಕವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.