ತ್ತೈಮಾಸಿಕ ಸಭೆ: ಅ.2ರ ವೇಳೆಗೆ 4 ತಾಲೂಕು ಬಯಲು ಶೌಚಮುಕ್ತ
Team Udayavani, Jul 29, 2017, 9:36 AM IST
ದಾವಣಗೆರೆ: ಅಕ್ಟೋಬರ್ 2ರ ಗಾಂಧಿ ಜಯಂತಿ ವೇಳೆಗೆ ಜಿಲ್ಲೆಯ 4 ತಾಲೂಕುಗಳು ಬಯಲು ಶೌಚಮುಕ್ತ ಆಗಲಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಎಸ್. ಅಶ್ವತಿ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್‌ನ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ರಚಿಸಲಾಗಿರುವ ನೀರು ಮತ್ತು ನೈರ್ಮಲ್ಯ ಸಮಿತಿಯ ಮೊದಲನೇ ತ್ತೈಮಾಸಿಕ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಅವರು, ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಜಿಲ್ಲೆಯ ಹೊನ್ನಾಳಿ, ದಾವಣಗೆರೆ, ಹರಿಹರ ಮತ್ತು ಚನ್ನಗಿರಿಯನ್ನು ಬಯಲು ಬಹಿರ್ದೆಸೆಮುಕ್ತ ತಾಲೂಕುಗಳೆಂದು ಘೋಷಿಸಲಾಗುವುದು. ಹರಪನಳ್ಳಿ ಮತ್ತು ಜಗಳೂರು ತಾಲೂಕುಗಳನ್ನು ಡಿಸೆಂಬರ್ ಮಾಹೆಯಲ್ಲಿ ಬಯಲು ಬಹಿರ್ದೆಸೆ ಮುಕ್ತ ತಾಲೂಕುಗಳೆಂದು ಘೋಷಿಸಲಾಗುವುದು ಎಂದರು.
ಗರ್ಬಿಣಿಯರ ಮನೆಯಲ್ಲಿ ಗುಂಡಿ ತೋಡಬಾರದೆಂಬ ಸಂಪ್ರದಾಯವಿದ್ದರೂ ಮನವೊಲಿಕೆಯ ನಂತರ ಶೌಚಾಲಯ ಕಟ್ಟಿಸಿಕೊಳ್ಳಲು ಒಪ್ಪಿರುವ ಘಟನೆಗಳೂ ಇವೆ. ಗರ್ಬಿಣಿ, ಬಾಣಂತಿಯರಿಗೆ ಶೌಚಾಲಯ ಅತ್ಯಗತ್ಯವಾಗಿದ್ದು ಅವರ ಮನೆಗಳಲ್ಲಿ ಶೌಚಾಲಯ ಕಟ್ಟಿಸಿಕೊಳ್ಳಲು ಮನವೊಲಿಸಬೇಕಾಗಿದೆ ಎಂದು ಅವರು ತಿಳಿಸಿದರು.
ಅಧ್ಯಕ್ಷೆ ಉಮಾ ಎಂ ಪಿ ರಮೇಶ್ ಮಾತನಾಡಿ, ಹೊನ್ನಾಳಿ, ಚನ್ನಗಿರಿ ಸೇರಿದಂತೆ ಜಿಲ್ಲೆಯ ಗ್ರಾಮಗಳಲ್ಲಿ ಮನವೊಲಿಸುವ ಕಾರ್ಯದಲ್ಲಿ ತಾವೂ ಸಹ ತೊಡಗಿದ್ದು, ಅಧಿಕಾರಿಗಳು ಅನುಸರಣೆ ಕಾರ್ಯದಲ್ಲಿ ನಿಯಮಿತವಾಗಿ ತೊಡಗಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸೇರಿ ಶ್ರಮಿಸಿದರೆ
ಪರಿಣಾಮಕಾರಿ ಫಲಿತಾಂಶ ಸಾಧ್ಯ ಎಂದರು. ಯೋಜನಾ ಸಹ ನಿರ್ದೇಶಕ ಶಶಿಧರ ಮಾತನಾಡಿ, 2017-18ನೇ ಸಾಲಿನಲ್ಲಿ ಒಟ್ಟು 408.98 ಲಕ್ಷ ಅನುದಾನದಲ್ಲಿ 794 ಸಂಖ್ಯೆಯಲ್ಲಿ ಹಾಡು ಮತ್ತು ನಾಟಕ ಚಟುವಟಿಕೆಗಳು, 233 ಗೋಡೆ ಬರಹಗಳು, 794 ಬೀದಿನಾಟಕಗಳು, 23 ಮೇಳಗಳು, 233 ಹೋರ್ಡಿಂಗ್ ಮತ್ತು ಬ್ಯಾನರ್‌ಗಳು, 23 ಗುಂಪು ಸಭೆಗಳು, 6 ವಸ್ತು ಪ್ರದರ್ಶನಗಳು, 794 ಶ್ರವ್ಯ ದಶ್ಯ ಪ್ರಚಾರ, 1800 ಸ್ಕೂಲ್ ಜಾಥಾ, 46 ಜಾಗತಿ ಮತ್ತು ಕಾರ್ಯಾಗಾರಗಳು, 794 ಇಂಟರ್-ಪರ್ಸನಲ್ ಸಂವಹನ, 50000 ಐಇಸಿ ಸಾಮಗ್ರಿಗಳ ವಿತರಣೆ ಸೇರಿದಂತೆ ವಿವಿಧ ಮಾಹಿತಿ ಶಿಕ್ಷಣ ಮತ್ತು ಸಂವಹನ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ನಟರಾಜ್, ಜಿ ಪಂ ಉಪ ಕಾರ್ಯದರ್ಶಿ ಜಿ.ಎಸ್. ಷಡಕ್ಷರಪ್ಪ, ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.