ಅರ್ಜಿ ವಿಚಾರಣೆಯಿಂದ ಹಿಂದಕ್ಕೆ
Team Udayavani, Jul 29, 2017, 11:51 AM IST
ಬೆಂಗಳೂರು: ಗಿರಿನಗರದಲ್ಲಿ ಬಿಬಿಎಂಪಿಗೆ ಸೇರಿದೆ ಎನ್ನಲಾದ 2.600 ಚದರ ಅಡಿ ಸಿ.ಎ. ನಿವೇಶನವನ್ನು ಹೊಸನಗರ ರಾಮಚಂದ್ರಾಪುರದ ಶಾಖಾಮಠವು ಒತ್ತುವರಿ ಮಾಡಿದೆ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಿಂದ ಮುಖ್ಯನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ನೇತೃತ್ವದ ವಿಭಾಗೀಯ ಪೀಠ ಹಿಂದೆ ಸರಿದಿದೆ.
ಈ ಸಂಬಂಧ ಜೆ.ಪಿ ನಗರದ ಎಂ.ಪವನ ಪ್ರಸಾದ್ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಶುಕ್ರವಾರ ಮುಖ್ಯನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ಹಾಗೂ ಪಿ.ಎಸ್ ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಬಂದಿತ್ತು. ಆದರೆ ನ್ಯಾಯಪೀಠ, ಈ ಅರ್ಜಿ ವಿಚಾರಣೆಯನ್ನ ನಮ್ಮಲ್ಲಿನ ಒಬ್ಬರು ವೈಯಕ್ತಿಕ ಕಾರಣಗಳಿಂದ ವಿಚಾರಣೆ ನಡೆಸಲು ಸಿದ್ಧರಿಲ್ಲ. ಹೀಗಾಗಿ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿದೆ.
ರಾಮಚಂದ್ರಾಪುರ ಮಠವು ಸಾರ್ವಜನಿಕರ ಉಪಯೋಗಕ್ಕೆ ಮೀಸಲಿಟ್ಟ 2.600 ಅಡಿ ನಿವೇಶನ ಜಾವನ್ನು ಒತ್ತುವರಿ ಮಾಡಿಕೊಂಡಿದೆ. ಹೀಗಾಗಿ ಈ ಸಿ.ಎ ಜಾಗವನ್ನು ವಾಪಾಸ್ ಪಡೆದುಕೊಳ್ಳಲು ಬಿಬಿಎಂಪಿಗೆ ನಿರ್ದೇಶಿಸಬೇಕು ಎಂಬುದು ಅರ್ಜಿದಾರರ ವಾದವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.