2ನೇ ದಿನವೂ ಹದವಾಗಿ ಸುರಿದ ಮಳೆ

Team Udayavani, Jul 29, 2017, 11:51 AM IST

rain-rain-story.jpg

ಬೆಂಗಳೂರು: ನಗರದಲ್ಲಿ ಸತತ ಎರಡನೇ ದಿನವೂ ಮಳೆ ಮುಂದುವರಿದಿದ್ದು, ಧಾರಾಕಾರವಾಗಿ ಸುರಿದ ಮಳೆಗೆ ಕೆಲಹೊತ್ತು ನಗರ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು. ಸಂಜೆ 7ರ ಸುಮಾರಿಗೆ ಶುರುವಾದ ಮಳೆ ವಿವಿಧೆಡೆ ಅರ್ಧಗಂಟೆಗೂ ಹೆಚ್ಚು ಕಾಲ ಸುರಿಯಿತು. ಪ್ರಮುಖ ಜಂಕ್ಷನ್‌ಗಳು, ಅಂಡರ್‌ಪಾಸ್‌ಗಳಲ್ಲಿ ನೀರು ನಿಂತಿದ್ದರಿಂದ ಸುಗಮ ಸಂಚಾರಕ್ಕೆ ವಾಹನ ಸವಾರರು ಕೆಲಕಾಲ ಪರದಾಡುವಂತಾಯಿತು.

ಆದರೆ, ತುಸು ಹೊತ್ತಿನಲ್ಲಿ ಮಳೆ ಇಳಿಮುಖವಾಗಿದ್ದರಿಂದ ಸಮಸ್ಯೆ ಉದ್ಭವಿಸಲಿಲ್ಲ. ಪಾಲಿಕೆ ವೃತ್ತ, ಗಾಂಧಿನಗರ, ಕೆ.ಜಿ ರಸ್ತೆ, ಲಾಲ್‌ಬಾಗ್‌, ಜಯನಗರ, ಜೆ.ಪಿ. ನಗರ, ವಿಜಯನಗರ, ಗೊರಗುಂಟೆಪಾಳ್ಯ, ಯಶವಂತಪುರ, ರಾಜಾಜಿನಗರ ಮತ್ತಿತರ ಕಡೆಗಳಲ್ಲಿ ಮಳೆ ಅಬ್ಬರ ಜೋರಿತ್ತು. ಆದರೆ, ಮಹದೇವಪುರ, ಬೊಮ್ಮನಹಳ್ಳಿ, ರಾಜರಾಜೇಶ್ವರಿನಗರ, ದಾಸರಹಳ್ಳಿ ಮತ್ತಿತರ ಕಡೆ ತುಂತುರು ಹನಿಯಿತು.  

ಸತತ ಎರಡು ದಿನಗಳಿಂದ ಸಂಜೆ ಸರಿಯಾಗಿ 7ರ ಸುಮಾರಿಗೆ ವರುಣನ ಆಗಮನ ಆಗುತ್ತಿರುವುದರಿಂದ ನಗರದ ಸಂಜೆಯ ಮನರಂಜನೆಗೆ ತಡೆಯೊಡ್ಡಿದಂತಾಗಿದೆ. ಥಿಯೇಟರ್‌, ಶಾಪಿಂಗ್‌, ಕಾಫಿ ಡೇ ಮತ್ತಿತರ ಕಾರಣಗಳಿಗೆ ಜನ ಸಾಮಾನ್ಯವಾಗಿ ರಸ್ತೆಗಿಳಿಯುತ್ತಾರೆ. ಆದರೆ, ಈ ಉತ್ಸಾಹಕ್ಕೆ ಮಳೆ ತಣ್ಣೀರೆರಚಿದೆ. ಈ ಮಧ್ಯೆ ಆಗಾಗ್ಗೆ ವಿದ್ಯುತ್‌ ಕೂಡ ಕೈಕೊಟ್ಟಿದ್ದರಿಂದ, ನಗರದ ಕೆಲ ಭಾಗಗಳಲ್ಲಿ ಕತ್ತಲು ಕವಿದಿತ್ತು. 

ಇಂದು ಕೂಡ ಮಳೆ?: ಕಳೆದ ಕೆಲ ದಿನಗಳಿಂದ ನಗರದ ಸುತ್ತಮುತ್ತ ಬರೀ ಮೋಡಕವಿದ ವಾತಾವರಣ ಇರುತ್ತಿತ್ತು. ಆದರೆ, ಶುಕ್ರವಾರ ನಗರದ ಉಷ್ಣಾಂಶದಲ್ಲಿ ಒಂದು ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಿದೆ. ಬೆನ್ನಲ್ಲೇ ಮೋಡ ಸರಿದು, ಮಳೆ ಬೀಳುತ್ತಿದೆ. ವಾತಾವರಣದಲ್ಲಿ ಯಾವುದೇ ಪ್ರಮುಖ ವ್ಯತ್ಯಾಸಗಳು ಆಗಿಲ್ಲ. ನಗರದಲ್ಲಿ ಇನ್ನೂ ಒಂದೆರಡು ದಿನ ಇದೇ ವಾತಾವರಣ ಇರಲಿದ್ದು, ಒಂದೆರಡು ಬಾರಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.