RSS ಕಾರ್ಯಕರ್ತನ ಕೊಲೆ: ಇಂದು ಕೇರಳ ಹರತಾಳ
Team Udayavani, Jul 30, 2017, 12:41 AM IST
ತಿರುವನಂತಪುರ: ದುಷ್ಕರ್ಮಿಗಳ ಗುಂಪೊಂದು ಆರ್ಎಸ್ಎಸ್ ಕಾರ್ಯಕರ್ತರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದೆ. ಈ ಹತ್ಯೆಗೆ ಸಿಪಿಐ-ಎಂ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ, ರವಿವಾರ ಕೇರಳ ಬಂದ್ಗೆ ಕರೆ ನೀಡಿದೆ. ರೌಡಿಶೀಟರ್ನೊಬ್ಬನ ತಂಡ ಈ ಹತ್ಯೆ ನಡೆಸಿದೆ ಎಂದು ಪೊಲೀಸರು ಹೇಳಿದ್ದಾರೆ. ಶನಿವಾರ ರಾತ್ರಿ 9 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, 34 ವರ್ಷದ ರಾಜೇಶ್ ಅವರನ್ನು ಹತ್ಯೆ ಮಾಡಲಾಗಿದೆ. ಇವರ ಎಡಗೈಯನ್ನೂ ಕತ್ತರಿಸಲಾಗಿದೆ ಎಂದಿರುವ ಪೊಲೀಸರು, ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ ಎಂದಿದ್ದಾರೆ.
ಈ ಹತ್ಯೆಯನ್ನು ಖಂಡಿಸಿರುವ ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕುಮ್ಮನಮ್ ರಾಜಶೇಖರನ್ ಅವರು, ಇದಕ್ಕೆ ಸಿಪಿಐ-ಎಂ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಿದ್ದಾರೆ. ಜತೆಗೆ ರಾಜ್ಯಾದ್ಯಂತ ಹರತಾಳಕ್ಕೆ ಕರೆ ನೀಡಿದ್ದಾರೆ. ಕೇರಳ ಬಿಜೆಪಿ ಘಟಕದ ಕಚೇರಿ ಮೇಲಿನ ದಾಳಿ ಮತ್ತು ಸಿಪಿಐ – ಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿ ಮನೆ ಮೇಲೆ ದಾಳಿ ನಡೆದ ಬಳಿಕ ರಾಜ್ಯಾದ್ಯಂತ ಭಾರೀ ಬಿಗಿ ಭದ್ರತೆ ಒದಗಿಸಲಾಗಿದೆ. ಜತೆಗೆ ಶುಕ್ರವಾರ ನಡೆದ ಹಿಂಸಾಚಾರ ಸಂಬಂಧ ಸಿಪಿಐ-ಎಂನ ಯುವ ಘಟಕದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.