ಹಳೇ ಮಾರ್ಗಸೂಚಿ ಮುಂದುವರಿಸುವಂತೆ ಪತ್ರ
Team Udayavani, Jul 30, 2017, 8:25 AM IST
ಮೈಸೂರು: ರಾಷ್ಟ್ರೀಯ ಪ್ರಾಕೃತಿಕ ವಿಕೋಪ ಪರಿಹಾರ ನಿಧಿ (ಎನ್ಡಿಆರ್ಎಫ್) ಮಾರ್ಗಸೂಚಿಯ ಬದಲಾವಣೆಯನ್ನು ಕೈಬಿಟ್ಟು ಹಳೇ ಮಾರ್ಗಸೂಚಿಯನ್ನೇ ಮುಂದುವರಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಕೃಷಿ ಸಚಿವರ ಮೇಲೆ ಒತ್ತಡ ಹೇರುವಂತೆ ಕೋರಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಪತ್ರ ಬರೆದಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಹೊಸ ಮಾರ್ಗಸೂಚಿಯ ಪ್ರಕಾರ ಶೇ.50ರಷ್ಟು ಬೆಳೆಹಾನಿಯಾಗಿದ್ದರೆ ಮಾತ್ರ ಪರಿಹಾರ ನೀಡಲು ಸಾಧ್ಯ. ಕಳೆದ ವರ್ಷ ಹಿಂಗಾರು ಬೆಳೆ ಹಾನಿಯ ಪರಿಣಾಮ ರಾಜ್ಯದ 160 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಲಾಗಿತ್ತು. ಹೊಸ ಮಾರ್ಗಸೂಚಿ ಅನುಸರಿಸಿದರೆ 20 ತಾಲೂಕುಗಳನ್ನು ಕೂಡ ಬರ ಘೋಷಣೆ ಮಾಡಲಾಗಲ್ಲ.
ಹೀಗಾಗಿ ಹಳೆ ಮಾರ್ಗಸೂಚಿಯನ್ನೇ ಮುಂದುವರೆಸಿ ಎಂದು ಪತ್ರ ಬರೆದಿದ್ದೇನೆ ಎಂದರು. ಮಂಗಳೂರು ಗಲಭೆ ಸಂಬಂಧ ಕೇಂದ್ರ ಸರ್ಕಾರ ಯಾವುದೇ ವರದಿ ಕೇಳಿಲ್ಲ ಎಂದು ಇದೇ ವೇಳೆ ಅವರು ತಿಳಿಸಿದರು. ರಮಾನಾಥ ರೈಯವರಿಗೆ ಗೃಹ ಖಾತೆ ನೀಡುವ ಕುರಿತು ಪ್ರತಿಕ್ರಿಯಿಸಿ, “ರಮಾನಾಥ ರೈಗೆ ಗೃಹ ಇಲಾಖೆಯ ಜವಾಬ್ದಾರಿ ಕೊಡುತ್ತೇನೆಂದು ನಾನು ಎಲ್ಲಿಯೂ ಹೇಳಿಲ್ಲ. ಸಂಪುಟದಲ್ಲಿ ಮೂರು ಮಂತ್ರಿ ಸ್ಥಾನ ಖಾಲಿ ಇದೆ. ಹೀಗಾಗಿ, ಸಂಪುಟ ವಿಸ್ತರಣೆ ಮಾಡುವಾಗ ಗೃಹ ಇಲಾಖೆಯನ್ನೂ ಹಂಚಿಕೆ ಮಾಡಲಾಗುವುದು’ ಎಂದು ಸ್ಪಷ್ಟಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.