ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಒಗ್ಗಟ್ಟಿನ ಹೋರಾಟ
Team Udayavani, Jul 30, 2017, 8:10 AM IST
ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮವಾಗಿದ್ದು, ಅದಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಬೇಕೆಂದು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲು ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ವೇದಿಕೆ ನಿರ್ಣಯ ಕೈಗೊಂಡಿತು.
ನಗರದಲ್ಲಿ ಶನಿವಾರ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿ ಬೃಹತ್ ರ್ಯಾಲಿ ಆಯೋಜಿಸುವುದು ಹಾಗೂ ಮಠಾಧೀಶರೆಲ್ಲ ತಮ್ಮ ನಡುವಿನ ಭಿನ್ನಾಭಿಪ್ರಾಯ ಮರೆತು ಒಕ್ಕೊರಲಿನಿಂದ ಹೋರಾಟಕ್ಕೆ ನಿಲ್ಲಬೇಕೆಂದು ಮನವಿ ಮಾಡಲು ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ
ಲಿಂಗಾಯತ ಮುಖಂಡರು ಸ್ವತಂತ್ರ ಧರ್ಮ ಅವಶ್ಯಕತೆ ಕುರಿತು ಗಂಭೀರ ಚರ್ಚೆ ನಡೆಸಿದರು. ಅಂತಿಮವಾಗಿ ಕೂಡಲ ಸಂಗಮದಲ್ಲಿ ಆಗಸ್ಟ್ 22ರಂದು ಸಭೆ ನಡೆಸಲು, ನಿಯೋಗದೊಂದಿಗೆ ಮುಖ್ಯಮಂತ್ರಿ ಭೇಟಿ ಮಾಡಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮನವಿ ಮಾಡುವುದು, ರಾಜ್ಯಮಟ್ಟದ ಹೋರಾಟ ಸಮಿತಿ ರಚಿಸುವುದು, ಮಠಾಧೀಶರೆಲ್ಲ ಒಗ್ಗೂಡಬೇಕೆಂಬ ಪ್ರಮುಖ ನಿರ್ಣಯಗಳನ್ನು ಕೈಗೊಂಡರು.
ಲಿಂಗಾಯತ, ವೀರಶೈವ ವಿಚಾರವಾಗಿ ಸದ್ಯಕ್ಕೆ ನಾವು ಏನನ್ನೂ ಹೇಳುವುದಿಲ್ಲ. ಶಿವಯೋಗ ಮಂದಿರದ ಸದಸ್ಯರು ನಾವಾಗಿದ್ದು ಮಂದಿರದ ಅಧ್ಯಕ್ಷರ ನೇತೃತ್ವದಲ್ಲಿ ಶೀಘ್ರದಲ್ಲೇ ಸಭೆ ಸೇರಿ ಚರ್ಚಿಸಿ, ನಮ್ಮ ತೀರ್ಮಾನ ತಿಳಿಸುತ್ತೇವೆ.
– ಶ್ರೀ ಸದಾಶಿವ ಸ್ವಾಮೀಜಿ, ಹಾವೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.