ಉಪನಗರ ರೈಲು ನೀತಿಗೆ ಸಿಎಂ ಆಕ್ಷೇಪ

Team Udayavani, Jul 30, 2017, 11:25 AM IST

train.jpg

ಬೆಂಗಳೂರು: ಕೇಂದ್ರ ಸರ್ಕಾರ ರೂಪಿಸಿರುವ “ಉಪನಗರ ರೈಲು ಯೋಜನೆ ನೀತಿ’ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪನಗರ ರೈಲು ಯೋಜನೆಯಿಂದ ನಿರ್ವಹಣೆಯಲ್ಲಾಗಬಹುದಾದ ನಷ್ಟವನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರವೇ ಭರಿಸಬೇಕು ಎಂಬ ಧೋರಣೆ ಸರಿ ಅಲ್ಲ. ರೈಲ್ವೆ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಈ ಹೊರೆ ಭರಿಸುವ ನಿಟ್ಟಿನಲ್ಲಿ ನೀತಿ ರೂಪಿಸಬೇಕು ಎಂದು ರೈಲ್ವೆ ಸಚಿವ ಸುರೇಶ್‌ ಪ್ರಭು ಅವರಿಗೆ ಪತ್ರ ಬರೆದಿದ್ದಾರೆ.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರದಟ್ಟಣೆಗೆ ಉಪನಗರ ರೈಲಿನಂತಹ ಸಾರ್ವಜನಿಕ ಸಾರಿಗೆಯೊಂದೇ ಪರಿಹಾರ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉಪನಗರ ರೈಲು ಯೋಜನೆಗೆ ತಗಲುವ ವೆಚ್ಚದಲ್ಲಿ ಅರ್ಧದಷ್ಟು ಹಣ ಭರಿಸಲು ಸಿದ್ಧವಾಗಿದೆ. ಆದರೆ, ಈ ಯೋಜನೆ ನಂತರ ರೈಲು ಸೇವೆಯಲ್ಲಾಗಬಹುದಾದ ನಿರ್ವಹಣಾ ನಷ್ಟವನ್ನು ಸಂಪೂರ್ಣವಾಗಿ ರಾಜ್ಯವೇ ಭರಿಸಬೇಕು ಎಂದು ಹೊಸ ನೀತಿಯಲ್ಲಿ ಸೂಚಿಸಲಾಗಿದೆ.

ಇದರಿಂದ ರಾಜ್ಯಕ್ಕೆ ಸಾಕಷ್ಟು ಹೊರೆಯಾಗಲಿದ್ದು, ಈ ನಷ್ಟವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 50:50 ಅನುಪಾತದಲ್ಲಿ ಭರಿಸುವಂತಾಗಬೇಕು. ಈ ನಿಟ್ಟಿನಲ್ಲಿ ನೀತಿಯನ್ನು ಪರಿಷ್ಕರಿಸಬೇಕು ಎಂದು ಶನಿವಾರ ರೈಲ್ವೆ ಸಚಿವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಹಿಂದೆಯೇ ರೈಲ್ವೆ ಇಲಾಖೆಯು ಉಪನಗರ ರೈಲು ಯೋಜನೆ ಸಂಬಂಧದ ಕರಡು ನೀತಿ ರೂಪಿಸಿ, ಸಲಹೆಗಳನ್ನು ಆಹ್ವಾನಿಸಿತ್ತು.

ಆಗಲೂ ಈ ನಿರ್ವಹಣಾ ನಷ್ಟವನ್ನು ಕೇಂದ್ರ ಮತ್ತು ರಾಜ್ಯವು ಸಮವಾಗಿ ಭರಿಸಲು ರಾಜ್ಯ ಸರ್ಕಾರ ಸಲಹೆ ಮಾಡಿತ್ತು. ಇದಲ್ಲದೆ ಹಳಿ, ನಿಲ್ದಾಣಗಳು ಸೇರಿದಂತೆ ಈಗಾಗಲೇ ಇರುವ ಮೂಲಸೌಕರ್ಯಗಳನ್ನು ಬಳಸಿಕೊಳ್ಳಬೇಕು. ಕೊರತೆ ಇರುವಲ್ಲಿ ಮಾತ್ರ ಮೂಲಸೌಕರ್ಯಗಳ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ, ಯೋಜನೆಯು ಕಾರ್ಯಸಾಧು ಆಗುವುದಿಲ್ಲ ಎಂದೂ ಹೇಳಿದ್ದೆವು. ಆದರೆ, ನೀತಿ ರೂಪಿಸುವಾಗ ಇದಾವುದನ್ನೂ ಪರಿಗಣಿಸಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. 

ನಿಯಮ ಸಡಿಲಿಸಬೇಕು:  ಉಪನಗರ ರೈಲು ಪ್ರಯಾಣ ದರ ನಿಗದಿಯನ್ನು ವಿಶೇಷ ಉದ್ದೇಶ ಯೋಜನೆ ಅಡಿ ನಿರ್ಮಾಣಗೊಳ್ಳುವ ಸಂಸ್ಥೆಗೆ ಬಿಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿರುವ ಮುಖ್ಯಮಂತ್ರಿ, ಉಳಿದಂತೆ ಯೋಜನೆಯ ಎಲ್ಲ ಖರ್ಚು-ವೆಚ್ಚಗಳನ್ನು ರೈಲ್ವೆ ಮತ್ತು ರಾಜ್ಯ ಸರ್ಕಾರ ಸಮಾನವಾಗಿ ಭರಿಸಲು ಕ್ರಮ ಕೈಗೊಳ್ಳಬೇಕು. ಈ ಎಲ್ಲ ಹಿನ್ನೆಲೆಯಲ್ಲಿ ಉಪನಗರ ರೈಲು ಯೋಜನಾ ನೀತಿಯಲ್ಲಿನ ನಿರ್ಬಂಧಗಳನ್ನು ಸಡಿಲಿಸಬೇಕು ಎಂದು ಮನವಿ ಮಾಡಿದ್ದಾರೆ. 

ಹೊಸ ನೀತಿ ಏನು ಹೇಳುತ್ತದೆ?: ನೀತಿಯಲ್ಲಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡು, ಭೂಮಾಲೀಕರಿಗೆ ಪರಿಹಾರ ನೀಡಬೇಕು. ಅಷ್ಟೇ ಅಲ್ಲ, ರೈಲು ಓಡಿಸುವುದರಿಂದ ಆಗುವ ನಷ್ಟವನ್ನೂ ರಾಜ್ಯ ಸರ್ಕಾರವೇ ಭರಿಸಬೇಕು. ರೈಲ್ವೆ ಇಲಾಖೆಯೇ ಸ್ವಹಿತಾಸಕ್ತಿಯಿಂದ ಸಬ್‌ಅರ್ಬನ್‌ ಯೋಜನೆ ಕೈಗೆತ್ತಿಕೊಂಡರೆ, ಈ ನಿಯಮಗಳು ಅನ್ವಯಿಸುವುದಿಲ್ಲ. ಈಗಿರುವ ರೈಲ್ವೆ ಹಳಿ, ಸಿಗ್ನಲಿಂಗ್‌ ಮತ್ತಿತರ ಸೌಕರ್ಯಗಳನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಆದರೆ ರೈಲ್ವೆ ಮತ್ತು ರಾಜ್ಯ ಸರ್ಕಾರದ ನಡುವೆ ಒಪ್ಪಂದ ಮಾಡಿಕೊಂಡು, ಇದಕ್ಕಾಗಿ ಬಿಎಂಆರ್‌ಸಿ ಮಾದರಿಯಲ್ಲಿ ಒಂದು ಪ್ರತ್ಯೇಕ ಎಸ್‌ಪಿವಿ (ಸ್ಪೇಷಲ್‌ ಪರ್ಪಸ್‌ ವೇಹಿಕಲ್‌) ರೂಪಿಸಿ, ಅದರಡಿ ಯೋಜನೆ ಕೈಗೆತ್ತಿಕೊಂಡರೆ ಹೊಸ ಕರಡು ನೀತಿ ಪ್ರಕಾರ ಹೊರೆ ಆಯಾ ರಾಜ್ಯಗಳ ಮೇಲೆಯೇ ಬೀಳಲಿದೆ ಎಂದು ನೀತಿಯಲ್ಲಿ ಹೇಳಲಾಗಿತ್ತು.  

ಟಾಪ್ ನ್ಯೂಸ್

10-dk-shi

R Ashok ಮ್ಯಾಚ್ ಫಿಕ್ಸಿಂಗ್ ಎಂದು ಹೇಳಿರುವುದು ಸಂವಿಧಾನಾತ್ಮಕ ಹುದ್ದೆಗೆ ಮಾಡಿದ ಅವಮಾನ

BBK11: ಅನುಷಾಗೆ ಕಾಲಿನಲ್ಲಿ ಒದ್ದ ಗೋಲ್ಡ್‌ ಸುರೇಶ್; ಬಿಗ್‌ಬಾಸ್‌ ಆಟದಲ್ಲಿ ರಾದ್ಧಾಂತ

BBK11: ಅನುಷಾಗೆ ಕಾಲಿನಲ್ಲಿ ಒದ್ದ ಗೋಲ್ಡ್‌ ಸುರೇಶ್; ಬಿಗ್‌ಬಾಸ್‌ ಆಟದಲ್ಲಿ ರಾದ್ಧಾಂತ

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

lakshmi hebbalkar

Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

7-

ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Crime: ಶೀಲ ಶಂಕಿಸಿ ಪತ್ನಿ  ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10-dk-shi

R Ashok ಮ್ಯಾಚ್ ಫಿಕ್ಸಿಂಗ್ ಎಂದು ಹೇಳಿರುವುದು ಸಂವಿಧಾನಾತ್ಮಕ ಹುದ್ದೆಗೆ ಮಾಡಿದ ಅವಮಾನ

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

BBK11: ಅನುಷಾಗೆ ಕಾಲಿನಲ್ಲಿ ಒದ್ದ ಗೋಲ್ಡ್‌ ಸುರೇಶ್; ಬಿಗ್‌ಬಾಸ್‌ ಆಟದಲ್ಲಿ ರಾದ್ಧಾಂತ

BBK11: ಅನುಷಾಗೆ ಕಾಲಿನಲ್ಲಿ ಒದ್ದ ಗೋಲ್ಡ್‌ ಸುರೇಶ್; ಬಿಗ್‌ಬಾಸ್‌ ಆಟದಲ್ಲಿ ರಾದ್ಧಾಂತ

10

Katpadi: ಅಂಚಿಗೆ ಬ್ಯಾರಿಕೇಡ್‌ ಇರಿಸಿ ರಿಬ್ಬನ್‌ ಅಳವಡಿಕೆ

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.