ಪ್ರತಿ ಬೂತ್‌ನಲ್ಲೂ ಶೇ.10 ಮತ ಹೆಚ್ಚಿಸಿ


Team Udayavani, Jul 30, 2017, 11:43 AM IST

mys5.jpg

ನಂಜನಗೂಡು: ಕಳೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 64 ಸಾವಿರ ಮತ ಗಳಿಸಿದ್ದು, ಪ್ರತಿ ಬೂತ್‌ನಿಂದ ಶೇ.10ರಷ್ಟು ಮತ ಹೆಚ್ಚಾದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಅನುಕೂಲವಾಗಲಿದೆ ಎಂದು ಕಳಲೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್‌.ಮಹದೇವಯ್ಯ ತಿಳಿಸಿದರು.

ತಾಲೂಕನ ಕಳಲೆ ಗ್ರಾಮದಲ್ಲಿ ಕಳಲೆ ಶಕ್ತಿ ಕೇಂದ್ರದ ಪಕ್ಷದ ವಿಸ್ತಾರಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ 1902 ಕಾರ್ಯಕರ್ತರು ಭಾಗಿಯಾಗಿ 234 ಬೂತ್‌ನಲ್ಲಿ ಕೆಲಸ ಮಾಡಿದ್ದಾರೆ ಎಂದರು. 

ಪಕ್ಷವೇ ಅಭ್ಯರ್ಥಿ: ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಸಚಿವ ಕೋಟೆ ಶಿವಣ್ಣ  ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್‌ ನೀಡಲು ಯಾರು ಸಮರ್ಥ ಅಭ್ಯರ್ಥಿ ಎಂಬುದಾಗಿ ಗುರುತಿಸಲು ರಾಜ್ಯ ನಾಯಕರು ಸರ್ವೆ ಮಾಡುತ್ತಿದ್ದು, ಯಾರಿಗೆ ಟಿಕೆಟ್‌ ದೊರೆತರೂ ಕಾರ್ಯಕರ್ತರು ಪಕ್ಷವೇ ಅಭ್ಯರ್ಥಿ ಎಂದು ಅರಿತು ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.

 ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಬೇಕು. 236 ಬೂತ್‌ ಕಮಿಟಿಗಳು ಬಲಿಷ್ಟವಾಗಬೇಕು. ವಿಸ್ತಾರಕ ಕಾರ್ಯಕ್ರಮದಿಂದ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಕಾರ್ಯಕ್ರಮಗಳು ಹಾಗೂ ಹಿಂದಿನ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಜಿಲ್ಲೆಯಲ್ಲಿ ಕನಿಷ್ಠ 6 ಶಾಸಕರನ್ನಾದರೂ ಪಕ್ಷದಿಂದ ಆರಿಸಿ ಬರಬೇಕು. ಆಗ ಮಾತ್ರ ನಮಗೆ ಗೌರವ ಸಿಗುತ್ತದೆ ಎಂದರು.

ಬಿಎಸ್‌ವೈ ಮುಂದಿನ ಸಿಎಂ: ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ವಿಫ‌ಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ನಡೆಸುತ್ತಿದ್ದಾರೆ.. ಅಧಿಕಾರ ಹೋದ ನಂತರ ಮುಖ್ಯಮಂತ್ರಿಗಳ ಬಳಿ ಯಾರೂ ಇರುವುದಿಲ್ಲ, ಜೆಡಿಎಸ್‌ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಾಗಿಲ್ಲ. ಮುಂದಿನ ಚುನಾವಣೆಯಲ್ಲಿ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜನರ ಸಮಸ್ಯೆ ಅರಿಯಿರಿ:ತಾಲೂಕು ವಿಸ್ತಾರಕ ಕಾರ್ಯಕ್ರಮದ ಉಸ್ತುವಾರಿ, ರಾಜ್ಯ ಸ್ಲಂ ಮೋರ್ಚಾ ಉಪಾಧ್ಯಕ್ಷ ಕೌಟಿಲ್ಯ ರಘು ಮಾತನಾಡಿ, ಈ ಕಾರ್ಯಕ್ರಮದಿಂದ ಜನರ ಹತ್ತಿರ ಹೋಗಲಿಕ್ಕೆ ಸಾಧ್ಯವಾಗಿದೆ. ಇದರಿಂದ ಸಮುದಾಯ, ವಿವಿಧ ವರ್ಗಗಳ ಸಮಸ್ಯೆ ಅರಿಯಲು ಸಹಕಾರಿಯಾಗಿದೆ. ಅಲ್ಲದೇ ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಗೆ ಪರಿಣಾಮಕಾರಿ ಪ್ರಣಾಳಿಕೆ ತಯಾರಿಸಿ ಬಿ.ಎಸ್‌. ಯಡಿಯೂರಪ್ಪಅವರನ್ನು ಮುಖ್ಯಮಂತ್ರಿ ಮಾಡಲು ಅನುಕೂಲವಾಗುತ್ತದೆ ಎಂದರು.

ಯುವಕರು, ಮಹಿಳೆಯರು ಮೊಬೈಲ್‌ ಮೂಲಕ ಪಕ್ಷದ ಸದಸ್ಯರಾಗುತ್ತಿದ್ದಾರೆ. ಕಳೆದ ಉಪಚುನಾವಣೆಯಲ್ಲಿ ನಡೆದ ಕಾಂಗ್ರೆಸ್‌ನ ಪಿತೂರಿಯು ಮುಂದಿನ ಚುನಾವಣೆಯಲ್ಲಿ ನಡೆಯುವುದಿಲ್ಲ. ಮೋದಿ ಕಾರ್ಯಕ್ರಮದಿಂದ ಜನರು ಬಿಜೆಪಿ ಕಡೆ ಒಲವು ತೋರಿಸಿದ್ದಾರೆ.  

ನಿರಂತರವಾಗಿ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅದನ್ನು ಬಗೆಹರಿಸಲು ಶ್ರಮಿಸಬೇಕು ಎಂದು ಮನವಿ ಮಾಡಿದರು. ಶಕ್ತಿ ಕೇಂದ್ರ ವಿಸ್ತಾರಕ ಉಸ್ತುವಾರಿ, ಹಾಪ್‌ಕಾಮ್ಸ್‌ ಜಿಲ್ಲಾಧ್ಯಕ್ಷ ಡಿ.ಪಿ.ಬೋರೇಗೌಡ ಮಾತನಾಡಿ, ಕಳಲೆ ಶಕ್ತಿ ಕೇಂದ್ರದಲ್ಲಿ ಈ ಕಾರ್ಯಕ್ರಮ ನಿರೀಕ್ಷೆಗೆ ಮೀರಿ ಯಶಸ್ವಿಯಾಗಿದೆ ಎಂದರು. 

ಸಮಾರಂಭದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಅಶೋಕ್‌, ಪ್ರಧಾನ ಕಾರ್ಯದ‌ರ್ಶಿ ಫ‌ಣೀಶ್‌, ರಾಜ್ಯ ಕಾರ್ಯಕಾರಿಣಿ ಸದಸ್ಯ ಸುಬ್ಬಣ್ಣ, ಕೃಷ್ಣಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಕೆಂಡಗಣ್ಣಪ್ಪ, ಮಾರ್ಬಳ್ಳಿ ಮೂರ್ತಿ, ಜಿಪಂ ಮಾಜಿ ಸದಸ್ಯ ಎಸ್‌.ಎಂ. ಕೆಂಪಣ್ಣ, ಕೇಬಲ್‌ ಸಿದ್ದರಾಜು, ಎಪಿಎಂಸಿ ಸದಸ್ಯ ಗುರುಸ್ವಾಮಿ, ಕಳಲೆ ಶಕ್ತಿ ಕೇಂದ್ರದ ಅಧ್ಯಕ್ಷ ಮಹದೇವಪ್ಪ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಮುಖಂಡರು ಕಾರ್ಯಕರ್ತರು ಗ್ರಾಮದಲ್ಲಿ ಸಸಿ ನೆಡುವಿಕೆ ಹಾಗೂ ಸ್ವತ್ಛತಾ ಕಾರ್ಯ ನೆರವೇರಿಸಿದರು.

ಟಾಪ್ ನ್ಯೂಸ್

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.