ಬೈಕಂಪಾಡಿ: ದೋಣಿ ಮಗುಚಿ ಓರ್ವ ನಾಪತ್ತೆ, 7 ಮಂದಿಯ ರಕ್ಷಣೆ
Team Udayavani, Jul 31, 2017, 8:05 AM IST
ಸುರತ್ಕಲ್: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಶ್ರೀಲಕ್ಷ್ಮೀ ದೋಣಿ ಬಲವಾದ ಗಾಳಿ ಬೀಸಿದ ಸಂದರ್ಭ ನಿಯಂತ್ರಣ ಕಳೆದುಕೊಂಡು ಮಗುಚಿಬಿದ್ದ ಪರಿಣಾಮ ಓರ್ವ ನಾಪತ್ತೆಯಾಗಿದ್ದು , ಏಳು ಮಂದಿಯನ್ನು ರಕ್ಷಿಸಲಾಗಿದೆ.
ರವಿವಾರ ಮಧ್ಯಾಹ್ನ ಬೈಕಂಪಾಡಿ ಸಮೀಪ ಸಮುದ್ರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಪ್ರೇಮ್ನಾಥ್ ಸಾಲ್ಯಾನ್ (50) ನಾಪತ್ತೆಯಾಗಿದ್ದು, ಇತರ ಮೀನುಗಾರರಾದ ವಿಜಿತ್, ಅಶೋಕ್ ಮೆಂಡನ್, ಜಗದೀಶ್, ಮನಿತ್, ಸವಿನ್, ನಾಗೇಶ್,ಅವಿನಾಶ್ ಅವರ ಪೈಕಿ ಮೂವರು ಈಜಿ ದಡ ಸೇರಿದರೆ ಉಳಿದವರನ್ನು ಸಮೀಪದಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಇತರ ಮೀನುಗಾರರು ರಕ್ಷಿಸಿದರು. ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ಎಳೆದು ತರುವಲ್ಲಿ ದಡದಲ್ಲಿದ್ದ ಮೀನುಗಾರರು ನೆರವು ನೀಡಿದರು.ಕಾಣೆಯಾದ ಮೀನುಗಾರನ ಪತ್ತೆಗಾಗಿ ಸಹ ದೋಣಿಯಲ್ಲಿದ್ದ ಮೀನುಗಾರರು ಹುಡುಕಾಟ ನಡೆಸಿದರೂ ಪತ್ತೆ ಮಾಡಲು ಸಾಧ್ಯವಾಗಲಿಲ್ಲ. ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಶಾಸಕ ಮೊದಿನ್ ಬಾವಾ, ತಹಶೀಲ್ದಾರ್ ಮಹದೇವಯ್ಯ, ಕಂದಾಯ ಅಧಿಕಾರಿ ನವೀನ್ ಭೇಟಿ ನೀಡಿ ಮಾಹಿತಿಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.