ಹತ್ಯೆ ಪ್ರಕರಣ: ಮಾಹಿತಿ ಪಡೆದ ಕೇರಳ ಗವರ್ನರ್
Team Udayavani, Jul 31, 2017, 8:25 AM IST
ಹೊಸದಿಲ್ಲಿ /ತಿರುವನಂತಪುರ: ಕೇರಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿ ರಾಜ್ಯಪಾಲ ನ್ಯಾ| ಪಿ.ಸದಾಶಿವಂ ಮಧ್ಯಪ್ರವೇಶಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಪೊಲೀಸ್ ಮಹಾ ನಿರ್ದೇಶಕ ಲೋಕನಾಥ್ ಬೆಹಾರ ಜತೆಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕೂಡ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಿದ್ದಾರೆ. ಈ ನಡುವೆ ಪ್ರಕರಣ ಸಂಬಂಧ ಐವರನ್ನು ವಶಕ್ಕೆ ಪಡೆಯಲಾಗಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸಿಎಂ ವಿಜಯನ್ಗೆ ಫೋನ್ ಮಾಡಿ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ ಸಹಿತ ಕೇರಳದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ರಾಜಕೀಯ ಹತ್ಯೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಪ್ರಜಾ ಪ್ರಭುತ್ವ ವ್ಯವಸ್ಥೆಯಡಿ ಹಿಂಸೆಗೆ ಅವಕಾಶ ಇಲ್ಲ. ಕೇರಳದಲ್ಲಿನ ರಾಜಕೀಯ ಹಿಂಸಾಚಾರಗಳನ್ನು ನಿರ್ದಾಕ್ಷಿಣ್ಯ ವಾಗಿ ಹತ್ತಿಕ್ಕುವ ಕ್ರಮಗಳನ್ನು ಸರಕಾರದಿಂದ ನಿರೀಕ್ಷಿಸುವುದಾಗಿ ವಿಜಯನ್ಗೆ ಹೇಳಿರುವುದಾಗಿ’ ರಾಜನಾಥ್ ಟ್ವೀಟ್ ಮಾಡಿದ್ದಾರೆ.
ತನಿಖೆ ನಡೆಯುತ್ತಿದೆ: ಘಟನೆ ಬಗ್ಗೆ ವಿವರಣೆ ನೀಡಿರುವ ತಿರುವನಂತಪುರ ಪೊಲೀಸ್ ಆಯುಕ್ತ ಜಿ.ಸ್ಪರ್ಜನ್ ಕುಮಾರ್ ಐವರನ್ನು ವಶಕ್ಕೆ ಪಡೆಯಲಾಗಿದೆ. ಈ ಪೈಕಿ ಒಬ್ಬ ರೌಡಿ ಶೀಟರ್ ಕೂಡ ಸೇರಿದ್ದಾನೆ. ಪೊಲೀಸರಿಂದ ತನಿಖೆ ಮುಂದುವರಿದಿದೆ. ಫೇಸ್ಬುಕ್ ಮತ್ತು ವಾಟ್ಸ್ಆ್ಯಪ್ ಗ್ರೂಪ್ಗ್ಳಲ್ಲಿ ವದಂತಿ ಹಬ್ಬಿಸಬಾರದು ಎಂದು ಮನವಿ ಮಾಡಿದ್ದಾರೆ. ಒಂದು ವೇಳೆ ಅಂಥ ಬೆಳವಣಿಗೆಗಳು ಕಂಡು ಬಂದಲ್ಲಿ ಕಠಿನ ಕ್ರಮ ಕೈಗೊಳ್ಳಲಾತ್ತದೆ ಎಂದು ಪೊಲೀಸ್ ಮಹಾ ನಿರ್ದೇಶಕ ಲೋಕನಾಥ್ ಬೆಹಾರ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಘಟನೆ ಖಂಡಿಸಿ ಬಿಜೆಪಿ ದಿನದ ಬಂದ್ಗೆ ಕರೆ ನೀಡಿತ್ತು. ಕಲ್ಲೆಸೆತ, ಘರ್ಷಣೆಗಳು ನಡೆದಿವೆ. ಆರ್ಎಸ್ಎಸ್ ಕಾರ್ಯಕರ್ತನ ಹತ್ಯೆಗೆ ಯಾವುದೇ ರಾಜಕೀಯ ನಂಟು ಇಲ್ಲವೆಂದು ಸಿಪಿಎಂ ಕೇರಳ ಘಟಕ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.