ಸಾಮಾಜಿಕ ಜಾಲತಾಣಗಳ ಬಗ್ಗೆ ಜಾಗೃತಿ ಅವಶ್ಯ: ಹೆಗಡೆ


Team Udayavani, Jul 31, 2017, 12:46 PM IST

hub1.jpg

ಹುಬ್ಬಳ್ಳಿ: ಇಲ್ಲದ್ದನ್ನು ಇದ್ದಂತೆಯೇ ಸೃಷ್ಟಿಸಿ ದಾರಿ ತಪ್ಪಿಸುವ ಸಾಮಾಜಿಕ ಜಾಲತಾಣಗಳ ಮಾಹಿತಿಗಳ ಬಗ್ಗೆ ಮಾಧ್ಯಮದವರು ಅಗತ್ಯ ಜಾಗೃತಿ ವಹಿಸುವ ಅನಿವಾರ್ಯತೆ ಇದೆ ಎಂದು ಟಿಎಸ್‌ಆರ್‌ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ನಾಗೇಶ ಹೆಗಡೆ ಹೇಳಿದರು. ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರವಿವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಪ್ರಶಸ್ತಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದು ಸಾಮಾಜಿಕ ಜಾಲತಾಣಗಳಾದ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ಗಳಲ್ಲಿ ಇಲ್ಲಸಲ್ಲದ ವಿಷಯಗಳನ್ನು ಮಾಹಿತಿ ರೂಪದಲ್ಲಿ ಹಾಕಲಾಗುತ್ತದೆ. ಎಲ್ಲಿಯದೋ ಚಿತ್ರ, ಇನ್ನೆಲ್ಲಿಯದೋ ಮಾಹಿತಿಯನ್ನು ತಮ್ಮಿಷ್ಟದಂತೆ ಜೋಡಿಸಿ ನೀಡಲಾಗುತ್ತಿದೆ. ಇದನ್ನು ನಂಬಿ ಘಟನೆ ನಡೆದಿರಬಹುದು ಎಂದು ಸುದ್ದಿ ನೀಡುವ ಕಾರ್ಯ ಆಗಬಾರದು. ಈ ಬಗ್ಗೆ ಜಾಗೃತಿ ಮೂಡಿಸುವ ಜವಾಬ್ದಾರಿ ಮಾಧ್ಯಮದವರ ಮೇಲಿದೆ ಎಂದರು.

ಮಾಧ್ಯಮವರಿಗೆ ಸಕಾಲಿಕ ಹಾಗೂ ಸರಿಯಾದ ಅವಕಾಶಗಳು ಸಿಕ್ಕರೆ ಅನೇಕ ಸಾಧನೆಗಳನ್ನು ಮಾಡಬಲ್ಲರು. ಇಂತಹ ಸಾಧನೆಗೆ ಸದಾ ಎಚ್ಚರ ಹಾಗೂ ದೃಷ್ಟಿಕೋನ ಅವಶ್ಯ ಎಂದರು. ತಮಗೆ ಟಿಎಸ್‌ಆರ್‌ ಪ್ರಶಸ್ತಿ ಬಂದಾಗ ಅಭಿನಂದಿಸಿ ಪತ್ರ ಬರೆದ ಇಬ್ಬರು ರಾಜಕಾರಣಿಗಳಲ್ಲಿ ಒಬ್ಬರು ಆರ್‌.ವಿ.ದೇಶಪಾಂಡೆ ಹಾಗೂ ಇನ್ನೊಬ್ಬರು ಬಸವರಾಜ ಹೊರಟ್ಟಿ ಅವರಾಗಿದ್ದಾರೆ ಎಂದು ಹೇಳಿದರು.

ಸಮಾಜ ಬದಲಾವಣೆ ಶಕ್ತಿ: ಸಮಾರಂಭ ಉದ್ಘಾಟಿಸಿದ ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಮಾಧ್ಯಮ ಸಮಾಜ ಬದಲಾಯಿಸುವ ಶಕ್ತಿ ಹೊಂದಿದೆ. ಮಾಧ್ಯಮ ಹಾಗೂ ಪೊಲೀಸ್‌ ಕ್ಲಿಷ್ಟ ಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ಕರ್ನಾಟಕದಲ್ಲಿ ಮಾಧ್ಯಮ ಸದೃಢವಾಗಿದೆ. ಎಲ್ಲೋ ಕೆಲವರು ಮಾಧ್ಯಮಕ್ಕೆ ಕೆಟ್ಟ ಹೆಸರು ತರುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದರು. ಸಮಾಜದಲ್ಲಿ ವಿವಿಧ ರಂಗಗಳು ದಾರಿ ತಪ್ಪಿದಾಗ ಅದನ್ನು ಎಚ್ಚರಿಸಿ ಸರಿದಾರಿಗೆ ತರುವ ಕಾರ್ಯವನ್ನು ಮಾಧ್ಯಮ ಮಾಡುತ್ತದೆ.

ಪ್ರಶಸ್ತಿಗಳ ಬೆನ್ನಿಗೆ ಬಿದ್ದು ಅಡ್ಡಾಡಿ, ಕಂಡ ಕಂಡ ಶಿಫಾರಸು ಮಾಡಿಸಿ ಪ್ರಶಸ್ತಿ ಪಡೆದರೆ ಅದಕ್ಕೆ ಬೆಲೆ ಇಲ್ಲ. ಸಾಧನೆಗಳನ್ನು ಗುರುತಿಸಿ ಪ್ರಶಸ್ತಿಗಳೇ ಹುಡುಕಿ ಬರುವಂತಾಗಬೇಕು ಎಂದು ಹೇಳಿದರು. ಮೊಹರೆ ಹನುಮಂತರಾಯ ಪ್ರಶಸ್ತಿಗೆ ಆಯ್ಕೆಯಾಗಿರುವ ಗಂಗಾಧರ ಹಿರೇಗುತ್ತಿ ಮಾತನಾಡಿ, ತಮ್ಮ ಪತ್ರಿಕಾ ಬದುಕಿನ ಹಲವು ಸಂಘರ್ಷ, ಏರಿಳಿತ, ಅವಮಾನ, ಸಂಕಷ್ಟಗಳನ್ನು ಎದುರಿಸಿದ ಬಗೆಯನ್ನು ಬಿಚಿrಟ್ಟರು. 

ಜೀವಮಾನ ಪ್ರಶಸ್ತಿ ಪ್ರದಾನ: ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ನಾರಾಯಣ ಘಳಗಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ವಿವಿಧ ಸಾಧನೆ ತೋರಿದ ಪತ್ರಕರ್ತರಾದ ಮರಿದೇವ ಹೂಗಾರ, ನವೀನ ಬಿಲ್ಗುಣಿ, ದತ್ತಾತ್ರೇಯ ಪಾಟೀಲ, ಹೇಮಂತ ದೊಡ್ಡಮನಿ, ನಿಂಗಪ್ಪ ಕಡಪಟ್ಟಿ , ಗುರುರಾಜ ಸಬನೀಸ್‌ ಅವರನ್ನು ಸನ್ಮಾನಿಸಲಾಯಿತು. 

ಹಿರಿಯ ಪತ್ರಕರ್ತರಾದ ಲಕ್ಷ್ಮೀಕಾಂತ ಬೀಳಗಿ, ಅನಂತ ಸುಂಕದ, ನಾರಾಯಣ ಶಾಸ್ತ್ರೀ, ಪ್ರಭಾಕರ ನಾಯಕ, ಬಸವರಾಜ ಕುಬಸದ, ರಾಜಶೇಖರ ಸುಣಗಾರ ಅವರನ್ನು ಸನ್ಮಾನಿಸಲಾಯಿತು. ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣಪತಿ ಗಂಗೊಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪತ್ರಕರ್ತರ ಸಂಘ ಸಂಘದ ರಾಜ್ಯ ಕಾರ್ಯದರ್ಶಿ ಲೋಚನೇಶ ಹೂಗಾರ ವೇದಿಕೆಯಲ್ಲಿದ್ದರು. ಗಿರೀಶ ಪಟ್ಟಣಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ವೀರೇಶ ಹಂಡಿಗಿ ನಿರೂಪಿಸಿದರು.  

ಟಾಪ್ ನ್ಯೂಸ್

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

1-wqewqeqwe

Cardiac arrest: ಗುಜರಾತ್‌ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

naksal (2)

Chhattisgarh: ನಕ್ಸಲರು ಇಟ್ಟಿದ್ದ ಐಇಡಿ ಸ್ಫೋ*ಟ, ವ್ಯಕ್ತಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.