ಬೆಂಗಳೂರು ಪೊಲೀಸ್ ಕಮಿಷನರ್ ಪ್ರವೀಣ್ ಸೂದ್ ವರ್ಗಾವಣೆ
Team Udayavani, Jul 31, 2017, 6:56 PM IST
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಮತ್ತು ಪೊಲೀಸ್ ಕಮೀಷನರ್ ಆಗಿದ್ದ ಪ್ರವೀಣ್ ಸೂದ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಸೋಮವಾರದಂದು ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡಿರುವ ಪ್ರವೀಣ್ ಸೂದ್ ಅವರ ಜಾಗಕ್ಕೆ ಟಿ. ಸುನೀಲ್ ಕುಮಾರ್ ಅವರನ್ನು ಬೆಂಗಳೂರು ನಗರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಕಮಿಷನರ್ ಆಗಿ ನೆಮಿಸಲಾಗಿದೆ. ತತ್ ಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ಈ ಆದೇಶವನ್ನು ಹೊರಡಿಸಿದೆ. ಸುನಿಲ್ ಕುಮಾರ್ ಅವರು ಈ ಹಿಂದೆ ಕರ್ನಾಟಕ ರಾಜ್ಯ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್ ಇದರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಆಡಳಿತ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕಮಿಷನರ್ ಹುದ್ದೆಯಿಂದ ವರ್ಗಾವಣೆಗೊಂಡಿರುವ ಪ್ರವೀಣ್ ಸೂದ್ ಅವರು ಇನ್ನು ಮುಂದೆ ಕಮ್ಯುನಿಕೇಷನ್, ಲಾಜಿಸ್ಟಿಕ್ಸ್ ಮತ್ತು ಮಾಡರ್ನೆçಜೇಶನ್ ಬೆಂಗಳೂರು ಇದರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನಿಯಕ್ತಿಗೊಂಡಿದ್ದಾರೆ. ಇದಲ್ಲದೆ ಆಶಿತ್ ಮೋಹನ್ ಪ್ರಸಾದ್ ಅವರನ್ನು ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಭಡ್ತಿ ನೀಡಲಾಗಿದೆ. ಮತ್ತು ಬೆಂಗಳೂರು ಇಂಟಲಿಜೆನ್ಸ್ ಪೊಲೀಸ್ ಮಹಾನಿರ್ದೇಶಕರ ಹುದ್ದೆಯನ್ನು ಸ್ಥಾನಮಾನ ಹಾಗೂ ಜವಾಬ್ದಾರಿ ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕರು, ಕಮಾಂಡೆಂಟ್ ಜನರಲ್, ಹೋಮ್ ಗಾರ್ಡ್ಸ್, ಎಕ್ಸ್-ಆಫಿಸಿಯೋ ಡೈರೆಕ್ಟರ್ ಅಗ್ನಿಶಾಮಕ ದಳ ಬೆಂಗಳೂರು ಇವುಗಳ ತತ್ಸಮಾನ ಸ್ಥಾನಕ್ಕೇರಿಸಿಯೂ ಕೂಡ ರಾಜ್ಯಸರಕಾರವು ಆದೇಶವನ್ನು ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.