ಐಎಎಸ್ ಅಧಿಕಾರಿ ಬಡೇರಿಯಾಗೆ ಮತ್ತೆ ಸಂಕಷ್ಟ
Team Udayavani, Aug 1, 2017, 6:55 AM IST
ಬೆಂಗಳೂರು: ಅಕ್ರಮ ಗಣಿಗಾರಿಕೆಗೆ ಪರವಾನಗಿ ನೀಡಿದ ಆರೋಪ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಬಡೇರಿಯಾ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾ.ರತ್ನಕಲಾ ಅವರಿದ್ದ ಏಕಸದಸ್ಯ ಪೀಠ, ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಎಸ್ ಐಟಿ ಅಧಿಕಾರಿಗಳಿಗೆ ಸೂಚಿಸಿ ಆಗಸ್ಟ್ 8ಕ್ಕೆ ವಿಚಾರಣೆ ಮುಂದೂಡಿತು. ಈ ಹಿಂದೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶರಾಗಿದ್ದ ಗಂಗಾರಾಮ್ ಬಡೇರಿಯಾ, ನಿಯಮಾವಳಿಗಳನ್ನು ಉಲ್ಲಂ ಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಹಾಗೂ ಹನುಮಾನ್ ಗಣಿ ಕಂಪನಿಗೆ ಗಣಿಗಾರಿಕೆ ನಡೆಸಲು ಪರವಾನಗಿ ನೀಡಿದ್ದರೆಂದು ಆರೋಪಿಸಿ ಎಸ್ಐಟಿ ಅಧಿಕಾರಿಗಳು ಎರಡು ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಿಕೊಂಡಿದ್ದಾರೆ. ಹೀಗಾಗಿ, ಬಂಧನ ಭೀತಿ ಎದುರಿಸುತ್ತಿರುವ ಬಡೇರಿಯಾ ನಿರೀಕ್ಷಣಾ ಜಾಮೀನು ಅರ್ಜಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದರಿಂದ ಹೈಕೋರ್ಟ್ ಮೊರೆಹೋಗಿದ್ದಾರೆ.
ಜಂತಕಲ್ ಗಣಿ ಕಂಪನಿಗೆ ನಿಯಮಬಾಹಿರಾಗಿ ಪರವಾನಗಿ ನೀಡಿದ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ಮೇ 15ರಂದು ಬಂಧಿತರಾಗಿ ಕೆಲ ಕಾಲ ನ್ಯಾಯಾಂಗ ಬಂಧನಲ್ಲಿದ್ದರು. ನಂತರ ಜಾಮೀನು ಪಡೆದು ಬಿಡುಗಡೆಗೊಂಡಿರುವ ಬಡೇರಿಯಾಗೆ, ಇದೀಗ ಮತ್ತೆರಡು ಪ್ರಕರಣಗಳಲ್ಲಿ ಬಂಧನ ಭೀತಿ ಶುರುವಾಗಿದೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ
Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ
Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್ ನಿಲ್ದಾಣವೇ ಇಲ್ಲ !
”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್
Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.