ಲಾಲುಗೆ ಇನ್ನಷ್ಟು ಸಂಕಷ್ಟ; ಮಗನ ಮರಳು ಡೀಲ್ ವಿರುದ್ಧ ತನಿಖೆ
Team Udayavani, Aug 1, 2017, 10:00 AM IST
ಪಟ್ನಾ: ಮಹಾಘಟಬಂಧನ್ ಮುರಿದುಕೊಂಡು ಬಿಜೆಪಿ ಜೊತೆ ಸೇರಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಗೆ ಇನ್ನಷ್ಟು ಸಂಕಷ್ಟ ಎದುರಾಗಿದೆ. ಮಹಾಘಟಬಂಧನ್ ಸರ್ಕಾರವಿದ್ದ ವೇಳೆ ಪಟ್ನಾ ಮೃಗಾಯಲಯದ ಮರಳು ಖರೀದಿಯಲ್ಲಿ ಅವ್ಯವಹಾರ ಮಾಡಿರುವ ಕುರಿತು ಲಾಲು ಹಿರಿಯ ಪುತ್ರ ತೇಜ್ ಪಾಲ್ ಯಾದವ್ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.
ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಮರಳು ಖರೀದಿ ಅಕ್ರಮ ನಡೆಸಿರುವ ಕುರಿತಾಗಿ ಪರಿಸರ ಮತ್ತು ಅರಣ್ಯ ಸಚಿವರಾಗಿದ್ದ ಲಾಲು ಪುತ್ರ ತೇಜ್ ಪ್ರತಾಪ್ ಮೇಲೆ ಆರೋಪ ಮಾಡಿದ್ದರು. ಸಾಗುನಾ ಮೋರ್‌ನಲ್ಲಿ ಸಿಟಿ ಮಾಲ್ ನಿರ್ಮಾಣಕ್ಕೆ ಮೃಗಾಲಯಕ್ಕೆ 90 ಲಕ್ಷ ರೂಪಾಯಿ ನೀಡಿ ಖರೀದಿಸಿದ್ದ ಮರಳನ್ನು ಯಾವುದೇ ಟೆಂಡರ್ ಕರೆಯದೆ ಬಳಸಿಕೊಳ್ಳಲಾಗಿದೆ ಎಂದು ಆರೋಪ ಮಾಡಿದ್ದರು. ಮಾತ್ರವಲ್ಲದೆ ಮಾಲ್ ನಿರ್ಮಾಣ ಮಾಡಲಾಗುತ್ತಿರುವ ಡಿಲೈಟ್ ಮಾರ್ಕೆಟಿಂಗ್ ಕಂಪೆನಿಯಲ್ಲಿ ಲಾಲು ಪುತ್ರರಿಬ್ಬರು ಆಡಳಿತ ಮಂಡಳಿಯ ನಿರ್ದೇಶಕರಾಗಿದ್ದರು ಎಂದು ಆರೋಪಿಸಿದ್ದರು.
ಈ ಹಿಂದೆ ಮರಳು ಖರೀದಿ ಕುರಿತಾಗಿನ ತನಿಖೆಯಲ್ಲಿ ಹಗರಣ ನಡೆದಿರುವ ಕುರಿತು ಕಂಡು ಬಂದಿರಲಿಲ್ಲಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಜನಿ ಕುಮಾರ್ ಸಿಂಗ್ ಹೇಳಿದ್ದರು. ಇದೀಗ ಹೊಸ ಕಡತಗಳನ್ನುತನಿಖೆಗೆ ಅರಣ್ಯ ಅಧಿಕಾರಿಗಳಿಗೆ ನೀಡಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.