ಹೆಜಮಾಡಿ ಹಳೆ ರಸ್ತೆಯ ನೂತನ ಕಿರು ಸೇತುವೆ ಉದ್ಘಾಟನೆ

Team Udayavani, Aug 2, 2017, 7:30 AM IST

setuve-udgatane.jpg

ಪಡುಬಿದ್ರಿ: ಹೆಜಮಾಡಿಯ ಒಳ ರಸ್ತೆಯಲ್ಲಿ ತಿಂಗಳೊಂದರ ಹಿಂದೆ ಕುಸಿದಿದ್ದ ಬ್ರಿಟಿಷ್‌ ಕಾಲದ ಕಿರು ಸೇತುವೆಯನ್ನು ಪ್ರಕೃತಿ ವಿಕೋಪ ನಿಧಿಯಿಂದ ನಿರ್ಮಿಸಲಾಗಿದ್ದು ರವಿವಾರ ಶಾಸಕ ವಿನಯಕುಮಾರ್‌ ಸೊರಕೆ ಉದ್ಘಾಟಿಸಿ, ಸಂಚಾರಕ್ಕೆ ಮುಕ್ತಗೊಳಿಸಿದರು.

ಹೆಜಮಾಡಿ ಟೋಲ್‌ ತಪ್ಪಿಸಿ ನೂರಾರು ಘನ ವಾಹನಗಳು ಹೆಜಮಾಡಿಯ ಹಳೆ ಎಂಬಿಸಿ ಒಳ ರಸ್ತೆಯಲ್ಲಿ ನಿರಂತರ ಚಲಿಸಿದ ಪರಿಣಾಮ ಬ್ರಿಟಿಷ್‌ ಕಾಲದಲ್ಲಿ ಕಟ್ಟಲಾಗಿದ್ದ ಕಿರು ಸೇತುವೆ ಕುಸಿದು ಸಾರ್ವಜನಿಕ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಈ ಕುರಿತು ತ್ವರಿತವಾಗಿ ಸ್ಪಂದಿಸಿದ ಶಾಸಕ ವಿನಯ ಕುಮಾರ್‌ ಸೊರಕೆ ಅವರು ಘಟನೆ ನಡೆದ ದಿನದಂದೇ ಎಂಜಿನಿಯರ್‌ ಗಳನ್ನು ಕರೆಸಿ ತ್ವರಿತ ಸೇತುವೆ ನಿರ್ಮಾಣಕ್ಕೆ ಸೂಚಿಸಿದ್ದರು. ಅದರಂತೆ ಸುಮಾರು 10 ಲಕ್ಷ ರೂ. ವೆಚ್ಚದ ಸೇತುವೆಯನ್ನು ನಿರ್ಮಿಸಲಾಗಿದೆ.

ಈ ಸಂದರ್ಭ ಮಾತನಾಡಿದ ಶಾಸಕ ಸೊರಕೆ ಅವರು, ಹೆಜಮಾಡಿಯ ಒಳರಸ್ತೆಯಲ್ಲಿ ಟೋಲ್‌ ತಪ್ಪಿಸಿ ಬರುವ ಘನ ವಾಹನಗಳನ್ನು ಇಂದಿನಿಂದಲೇ ನಿಷೇಧಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು. ಈ ಬಗ್ಗೆ ಸಂಬಂಧಿತ ಇಲಾಖೆಗೆ ಸೂಚನೆ ನೀಡಲಾಗಿದೆ. ಲಘು ವಾಹನ ಸಹಿತ ಸರ್ವಿಸ್‌ ಬಸ್ಸುಗಳಿಗೆ ಮಾತ್ರ ಒಳ ಪ್ರವೇಶಕ್ಕೆ ಅನುಮತಿ ನೀಡಲಾಗುವುದು.

ಘನ ವಾಹನಗಳ ಸಂಚಾರದಿಂದ ಹದಗೆಟ್ಟಿರುವ ಹೆಜಮಾಡಿಯ ಒಳ ರಸ್ತೆಗಳ ಅಭಿವೃದ್ಧಿಗೆ ಜಿಪಂ ನಿಧಿ ಬಳಸಲಾಗುವುದು. ಅದೇ ರೀತಿ ಹೆಜಮಾಡಿ,ಕಾಪು,ಪಡುಬಿದ್ರಿ ಮತ್ತು ಕಟಪಾಡಿಯ ಹಳೇ ಎಂಬಿಸಿ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಈ ಸಂದರ್ಭ ತಾ. ಪಂ. ಸದಸ್ಯೆ ರೇಣುಕಾ ಪುತ್ರನ್‌, ಮುಖಂಡರುಗಳಾದ ಸುಧೀರ್‌ ಕರ್ಕೇರ, ದೊಂಬ ಪೂಜಾರಿ, ಶಿವರಾಮ ಶೆಟ್ಟಿ, ಜಯಶ್ರೀ, ಅಬ್ದುಲ್‌ ರಹಿಮಾನ್‌ ಪುತ್ತು ವಿಕ್ರಮ್‌ರಾಜ್‌, ತೇಜ್‌ಪಾಲ್‌ ಸುವರ್ಣ, ಕೇಶವ ಸಾಲ್ಯಾನ್‌, ವಸಂತ ಹೆಜ್ಮಾಡಿ, ಸುಭಾಸ್‌ ಜಿ. ಸಾಲ್ಯಾನ್‌, ಗುತ್ತಿಗೆದಾರ ಎಚ್‌. ಎಸ್‌. ಮೊಹಮ್ಮದ್‌ ಆಲಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.