ಒಳ ಹರಿವು ಇಳಿಮುಖ, ನಾಲೆಗಳಿಗೆ ನೀರಿಲ್ಲ


Team Udayavani, Aug 2, 2017, 11:51 AM IST

mys4.jpg

ಎಚ್‌.ಡಿ.ಕೋಟೆ: ಕೇರಳದ ವೈನಾಡು ಪ್ರದೇಶ ಹಾಗೂ ತಾಲೂಕಿನ ವ್ಯಾಪ್ತಿಯಲ್ಲಿ ಮತ್ತೆ ಮಳೆ ಮಾಯವಾಗಿದ್ದು, ರಾಜ್ಯದ ಜೀವನಾಡಿಗಳಲ್ಲೊಂದಾದ ತಾಲೂಕಿನ ಕಬಿನಿ ಜಲಾಶಯಕ್ಕೆ ಒಳ ಹರಿವು ದಿನೇ ದಿನೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳ ಮೂಲಕ ಈ ಬಾರಿಯೂ ರೈತರ ಜಮೀನುಗಳಿಗೆ ನೀರು ಹರಿಸುವುದು ಅನುಮಾನವಾಗಿದೆ.

ಮುಂಗಾರು ವೈಫ‌ಲ್ಯ ಮತ್ತು ಬಿದ್ದ ಅಲ್ಪ ಸ್ವಲ್ಪ ಮಳೆಯಿಂದಾಗಿ ಕಬಿನಿ ಜಲಾಶಯದಲ್ಲಿ ಸಂಗ್ರಹವಾಗಿದ್ದ ನೀರನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಮಿಳುನಾಡಿಗೆ ಹೊರ ಬಿಟ್ಟ ಹಿನ್ನೆಲೆಯಲ್ಲಿ ಈ ಅಚ್ಚುಕಟ್ಟು ವ್ಯಾಪ್ತಿಯ ಸಾವಿರಾರು ರೈತರ ಜಮೀನುಗಳ ಬೆಳೆಗೆ ನಾಲೆಗಳ ಮೂಲಕ ನೀರು ಕೊಡಲು ಅಧಿಕಾರಿಗಳಿಂದ ಸಾಧ್ಯವಾಗದಿರುವುದು ಬಹುತೇಕ ಖಚಿತವಾಗಿದೆ.

ಎಡ ಮತ್ತು ಬಲದಂಡೆ ನಾಲೆಗಳಿಗೆ ಜಲಾಶಯದಿಂದ ನೀರು ಬಿಡಬೇಕಾದರೆ ಸುಮಾರು 71 ಅಡಿಗಳಿಗೂ ಹೆಚ್ಚು ನೀರು ಶೇಖರಣೆಯಾಗುತ್ತಿರಬೇಕು, ಆದರೆ ಈಗಿನ ಪರಿಸ್ಥಿತಿಯಲ್ಲಿ ಜಲಾಶಯ ನೀರಿನ ಮಟ್ಟ ದಿನದಿಂದ ದಿನಕ್ಕೆ ನೀರಿನ ಕುಸಿಯುತ್ತಿರುವುದರಿಂದ ರೈತರ ಜಮೀನುಗಳಿಗೆ ನೀರು ಬಿಡಲು ಕಷ್ಟಕರವಾಗಲಿದೆ. ಈಗಾಗಲೇ ಜಲಾಶಯದ ನೀರಿನ ಮಟ್ಟವು 71.5 ಅಡಿಗಳಿದ್ದು, ಒಳಹರಿವಿನ ಪ್ರಮಾಣವು 3 ಸಾವಿರಕ್ಕಿಂತಲೂ ಕಡಿಮೆಯಾಗಿದ್ದು, ಹೊರಹರಿವಿನ ಪ್ರಮಾಣ 6 ಸಾವಿರಕ್ಕೂ ಹೆಚ್ಚಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಕುಸಿತ ಕಾಣುತ್ತಿದೆ.

ನಾಲೆಗಳ ವ್ಯಾಪ್ತಿಯಲ್ಲಿರುವಂತಹ ಕೆರೆ ಕಟ್ಟೆಗಳಿಗೆ ನೀರು ತುಂಬಿಸಿಕೊಳ್ಳುವ ಕೆಲಸಗಳಿಗೆ ಮಾತ್ರ ಮುಂದಾಗಬಹುದಾಗಿದೆ. ಕಳೆದ ಎರಡು ವರ್ಷಗಳಿಂದ ಈ ಭಾಗದ ಬೆಳೆಗೆ ಸಮರ್ಪಕವಾಗಿ ನೀರಿಲ್ಲದೆ ಕಂಗಲಾಗಿದ್ದ ರೈತರಿಗೆ ಈ ಬಾರಿಯೂ ಸಂಕಷ್ಟ ಎದುರಾಗಲಿದೆ. ರೈತರನ್ನು ಈ ಸಂಕಷ್ಟದಿಂದ ಪಾರು ಮಾಡಬೇಕಾದರೆ ವರುಣ ಕೃಪೆಯಿಂದ ಈಗಲೂ ಕೇರಳದ ವೈನಾಡು ಸೇರಿದಂತೆ ಜಲಾಶಯದ ಹಿನ್ನೀರು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬಂದರೆ ಮಾತ್ರ ನಮ್ಮ ರೈತರು ಸೇರಿದಂತೆ ಜಾನುವಾರುಗಳು ಹಾಗೂ ವನ್ಯಜೀವಿಗಳನ್ನು ಕಾಪಾಡುವುದರ ಜೊತೆಗೆ ಬಂದೊದಗಿರುವ ಸಂಕಷ್ಟ ದೂರಾಗಲಿದೆ.

ಜಲಾಶಯದ ನೀರಿನ ಸ್ಥಿತಿಗತಿಗಳನ್ನು ಅರಿತು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯುಕ್ತರಾದ ಜಯಂತಿ ಅವರಿಗೆ ಆದೇಶಿದ್ದಾರೆ. ಈ ಹಿನ್ನೆಲೆಯಲ್ಲಿ ನೀರಾವರಿ ನಿಗಮದ ಅಧಿಕಾರಿಗಳಿಂದ ಜಯಂತಿ ಅವರು ವರದಿ ಪಡೆದುಕೊಂಡಿದ್ದಾರೆ. ಇವರು ಜಲಾಶಯದಲ್ಲಿ ಈಗ ಸಂಗ್ರಹ ಇರುವ ನೀರನ್ನು ರೈತರ ಬೆಳೆಗಳಿಗೆ ಬಿಡುತ್ತಾರೋ ಅಥವಾ ಕೆರೆ ಕಟ್ಟೆಗೆ ತುಂಬಿಸಲು ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ?

* ಬಿ.ನಿಂಗಣ್ಣಕೋಟೆ

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.