ಧಾರ್ಮಿಕ ಕ್ಷೇತ್ರಗಳಿಂದ ಸೌಹಾರ್ದಕ್ಕೆ ನಾಂದಿ: ಪಾಟೀಲ
Team Udayavani, Aug 2, 2017, 2:43 PM IST
ಸೇಡಂ: ಧಾರ್ಮಿಕ ಕ್ಷೇತ್ರಗಳು ಮಾಡುವ ಕಾರ್ಯಗಳಿಂದಾಗಿ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.
ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿರ್ಮಿಸಿದ ಯಾತ್ರಿ ನಿವಾಸ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಂದು ದೇಶಕ್ಕೆ ಅಭಿವೃದ್ಧಿ, ಸಮೃದ್ಧಿಯೊಂದಿಗೆ ಅಧ್ಯಾತ್ಮಿಕತೆ ಅತ್ಯವಶ್ಯಕ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಹೆಜ್ಜೆ ಹಾಕುವುದರಿಂದ ದೇಶದ ಶ್ರೀಮಂತ ಸಂಸ್ಕೃತಿ ಉಳಿಸುವುದು ಸಾಧ್ಯವಾಗುತ್ತದೆ ಎಂದರು.
ಪ್ರವಾಸಿಗರ ನೆರವಿಗಾಗಿ ಪ್ರವಾಸಿ ಮಂದಿರ ನಿರ್ಮಿಸಲಾಗಿದೆ. ಅದರಂತೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಪಟ್ಟಣದೆಲ್ಲೆಡೆ ಯುಜಿಡಿ ಕಾಮಗಾರಿ ಕೈಗೊಳ್ಳಲಾಗಿದೆ. ಅನೇಕ ಜನಪರ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಈಗಾಗಲೇ ಹೈಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ 1500 ಕೋಟಿ ರೂ. ಅನುದಾನ ಬಿಡುಗಡೆ ಮಾಡುತ್ತಿದೆ. ಈ ನಿಟ್ಟಿನಲ್ಲಿ ಈ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮವಹಿಸಲಾಗುತ್ತಿದೆ. ಬಡವರ ಮಕ್ಕಳು ಉನ್ನತ ವ್ಯಾಸಂಗ ಮಾಡಲು ಅನುಕೂಲವಾಗುವಂತೆ 371ನೇ ಕಲಂ ಜಾರಿಗೊಳಿಸಲಾಗಿದೆ
ಎಂದು ಹೇಳಿದರು.
ಭಾಲ್ಕಿ ಮಠದ ಗುರುಬಸವ ಪಟ್ಟದೇವರು, ಶ್ರಿ ಕೊತ್ತಲ ಬಸವೇಶ್ವರ ಸಂಸ್ಥಾನದ ಸದಾಶಿವ ಸ್ವಾಮೀಜಿ. ನಗರ ಯೋಜನಾ ಪ್ರಾ ಕಾರದ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ, ಹಾಪಕಾಮ್ಸ್ ರಾಜ್ಯ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ಎಪಿಎಂಸಿ ಅಧ್ಯಕ್ಷ ಗುರುನಾಥರೆಡ್ಡಿ,
ಮಾಜಿ ಶಾಸಕ ಡಾ| ನಾಗರೆಡ್ಡಿ ಪಾಟೀಲ, ಅಶೋಕ ಮಹಾಡಿಕ ವೇದಿಕೆಯಲ್ಲಿದ್ದರು. ರಾಚಣ್ಣ ಬಳಗಾರ ನಿರೂಪಿಸಿದರು. ನಾಗೇಂದ್ರಪ್ಪ ಡೊಳ್ಳಾ ಸ್ವಾಗತಿಸಿದರು. ಅನಂತಯ್ಯ ಮುಸ್ತಾಜರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.