ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸಿ
Team Udayavani, Aug 3, 2017, 6:10 AM IST
ಮರವಂತೆ: ಆರ್ಥಿಕವಾಗಿ ಹಿಂದುಳಿದವರ ಪ್ರಗತಿಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆಗಳನ್ನು ಅಧಿಕಾರಿಗಳು ಜನರ ಮನೆಬಾಗಿಲಿಗೆ ತಲುಪಿಸಿದಾಗ, ಜನರು ತಮ್ಮ ಕೆಲಸ ಕಾರ್ಯ ಬಿಟ್ಟು ತಾಲೂಕು ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಬಹುದಾಗಿದೆ, ಕಾನೂನಿನ ಇತಿಮಿತಿಯಲ್ಲಿ ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಕಾರ್ಯವಾಗಬೇಕು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಹಾಗೂ ಶಾಸಕ ಗೋಪಾಲ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ನಾಗೂರು ಶೀ ಶಾಂತೇರಿ ಕಾಮಾಕ್ಷಿ ಸಭಾಭವನದಲ್ಲಿ ನಡೆದ ಕಿರಿಮಂಜೇಶ್ವರ, ಕಂಬದಕೋಣೆ, ಹೇರೂರು ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಸವ ವಸತಿ ಯೋಜನೆಯಡಿ ಕ್ಷೇತ್ರ ವ್ಯಾಪ್ತಿಗೆ 1,864 ಮನೆ ಮಂಜೂರಾಗಿದ್ದು ಮತ್ಸಾéಶ್ರಯ ಯೋಜನೆಯಡಿ ಮೀನುಗಾರ ಕುಟುಂಬಗಳಿಗೆ 240 ಮನೆ ಮಂಜೂರು ಮಾಡಲಾಗಿದೆ, ಪಡಿತರ ಚೀಟಿಗೆ ಆಧಾರ್ ಲಿಂಕ್ ಜೋಡಣೆ ಸಮಸ್ಯೆಯನ್ನು ನಿವಾರಿಸಲಾಗುವುದು ಎಂದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ರಾದ ಶ್ಯಾಮಲಾ ಕುಂದರ್, ಮಹೇಂದ್ರ ಪೂಜಾರಿ, ಎಚ್. ವಿಜಯ ಶೆಟ್ಟಿ, ಜಗದೀಶ ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಕಿರಿಮಂಜೇಶ್ವರ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಖಾರ್ವಿ, ಉಪಾಧ್ಯಕ್ಷ ಶೇಖರ ಖಾರ್ವಿ, ಕಂಬದಕೋಣೆ ಗ್ರಾ.ಪಂ. ಅಧ್ಯಕ್ಷ ರಾಜೇಶ ದೇವಾಡಿಗ, ಹೇರೂರು ಗ್ರಾ.ಪಂ. ಅಧ್ಯಕ್ಷೆ ಸಾಕು, ಉಪಾಧ್ಯಕ್ಷ ಶೇಖರ ಪೂಜಾರಿ ಉಪಸ್ಥಿತರಿದ್ದರು.
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಓ. ಆರ್. ಪ್ರಕಾಶ ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ ಕಿರಣ ಗೋರಯ್ಯ ಸ್ವಾಗತಿಸಿದರು. ಸುಧಾಕರ ಪಿ. ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತ್ಮಾತ
Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.