ಬ್ಯಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Team Udayavani, Aug 3, 2017, 7:40 AM IST
ಮಡಿಕೇರಿ: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ಬ್ಯಾರಿ ಸಮುದಾಯದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಪ್ರದಾನ ಮಾಡುವ ಸಮಾರಂಭ ಕೊಡಗು ಬ್ಯಾರೀಸ್ ವೆಲ್ಫೆàರ್ ಟ್ರಸ್ಟ್ ಆಶ್ರಯದಲ್ಲಿ ನಗರದಲ್ಲಿ ನಡೆಯಿತು.
ನಗರದ ಕ್ರಸೆಂಟ್ ಶಾಲಾ ಸಭಾಂಗಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಅರೆಭಾಷೆ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಉಮರಬ್ಬ, ಶೈಕ್ಷಣಿಕ ಸಾಧನೆಯ ಮೂಲಕ ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕೆಂದರು.
ವಿದ್ಯಾರ್ಥಿ ಜೀವನ ಎಂಬುವುದು ಅತಿ ಅಮೂಲ್ಯವಾದ ಘಟ್ಟವಾಗಿದ್ದು, ಪೋಷಕರು ಹಾಗೂ ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಲು ನಿಸ್ವಾರ್ಥ ಸೇವೆಯನ್ನು ಮಾಡುತ್ತಾರೆ. ಸರ್ವ ತ್ಯಾಗಗಳ ಮೂಲಕ ಶ್ರಮ ಪಡುತ್ತಾರೆ. ಪರಿಸ್ಥಿತಿ ಹೀಗಿರುವಾಗ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳದೆ ಪೋಷಕರ ಕನಸನ್ನು ನನಸು ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕೆಂದು ಉಮರಬ್ಬ ಸಲಹೆ ನೀಡಿದರು. ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುವ ಪ್ರಯತ್ನವನ್ನು ಕೂಡ ಮಾಡಬೇಕೆಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಹಿಂದುಳಿದ ಮತ್ತು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ಸುರೇಶ್, ರಾಜ್ಯ ಸರಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಮುಂದೆ ಬರುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಪ್ರತಿಭಾ ಪುರಸ್ಕಾರಗಳ ಮೂಲಕ ವಿದ್ಯಾರ್ಥಿಗಳನ್ನು ಪೋ›ತ್ಸಾಹಿಸುವ ಕಾರ್ಯ ಹೆಚ್ಚು ಹೆಚ್ಚು ನಡೆಯಬೇಕೆಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಡಗು ಬ್ಯಾರೀಸ್ ವೆಲ್ಫೆàರ್ ಟ್ರಸ್ಟ್‌ನ ಅಧ್ಯಕ್ಷ ಶಂಸುದ್ದೀನ್ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು.
ವೇದಿಕೆಯಲ್ಲಿ ಮಂಗಳೂರಿನ ಉದ್ಯಮಿ ಹಾಗೂ ದಾನಿ ಬದ್ರುದ್ದೀನ್, ನಿವೃತ್ತ ಅಧಿಕಾರಿ ಅಮೀರುದ್ದೀನ್, ಕ್ರಸೆಂಟ್ ಶಾಲೆಯ ಪ್ರಧಾನ ಕಾರ್ಯದರ್ಶಿ ಜಿ.ಎಚ್. ಮೊಹಮ್ಮದ್ ಹನೀಫ್, ಟ್ರಸ್ಟ್‌ನ ಉಪಾಧ್ಯಕ್ಷ ಎಂ.ಬಿ. ನಾಸಿರ್ ಉಪಸ್ಥಿತರಿದ್ದು ಮಾತನಾಡಿದರು.
ಕುಮಾರಿ ಮೆಹ್‌ಕಾ ಫಾತಿಮ ಹಾಡು ಹೇಳಿ ಗಮನ ಸೆಳೆದರು. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಎಂ.ಇ. ಮೊಹಮ್ಮದ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಎಂ. ಅಬ್ದುಲ್ಲ ವಂದಿಸಿದರು. ಉಪಾಧ್ಯಕ್ಷ ಎಸ್.ಐ ಮುನೀರ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.