ದೌರ್ಜನ್ಯಕ್ಕೆ ಸಿಲುಕಿದ್ದರೆ ದೂರು ನೀಡಿ


Team Udayavani, Aug 3, 2017, 8:28 AM IST

03-YAD-3.jpg

ಯಾದಗಿರಿ: ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾದವರು ಹೆದರದೇ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ದೂರು ನೀಡಬೇಕು ಎಂದು ರಾಜ್ಯ ಪೊಲೀಸ್‌ ದೂರುಗಳ ಪ್ರಾಧಿಕಾರ ಅಧ್ಯಕ್ಷ ನ್ಯಾಯಮೂರ್ತಿ ಎ.ಎಸ್‌. ಪಾಚ್ಛಾಪುರೆ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಪೊಲೀಸ್‌ ದೂರುಗಳ ಪ್ರಾಧಿಕಾರ ರಚನೆ ಬಗ್ಗೆ ಜಾಗೃತಿ ಮೂಡಿಸುವ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಸಾರ್ವಜನಿಕರು ಬಂದರೆ ವಕೀಲರು ಈ ಕುರಿತು ಜಾಗೃತಿ ಮೂಡಿಸಬೇಕು.
ಸಾರ್ವಜನಿಕರು ಸಹ ತಮ್ಮ ಹಕ್ಕುಗಳ ಕುರಿತು ಅರಿಯುವುದು ಅವಶ್ಯಕವಾಗಿದೆ ಎಂದರು. 

2012ರಲ್ಲಿ ಕರ್ನಾಟಕದಲ್ಲಿ ಪೊಲೀಸ್‌ ದೂರು ಪ್ರಾಧಿಕಾರವನ್ನು ರಚನೆ ಮಾಡಲಾಗಿದ್ದು, ರಾಜ್ಯ ಪೊಲೀಸ್‌ ದೂರುಗಳ ಪ್ರಾಧಿಕಾರ ಎಸ್‌.ಪಿ ಯಿಂದ ಡಿ.ಜಿ.ಪಿ ವರೆಗಿನ ಪೊಲೀಸ್‌ ಅಧಿಕಾರಿಗಳ ಗಂಭೀರ ದುರ್ನಡತೆ ಕುರಿತು ದೂರು ಬಂದಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತದೆ ಎಂದರು. ಜಿಲ್ಲಾ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಪೊಲೀಸ್‌ ಪೇದೆಯಿಂದ ಡಿ. ಎಸ್‌.ಪಿ ವರೆಗಿನ ಅಧಿಕಾರಿಗಳ ವಿರುದ್ಧದ ಗಂಭೀರ ದುರ್ನಡತೆ ಅಂದರೆ ಲಾಕಪ್‌ ಡೆತ್‌, ಅಕ್ರಮ ಬಂಧನ ಸೇರಿದಂತೆ ಇನ್ನಿತರ ದೂರುಗಳಿದ್ದರೆ ಜಿಲ್ಲಾ ಮಟ್ಟದಲ್ಲಿ ದೂರು ಸಲ್ಲಿಸಬೇಕು. ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸದಸ್ಯ ಕಾರ್ಯ ದರ್ಶಿಯಾಗಿರುತ್ತಾರೆ ಎಂದರು. 

ಇದಕ್ಕೂ ಮೊದಲು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಿವಲೀಲಾ ಅಕ್ಕ ಅವರಿಂದ ಆಧ್ಯಾತ್ಮದ ಕುರಿತು ಉಪನ್ಯಾಸ ನೆರವೇರಿತು. ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶ ಸದಾನಂದ ಎನ್‌. ನಾಯಕ್‌, ಸಿವಿಲ್‌ ನ್ಯಾಯಾಧೀಶ ಪ್ರಭು ಎನ್‌. ಬಡಿಗೇರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಭೀಮ ರಾಯಾ ಕಿಲ್ಲನಕೇರಿ, ಪ್ರಭಾರಿ ಜಿಲ್ಲಾಧಿಕಾರಿ  ಡಾ| ಅವಿನಾಶ್‌ ಮೆನನ್‌ ರಾಜೇಂದ್ರನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಹಾಗೂ ಅಪರ ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ್‌ ವೇದಿಯಲ್ಲಿದ್ದರು. ಅಮೃತ ಶೆಟ್ಟಿ ಪ್ರಾರ್ಥಿಸಿದರು. ಚಂದ್ರಶೇಖರ ಅಲ್ಲಿಪುರ ಸ್ವಾಗತಿಸಿದರು. ನಿರಂಜನ್‌ ಯರಗೋಳ ನಿರೂಪಿಸಿದರು.

ಜನರಿಗೆ ಅರಿವು ಮೂಡಿಸಲು ಆದ್ಯತೆ
ಪೊಲೀಸ್‌ ಪ್ರಾಧಿಕಾರಕ್ಕೆ ದೂರು ನೀಡುವ ಕುರಿತು ಜನತೆಗೆ ವ್ಯಾಪಕ ಅರಿವು ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು.
ಎಂ.ಆರ್‌. ಕಾಂಬ್ಳೆ, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.