ಕೆರೆಗಳ ಡಿನೋಟಿಫೈ ತಡೆಗೆ ಆಗ್ರಹ
Team Udayavani, Aug 3, 2017, 9:22 AM IST
ರಾಯಚೂರು: ಕಂದಾಯ ಇಲಾಖೆ ಮೂಲಕ ರಾಜ್ಯ ಸರ್ಕಾರ ಕೆರೆಗಳ ಡಿನೋಟಿಫೈ ಮಾಡಲು ಮುಂದಾಗಿರುವ ಕ್ರಮ ಖಂಡಿಸಿ ವಿಶ್ವ ಕರ್ನಾಟಕ ವೇದಿಕೆ ಕಾರ್ಯಕರ್ತರು ಬುಧವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕಳೆದ ಮೂರು ವರ್ಷದಿಂದ ರಾಜ್ಯ ಬರಕ್ಕೆ ತುತ್ತಾಗಿದ್ದು, ಸಾವಿರಾರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೃಷಿಗೆ ಪೂರಕವಾದ ಜಲ ಮೂಲಗಳ ಸಂರಕ್ಷಣೆಗೆ ಮುಂದಾಗುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯ. ಆದರೆ, ರಾಜ್ಯದ 15 ನೂರು ಕೆರೆಗಳ ಡಿನೋಟಿಫೈ ಮಾಡುವ ಮೂಲಕ ರಾಜ್ಯ ಸರ್ಕಾರ ಭೂಗಳ್ಳರ ಪಾಲು ಮಾಡಲು ಮುಂದಾಗಿದೆ. ಅಕ್ರಮ ಭೂ ದಂಧೆಕೋರರ ಲಾಬಿಗೆ ಮಣಿದು ಕೆರೆಗಳ ಡಿನೋಟಿಫೈ ಮಾಡುವುದು ಸರಿಯಲ್ಲ ಎಂದು ದೂರಿದರು. ಇಂದು ನೀರಿನ ಸಂಕ್ಷರಣೆ ಅನಿವಾರ್ಯವಾಗಿದೆ. ಈಗ ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದೆ ಕೃಷಿ ಭೂಮಿಯೆಲ್ಲ ಬಂಜರಾಗಲಿದೆ. ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರವಿದ್ದು, ಅಂತರ್ಜಲ ಪಾತಾಳ ಕಂಡಿದೆ. ರೈತ ಸಮುದಾಯ ಆತಂಕದ ಸ್ಥಿತಿಯಲ್ಲಿರುವ ವೇಳೆ ಕೆರೆಗಳನ್ನು ಡಿನೋಟಿಫೈ ಮಾಡಲು ಸರ್ಕಾರ ಹವಣಿಸುತ್ತಿರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದರು.
ಈಗಾಗಲೇ ಬೇರೆ ರಾಜ್ಯಗಳಲ್ಲಿ ನೀರಿನ ಮೂಲಗಳ ಸಂಕ್ಷರಣೆ ಬಗ್ಗೆ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತರ್ಜಲ ವೃದ್ಧಿ, ಜಲ ಮೂಲಗಳ ಸಂರಕ್ಷಣೆ, ಮಳೆ ನೀರನ್ನು ಹಿಡಿದಿಡಲು ಸಾವಿರಾರು ಕೆರೆಗಳನ್ನು ನಿರ್ಮಿಸುತ್ತಿದ್ದಾರೆ. ಇಂಥ ವೇಳೆ ರಾಜ್ಯದ 1500 ಕೆರೆಗಳನ್ನು ಡಿನೋಟಿಫೈ ಮಾಡುತ್ತಿರುವುದು ಖಂಡನೀಯ ಎಂದು ದೂರಿದರು.
ಕೂಡಲೇ ರಾಜ್ಯ ಸರ್ಕಾರ ತನ್ನ ನಿರ್ಧಾರ ಹಿಂಪಡೆಯಬೇಕು. ಕೆರೆ, ಕುಂಟೆ, ಕಾಲುವೆ, ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸಬೇಕು. ಈಗಿರುವ ಕೆರೆಗಳ ಹೂಳು ಎತ್ತಿಸುವ ಮೂಲಕ ನೀರು ಸಂಗ್ರಹಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಎಸ್.ನರಸಿಂಗಪ್ಪ ತಲಕಾಯಿ,
ಕಿಶನ್‌ಸಿಂಗ್ ಠಾಕೂರ್, ಮಾನಸಿಂಗ್ ಠಾಕೂರ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.