ಕೆಲಸ ಮಾಡದವರನ್ನು ಕಪ್ಪು ಪಟ್ಟಿಗೆ ಸೇರಿಸಿ


Team Udayavani, Aug 3, 2017, 12:14 PM IST

03-GUB-2.jpg

ಚಿತ್ತಾಪುರ: ಪ್ರಗತಿ ಪರಿಶೀಲನೆ ಸಭೆಗೆ ಬರುವಾಗ ಸಂಪೂರ್ಣ ಮಾಹಿತಿ ತರದ ಅಧಿಕಾರಿಗಳನ್ನು ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ತರಾಟೆ ತೆಗೆದುಕೊಂಡರು. ತಾಪಂ ಸಭಾಂಗಣದ ಆವರಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ನಿಮ್ಮ ಪ್ರಗತಿ ವರದಿಯಲ್ಲಿ ಕಳೆದ ಎರಡು ವರ್ಷದಿಂದ ಕಾಮಗಾರಿಗಳಿಗೆ ಮಂಜೂರಾತಿ ಪಡೆಯಬೇಕಿದೆ. ಕೆಲಸ ಪ್ರಗತಿಯಲ್ಲಿದೆ ಎಂದು ಸುಳ್ಳು ಮಾಹಿತಿ ನೀಡಲಾಗುತ್ತಿದೆ. ಜವಾಬ್ದಾರಿಯಿಂದ ಕೆಲಸ ಮಾಡುತ್ತಿಲ್ಲ. ನೀವು ಕಾಮಗಾರಿಗಳನ್ನು ವಿಳಂಬ ಮಾಡಿ ಜನರಿಂದ ನಾನು ಬೈಸಿಕೊಳ್ಳುವಂತಾಗಿದೆ ಎಂದು ಸಮಾಜಕಲ್ಯಾಣ ಇಲಾಖೆ, ಜಿಪಂ ಕಾಳಗಿ, ಲೋಕೋಪಯೋಗಿ ಹಾಗೂ ಇನ್ನಿತರ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಾಮಗಾರಿಗೆ ಹಣಕಾಸಿನ ಕೊರತೆಯಿಲ್ಲ. ಆದರೆ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳತ್ತಿಲ್ಲ.
ಅವರೊಂದಿಗೆ ಶಾಮೀಲು ಆಗುತ್ತಿರುವುದರಿಂದ ಕಾಮಗಾರಿಗಳನ್ನು ವಿಳಂಬವಾಗುವಂತೆ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರೀ? ಇಂದು ಸಂಜೆ
ಒಳಗಾಗಿ ಒಂದು ವರ್ಷದಿಂದ ಕಾಮಗಾರಿ ಆರಂಭಿಸದ ಗುತ್ತಿಗೆದಾರರ ಪಟ್ಟಿ ಸಿದ್ಧಮಾಡಿ ಕೊಡಿ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲು ಮೇಲಾಧಿ ಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಹೇಳಿದರು.

ಅಧಿಕಾರಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಕುಂಠಿತಗೊಳ್ಳುತ್ತಿವೆ. ಪ್ರಗತಿ ಸಭೆಯಲ್ಲಿ ಕಾಮಗಾರಿಗಳನ್ನು ವಾರದಲ್ಲಿ, ತಿಂಗಳಲ್ಲಿ ಮುಗಿಸಲಾಗುವುದು ಎಂದು ಸುಳ್ಳು ಭರವಸೆ ನೀಡುತ್ತಿದ್ದಿರಿ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕನಕ, ಅಂಬೇಡ್ಕರ್‌, ಜಗಜೀವನರಾಂ, ಸೇವಾಲಾಲ ಸೇರಿದಂತೆ ಅನೇಕ ಭವನಗಳು ಮಂಜೂರಾಗಿ ಎರಡು ವರ್ಷ ಕಳೆದರೂ ಸರ್ಕಾರಿ ನಿವೇಶನ ಹುಡುಕಿ ಕೊಡಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ನಿಮ್ಮಿಂದ ಹೇಗೆ ಅಭಿವೃದ್ಧಿ ಸಾಧ್ಯ ಎಂದು ಅಧಿಕಾರಿಗಳ ವಿರುದ್ಧ ಅಸಮಧಾನ ವ್ಯಕ್ತ ಪಡಿಸಿದರು. ಅರಣ್ಯ ಇಲಾಖೆಗೆ ಅ ಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ನಿವು ಹಚ್ಚಿದ ಗಿಡಗಳು ಎಲ್ಲಿಯೂ ಕಾಣುತ್ತಿಲ್ಲ. ಅನುದಾನ ಬೀಡುಗಡೆ ತಡೆ ಹಿಡಿಯಲಾಗುವುದು ಎಂದು ಹೇಳಿ ಸುಳ್ಳು ಮಾಹಿತಿ ನೀಡಬೇಡಿ. ಪುರಸಭೆಯ ಜನಪ್ರತಿನಿಧಿಗಳೊಂದಿಗೆ ಕೂಡಿಕೊಂಡು ಕ್ರಿಯಾಯೋಜನೆ ರೂಪಿಸಿ ಪಟ್ಟಣವನ್ನು ಹಸಿರುಕರಣ ಮಾಡಿ ಎಂದು ಸೂಚಿಸಿದರು.

ಶಿಕ್ಷಣಾಧಿಕಾರಿ ಶಿವಶರಣಪ್ಪ ಬನ್ನಿಕಟ್ಟಿ ಅವರಿಗೆ ಖಾಲಿ ಇದ್ದ ಶಾಲೆಗಳಲ್ಲಿ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸೂಚಿಸಿದರು. ಆರೋಗ್ಯ ಇಲಾಖೆ ತಾಲೂಕು ವೈದ್ಯಾಧಿಕಾರಿಗಳಿಗೆ ತಾಲೂಕಿನಲ್ಲಿ ಏಳು ಆಂಬ್ಯುಲೆನ್ಸ್‌ ನೀಡಲಾಗಿದೆ. ನೀವು ಕೇಳಿದ ಪ್ರತಿಯೊಂದು ಸೌಲಭ್ಯವನ್ನು ತಾಲೂಕು ಆಸ್ಪತ್ರೆಗೆ ಒದಗಿಸಲಾಗಿದೆ. ಆದರೂ ಸಾರ್ವಜನಿಕರಿಗೆ ಸರಿಯಾಗಿ  ಚಿಕಿತ್ಸೆ ನೀಡುತ್ತಿಲ್ಲ ಯಾಕೆ ಎಂದು ಪ್ರಶ್ನಿಸಿದರು.

13 ಡೆಂಘೀ ಜ್ವರ ಪತ್ತೆ: ತಾಲೂಕು ಆರೋಗ್ಯಾಧಿಕಾರಿ ಡಾ| ಸುರೇಶ ಮಾತನಾಡಿ ತಾಲೂಕಿನಲ್ಲಿ 13 ಡೆಂಗಿ ಜ್ವರದ ರೋಗಿಗಳನ್ನು ಪತ್ತೆ ಮಾಡಲಾಗಿದೆ. ಭರತನೂರನಲ್ಲಿ 6 ಜನರು ಪತ್ತೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಅಧಿಕಾರಿ ರಾಮಚಂದ್ರ, ತಾಪಂ
ಅಧ್ಯಕ್ಷ ಜಗದೇವರಡ್ಡಿ ಪಾಟೀಲ, ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಜಿಪಂ ಸದಸ್ಯ ಶಿವರುದ್ರ ಭೀಣಿ, ತಾಪಂ ಉಪಾಧ್ಯಕ್ಷ ಹರಿನಾಥ ಚವ್ಹಾಣ, ತಹಶೀಲ್ದಾರ ಮಲ್ಲೇಶಾ ತಂಗಾ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ ಇದ್ದರು.

ಶಿಕ್ಷಣದಲ್ಲಿ ಉತ್ತಮ ಸಾಧನೆ
ಕಳೆದ ಬಿಜೆಪಿ ಸರ್ಕಾರದಲ್ಲಿ ತಾಲೂಕಿನಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಹತ್ತು ಸಾವಿರ ಇತ್ತು. ಅಂದು ಹೈಕೋರ್ಟ್‌ ತಾಲೂಕಿಗೆ ಛೀ ಮಾರಿ ಹಾಕಿತ್ತು.
ಆದರೆ ಇದೀಗ ಕೇವಲ ನಾಲ್ಕು ವರ್ಷದಲ್ಲಿ ಆ ಸಂಖ್ಯೆಯನ್ನು ಇಳಿಸಿದ ಪರಿಣಾಮ 323 ಮಕ್ಕಳು ಮಾತ್ರ ಶಾಲೆ ಬಿಟ್ಟ ಮಾಹಿತಿ ಇದೆ. ಎಸ್ಸೆಸ್ಸೆಲ್ಸಿ
ಪರೀಕ್ಷೆ ಫಲಿತಾಂಶ ಆಗ ಕೇವಲ ಶೇ. 40ರಷ್ಟು ಇತ್ತು. ಇಂದು ಶೇ.74ರಷ್ಟು ಬಂದಿದೆ. ಜಿಲ್ಲೆಯಲ್ಲಿ ಎರಡನೇ ಸ್ಥಾನ ಲಭಿಸಿದೆ. ಇದು ಶಿಕ್ಷಣದ
ಅಭಿವೃದ್ಧಿಯಲ್ಲವೇ? ಶಿಕ್ಷಣ ಕುಂಠಿತಗೊಂಡಿದೆ ಎಂದು ಮಾತನಾಡುವ ಬಿಜೆಪಿಯವರಿಗೆ ಇದು ಕಾಣಿಸುತ್ತಿಲ್ಲವೇ? ಎಂದು ಸಚಿವ ಪ್ರಿಯಾಂಕ್‌
ಖರ್ಗೆ ಪ್ರಶ್ನಿಸಿದರು.

ಟಾಪ್ ನ್ಯೂಸ್

16-skin

Deepawali: ಪಟಾಕಿ ಅವಘಡ: ಚರ್ಮ ಕಸಿ ಶಸಚಿಕಿತ್ಸೆಗೆ ಸಜ್ಜು

Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…

Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…

ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ

Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ

Ignoring MES is better than banning it: Satish Jarakiholi

Belagavi; ಎಂಇಎಸ್‌ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್‌ ಜಾರಕಿಹೊಳಿ

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

Voyager 1 encountered a problem in interstellar space 25 billion km away

25 ಬಿಲಿಯನ್ ಕಿ.ಮೀ ದೂರದ ಅಂತರತಾರಾ ಬಾಹ್ಯಾಕಾಶದಲ್ಲಿ ಸಮಸ್ಯೆಗೆ ಸಿಲುಕಿದ ವೊಯೇಜರ್ 1


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

19-bng

Bengaluru: ಕಾವೇರಿ ನೀರು 6ನೇ ಹಂತದ ಯೋಜನೆಗೆ ಸಿದ್ಧತೆ

18-bng

ಆಟೋದಲ್ಲಿ ಗಾಂಜಾ ಮಾರುತ್ತಿದ್ದ ಚಾಲಕನ ಬಂಧನ

aaram aravinda swamy movie song hudukuta hoda

Aaram Aravinda Swamy: ಹುಡುಕತ್ತಾ ಹೋದ ಅರವಿಂದ್‌ ಸ್ವಾಮಿ

17-bng

Bengaluru: ನಟ ದರ್ಶನ್‌ಗೆ ಜಾಮೀನು: ಸುಪ್ರೀಂಗೆ ಪೊಲೀಸರ ಮೊರೆ?

16-skin

Deepawali: ಪಟಾಕಿ ಅವಘಡ: ಚರ್ಮ ಕಸಿ ಶಸಚಿಕಿತ್ಸೆಗೆ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.