ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಅವಕಾಶಕ್ಕೆ ಒತ್ತಾಯ


Team Udayavani, Aug 3, 2017, 12:56 PM IST

hub6.jpg

ಹುಬ್ಬಳ್ಳಿ: ಪ್ಲಾಸ್ಟರ್‌ ಆಫ್ ಪ್ಯಾರಿಸ್‌ (ಪಿಒಪಿ) ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಒಮ್ಮೇಲೆ ರದ್ದು ಪಡಿಸುವ ಬದಲು ಹಂತ-ಹಂತವಾಗಿ ಕಾರ್ಯರೂಪಕ್ಕೆ ತನ್ನಿ. ಈ ವರ್ಷವೂ ಪಿಒಪಿನಿಂದ ನಿರ್ಮಿತ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶ ಕೊಡಿ ಎಂದು ಹುಬ್ಬಳ್ಳಿ-ಧಾರವಾಡ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಮಿತಿಗಳ ಒಕ್ಕೂಟದವರು ಮಹಾಪೌರ ಹಾಗೂ ಪಾಲಿಕೆ ಆಯುಕ್ತರನ್ನು ಒತ್ತಾಯಿಸಿದರು. 

ಇಲ್ಲಿನ ದಾಜಿಬಾನಪೇಟೆಯ ದುರ್ಗಾದೇವಿ ದೇವಸ್ಥಾನದಲ್ಲಿ ಬುಧವಾರ ಸಭೆ ನಡೆಸಿದ ನಂತರ ಮೆರವಣಿಗೆ ಮುಖಾಂತರ ಪಾಲಿಕೆಗೆ ಆಗಮಿಸಿ ಮಹಾಪೌರರು ಹಾಗೂ ಆಯುಕ್ತರಿಗೆ ಮನವಿ ಸಲ್ಲಿಸಿದ ಸದಸ್ಯರು, ಪುಣೆ ಮಹಾನಗರ ಪಾಲಿಕೆ, ಬೆಳಗಾವಿ, ಬಾಗಲಕೋಟೆ ಹಾಗೂ ಕೊಪ್ಪಳಗಳಲ್ಲಿ ಪಿಒಪಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಹಾಗೆಯೇ ಅವಳಿನಗರದಲ್ಲಿ ಪರವಾನಗಿ ನೀಡಬೇಕೆಂದು ಒತ್ತಾಯಿಸಿದರು. 

ಮುಂಬಯಿ, ಮಹಾರಾಷ್ಟ್ರ ಹಾಗೂ ಬೆಳಗಾವಿ ಹೊರತು ಪಡಿಸಿದರೆ ಅವಳಿ ನಗರದಲ್ಲಿ ಐತಿಹಾಸಿಕವಾಗಿ ಅಂದಾಜು 1.50 ಲಕ್ಷದಷ್ಟು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ಸಾರ್ವಜನಿಕವಾಗಿಯೇ ಎರಡು ಸಾವಿರ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಅವಳಿ ನಗರದಲ್ಲಿ ಮಣ್ಣಿನ ಗಣಪ ನಿರ್ಮಿಸುವ ಕಲಾವಿದರ ಸಂಖ್ಯೆ ಅಂದಾಜು 30-40 ಇದೆ. ಅವರು 4-5 ಸಾವಿರ ಗಣೇಶ ಮೂರ್ತಿಗಳನ್ನು ನಿರ್ಮಿಸಬಹುದು.

ಇನ್ನು ಅಂದಾಜು 50 ಸಾವಿರ  ಗಣೇಶ ಮೂರ್ತಿಗಳ ಕೊರತೆಯಾಗುತ್ತದೆ. ಜೊತೆಗೆ ದೊಡ್ಡ-ದೊಡ್ಡ ಮಣ್ಣಿನ ಗಣಪ ಮೂರ್ತಿ ತಯಾರಿಕೆ ಕಷ್ಟಕರ. ಅಲ್ಲದೆ ಮಣ್ಣಿನ ಗಣೇಶ ಮೂರ್ತಿ ಮೇಲೆ ಹೆಲೋಜನ್‌ ದೀಪದ ಬೆಳಕು ಬಿದ್ದರೆ ಹಾಗೂ ಸಾಗಾಟ ಸಂದರ್ಭದಲ್ಲಿ ಮೂರ್ತಿಗಳಲ್ಲಿ ಬಿರುಕು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಭಾವೈಕ್ಯತೆಗೆ ಧಕ್ಕೆ ತರದೆ ಪಿಒಪಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಇನ್ನು ಎರಡು ವರ್ಷ ಅವಕಾಶ ಕೊಡಬೇಕೆಂದು ಮನವಿ ಮಾಡಿದರು. 

ಸುಪ್ರೀಂಕೋರ್ಟ್‌ ಆದೇಶವನ್ನು ಎಲ್ಲದಕ್ಕೂ ಪಾಲನೆ ಮಾಡಬೇಕು. ಸಾರ್ವಜನಿಕ ಶಾಂತಿ ಸಭೆಗೆ ಎಲ್ಲ ಸಂಘಟನೆಯವರನ್ನು ಆಹ್ವಾನಿಸುವಂತೆ ಗಣೇಶೋತ್ಸವದ ಬಗ್ಗೆ ಸಭೆ ನಡೆಸುವಾಗ ಎಲ್ಲ ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಮಂಡಳಗಳ ಸದಸ್ಯರನ್ನು ಆಹ್ವಾನಿಸಬೇಕು. ಸಭೆಯಲ್ಲಿ ಪಾಲ್ಗೊಂಡ ಎಲ್ಲ ಮಂಡಳದ ಮುಖಂಡರಿಗೂ ತಮ್ಮ ಅಭಿಪ್ರಾಯ ಮಂಡಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. 

ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಮಹಾಪೌರ ಡಿ.ಕೆ. ಚವ್ಹಾಣ ಮಾತನಾಡಿ, ಕಳೆದ ಬಾರಿ ತಾವೇ ಈ ವರ್ಷ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲ್ಲವೆಂದು ಭರವಸೆ ನೀಡಿದ್ದೀರಿ. ಅದಕ್ಕಾಗಿ ಈ ವರ್ಷ ಪಿಒಪಿ ಮೂರ್ತಿ ಪ್ರತಿಷ್ಠಾಪನೆ ರದ್ದು ಪಡಿಸಲಾಗಿದೆ.

ಈಗ ನಿಮ್ಮ ಮನವಿ ಪರಿಗಣಿಸಿ ಜಿಲ್ಲಾಧಿಕಾರಿ ಅವರಿಗೆ ಮನವರಿಕೆ ಮಾಡಲಾಗುವುದು. ಈ ಕುರಿತು ಮತ್ತೂಮ್ಮೆ ಸಭೆ ನಡೆಸಲಾಗುವುದು ಎಂದರು. ಮನೋಜ ಹಾನಗಲ್ಲ, ಡಿ. ಗೋವಿಂದರಾವ್‌, ವೆಂಕಟೇಶ ಮೇಸ್ತ್ರಿ, ಪಾಂಡು ಮೆಹರವಾಡೆ, ವೆಂಕಟೇಶ ಪೂಜಾರಿ, ರಾಜು ಮಾನೆ ಸೇರಿದಂತೆ ಮೊದಲಾದವರು ಈ ಸಂದರ್ಭದಲ್ಲಿದ್ದರು.  

ಟಾಪ್ ನ್ಯೂಸ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.