ನಾಗರಾಜ ಅಧಿಕಾರ ಸ್ವೀಕಾರ
Team Udayavani, Aug 3, 2017, 12:56 PM IST
ಹುಬ್ಬಳ್ಳಿ: ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾವಹಿಸಿ ಮಟ್ಟಹಾಕಲಾಗುವುದು ಹಾಗೂ ಮಟ್ಕಾ, ಜೂಜಾಟ, ಬೆಟ್ಟಿಂಗ್ ದಂಧೆಗಳ ಮೇಲೆ ಕಡಿವಾಣ ಹಾಕಲಾಗುವುದು. ಇವನ್ನು ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಹು-ಧಾ ಪೊಲೀಸ್ ಕಮೀಷನರೇಟ್‌ನ ನೂತನ ಆಯುಕ್ತ ಎಂ.ಎನ್. ನಾಗರಾಜ ಖಡಕ್ ಸಂದೇಶ ನೀಡಿದ್ದಾರೆ.
ಬುಧವಾರ ಸಂಜೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೇಣುಕಾ ಸುಕುಮಾರ ಅವರಿಂದ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಜನರನ್ನು ಹೆದರಿಸಿ ದರೋಡೆ ಮಾಡುವ ದುಷ್ಕರ್ಮಿಗಳ ತಂಡವನ್ನು ಪತ್ತೆ ಮಾಡಲು ಡಿಸಿಪಿ ನೇಮಗೌಡ ನೇತೃತ್ವದಲ್ಲಿ ತಂಡ ರಚಿಸಿ ತಡೆಗಟ್ಟಲಾಗುವುದು.
ದುಷ್ಕೃತದಂತಹ ಘಟನೆಗಳು ಹಾಗೂ ಕಳ್ಳತನ, ಸರಗಳ್ಳತನ ಪ್ರಕರಣಗಳು ನಡೆಯದಂತೆ ನಿಯಂತ್ರಿಸಲಾಗುವುದು ಹಾಗೂ ಅವನ್ನು ಪತ್ತೆ ಮಾಡಲಾಗುವುದು. ಅದಕ್ಕೆ ಮಾಧ್ಯಮಗಳ ಹಾಗೂ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದರು. ನ್ಯಾಯಕೋರಿ ಠಾಣೆಗಳಿಗೆ ಬರುವ ಕಟ್ಟಕಡೆಯ ಪ್ರಜೆಗೂ ಸಹ ನ್ಯಾಯ ಒದಗಿಸಲಾಗುವುದು.
ಅವರಿಗೆ ಅವಶ್ಯವಾದ ಎಲ್ಲ ಸಹಕಾರ ನೀಡಲಾಗುವುದು. ಠಾಣೆಗೆ ಬಂದವರಿಗೆ ಗೌರವ ಸಿಗಬೇಕು. ಜನಸ್ನೇಹಿ ಪೊಲೀಸ್ ವ್ಯವಸ್ಥೆ ಕಾರ್ಯನಿರ್ವಹಿಸಲಾಗುವುದು. ಹಿಂದಿನ ಆಯುಕ್ತ ಪಿ.ಎಚ್. ರಾಣೆ ಅವರು ಕೈಗೊಂಡ ಉತ್ತಮ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗಲಾಗುವುದು ಎಂದರು. ಈ ಸಂದರ್ಭದಲ್ಲಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ, ಎಸಿಪಿ ಎನ್.ಬಿ. ಸಕ್ರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.