ರಾಜಕಾರಣಿಗಳ ಚದುರಂಗದಾಟಕ್ಕೆ ಬೇಸ್ತುಬಿದ್ದ ರೈತರು

Team Udayavani, Aug 3, 2017, 12:56 PM IST

hub1.jpg

ಹುಬ್ಬಳ್ಳಿ: ಮಹದಾಯಿ ವಿಚಾರದಲ್ಲಿ ರಾಜಕೀಯ ಪಕ್ಷಗಳ ಚದುರಂಗ ಆಟಕ್ಕೆ ರೈತರು ಬೇಸ್ತು ಬೀಳುವಂತಾಗಿದೆ. ಮಹದಾಯಿ, ಕಳಸಾ-ಬಂಡೂರಿ ವಿಚಾರದಲ್ಲಿ ರಾಜಕೀಯ ಪಕ್ಷಗಳು ಜನರಿಗೆ ನೀರು ಒದಗಿಸುವ ಇಚ್ಛಾಶಕ್ತಿಯ ಬದಲು ತಮ್ಮ ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರದಲ್ಲಿ ತೊಡಗಿರುವುದೇ ಜಲಗಂಡಾಂತರ ಮುಂದುವರೆಯುವಂತಾಗಿದೆ. 

ಮೂರ್‍ನಾಲ್ಕು ದಶಕಗಳಿಂದಲೂ ಮಹದಾಯಿ ವಿಚಾರ ಪ್ರಸ್ತಾಪ, ಆಗಾಗ ಹೋರಾಟ ನಡೆಯುತ್ತಿದ್ದರೂ, ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆಗೆ ಒತ್ತಾಯಿಸಿ ಗದಗ ಜಿಲ್ಲೆ ನರಗುಂದ ಹಾಗೂ ಧಾರವಾಡ ಜಿಲ್ಲೆ ನವಲಗುಂದಲ್ಲಿ ನಿರಂತರವಾಗಿ ನಡೆದ ಹೋರಾಟ ಎರಡು ವರ್ಷ ಕ್ರಮಿಸಿದೆ. 

ನೀರಿಗಾಗಿ ರೈತರು ರಸ್ತೆ ತಡೆ, ಧರಣಿ, ಬಂದ್‌ ಆಚರಿಸಿದ್ದಾರೆ. ಪೊಲೀಸರಿಂದ ಲಾಠಿ ಏಟು ತಿಂದಿದ್ದಾರೆ, ಜೈಲು ಕಂಡು ಬಂದಿದ್ದಾರೆ. ಇಷ್ಟಾದರೂ ಹೋರಾಟಕ್ಕೆ ಕನಿಷ್ಠ ಸ್ಪಂದನೆಯ ಫ‌ಲ ದೊರೆತಿಲ್ಲ. ಗೋವಾ ಸಚಿವರು ಸಡ್ಡು ಹೊಡೆಯುವ ರೀತಿ ಹೇಳಿಕೆಗಳನ್ನು ನೀಡುತ್ತಿದ್ದರೂ, ರಾಜ್ಯದ ಜನಪ್ರತಿನಿಧಿಗಳು ಬಾಯಿಗೆ ಬಟ್ಟೆ ಕಟ್ಟಿಕೊಂಡು ಮೌನಾಚರಣೆಯಲ್ಲಿ ತೊಡಗಿದಂತಿದ್ದಾರೆ. 

ಹನಿ ನೀರು ನೀಡೆವು: ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಬಿಜೆಪಿ ದೇಶದಲ್ಲಿ ಕರ್ನಾಟಕವೆಂಬ ರಾಜ್ಯವೊಂದಿದೆ ಎಂಬುದನ್ನು ಪರಿಗಣಿಸಿದಂತೆಯೇ ಇಲ್ಲ ಎಂಬುದು ಎಂಬುದು ರೈತರ ಆಕ್ರೋಶದ ನುಡಿ. ಈ ಹಿಂದೆ ಗೋವಾ ಚುನಾವಣೆ ವೇಳೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಹದಾಯಿಯಿಂದ ಕರ್ನಾಟಕಕ್ಕೆ ಹನಿ ನೀರು ಬಿಡುವುದಿಲ್ಲ ಎಂದು ಹೇಳಿದ್ದರು. 

ಇದನ್ನೇ ಬಿಜೆಪಿಯವರು ಕರ್ನಾಟಕದಲ್ಲಿ ಪ್ರಮುಖ ವಿಷಯ ವಾಗಿಸಿಕೊಂಡು ಕಾಂಗ್ರೆಸ್‌ ರಾಜ್ಯದ ಜನತೆಗೆ ದ್ರೋಹ ಬಗೆದಿದೆ ಎಂದು ದೊಡ್ಡ ಪ್ರಚಾರ ಮಾಡಿತ್ತು. ಇದೀಗ ಗೋವಾದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದು, ಅಲ್ಲಿನ ಜಲ ಸಂಪನ್ಮೂಲ ಸಚಿವರು ಮಹದಾಯಿಯಿಂದ ಕರ್ನಾಟಕಕ್ಕೆ ಹನಿ ನೀರು ನೀಡುವುದಿಲ್ಲ ಎಂದು ಅಬ್ಬರಿಸಿದ್ದಾರೆ.

ರಾಜ್ಯದ ಬಿಜೆಪಿ ನಾಯಕರಿಗೆ ಇದು ದೇಶಪ್ರೇಮ ಹೇಳಿಕೆಯಂತೆ ಕೇಳಿದೆಯೋ ಗೊತ್ತಿಲ್ಲ. ಯಾವೊಬ್ಬ ನಾಯಕರೂ ಈ ಬಗ್ಗೆ ಗಟ್ಟಿ ಧ್ವನಿಯ ಆಕ್ಷೇಪ ವ್ಯಕ್ತಪಡಿಸಿಲ್ಲ. ಸೋನಿಯಾ ಗಾಂಧಿ ಹೇಳಿಕೆಗೆ ಕಾಂಗ್ರೆಸ್‌ನವರ ರೀತಿ ಬಿಜೆಪಿ ನಾಯಕರು ಸಮರ್ಥನೆಗಿಳಿಬಹುದೇನೋ? 

78 ಸಾವಿರ ಟ್ವೀಟ್‌ಗೆ ಉತ್ತರವಿಲ್ಲ: ಮಹದಾಯಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ, ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸಂಧಾನ ಮೂಲಕ ಇತ್ಯರ್ಥ ಪಡಿಸಬೇಕು, ಕಳಸಾ-ಬಂಡೂರಿ ನಾಲಾ ಮೂಲಕ ಮಧ್ಯಂತರ ಪರಿಹಾರವಾಗಿ ಕನಿಷ್ಠ 7.56 ಟಿಎಂಸಿ ಅಡಿಯಷ್ಟು ನೀರು ನೀಡಿಕೆಗೆ ಕ್ರಮ ಕೈಗೊಳ್ಳಬೇಕು

ಎಂದು ಒತ್ತಾಯಿಸಿ ನವಲಗುಂದ ತಾಲೂಕು ಇನ್ನಿತರ ಕಡೆಯ ರೈತರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸುಮಾರು 78 ಸಾವಿರ ಟ್ವೀಟ್‌ ಮಾಡಿದ್ದು, ಪ್ರಧಾನಿ ಕಚೇರಿಗೂ ಮನವಿ ಸಲ್ಲಿಸಿದ್ದಾರೆ. ಕೆಲವರು ನೀರು ಕೊಡದಾಗದಿದ್ದರೆ ದಯಾಮರಣ ನೀಡಿ ಎಂದು ಮನವಿ ಸಲ್ಲಿಸಿದ್ದಾರೆ.

 ಮನ್‌ಕೀ ಬಾತ್‌ನಲ್ಲಿ ಹನಿ ನೀರು ವ್ಯರ್ಥ ಮಾಡಬೇಡಿ ಎಂದು, ರೈತರ ಕಾಳಜಿಗೆ ನಾವಿದ್ದೇವೆಂದು ಹೇಳುವ ಪ್ರಧಾನಿಯವರು ಮಾತ್ರ ನಮ್ಮ 78 ಸಾವಿರ ಟ್ವಿಟ್‌, ಮನವಿ ಯಾವುದಕ್ಕೂ ಕನಿಷ್ಠ ಸ್ಪಂದಿಸುವ, ಪ್ರತಿಕ್ರಿಯಿಸುವ ಕಾರ್ಯ ಮಾಡಿಲ್ಲ ಎಂಬುದು ನವಲಗುಂದ ತಾಲೂಕಿನ ಅನೇಕರ ಆರೋಪ. 

ಕೇಂದ್ರ ಸರಕಾರ ಮಹದಾಯಿ ನ್ಯಾಯಾಧಿಕರಣದ ಅವಧಿಯನ್ನು ಮತ್ತೂಮ್ಮೆ ಒಂದು ವರ್ಷದವರೆಗೆ ವಿಸ್ತರಿಸಿದೆ. ಈ ಬಗ್ಗೆ ರಾಜ್ಯ ಸರಕಾರ ತೀವ್ರ ಆಕ್ಷೇಪ ಸಲ್ಲಿಸಬೇಕಿತ್ತು ಅದನ್ನು ಮಾಡಿಲ್ಲ ಎಂಬುದು ಅನೇಕ ರೈತರ  ಬೇಸರವಾಗಿದೆ. ಮಹದಾಯಿ ಹೆಸರಲ್ಲಿ ಅಧಿಕಾರದ ಗದ್ದುಗೆ ಹಿಡಿಯುವುದು, 

ನಂತರ ಅದನ್ನು ನಿರ್ಲಕ್ಷಿಸುವ ಕಾರ್ಯವನ್ನು ಅನೇಕ ಜನಪ್ರತಿನಿಧಿಗಳು ಮಾಡಿದ್ದು, ಇದು ನಿಲ್ಲಬೇಕು. ಗೋವಾದ ಮೊಂಡುತನಕ್ಕೆ ಸ್ಪಷ್ಟ ರೀತಿಯ ಪ್ರತಿರೋಧ ತೋರುವ, ಸಂಧಾನಕ್ಕೆ ಪ್ರಧಾನಿ ಮೇಲೆ ಪ್ರಭಾವ ಬೀರುವ ಹಾಗೂ ನ್ಯಾಯಾಧಿಕರಣ ಮುಂದೆ ಸಮರ್ಥ ವಾದ ಮಂಡನೆ ಕಾರ್ಯ ಆಗಬೇಕು ಎಂಬುದು ರೈತರ ಹಕ್ಕೊತ್ತಾಯವಾಗಿದೆ. 

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು ?

India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.