ಮೊಬೈಲ್ ಫೋನ್ ಗೀಳಿಂದ ಹೊರಬನ್ನಿ
Team Udayavani, Aug 3, 2017, 2:21 PM IST
ದಾವಣಗೆರೆ: ಮೊಬೈಲ್ ಗೀಳು ಬದಿಗಿರಿಸಿ ಹೆಚ್ಚು ಅಧ್ಯಯನದಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಯಶೋಧಾ ಎಸ್. ವಂಟಿಗೋಡಿ ಸಲಹೆ ನೀಡಿದ್ದಾರೆ.
ಬುಧವಾರ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ್ದ ಪುನಶ್ಚೇತನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಮೊಬೈಲ್ ಹೆಚ್ಚು ಬಳಸುತ್ತಾ ಅಮೂಲ್ಯ ಸಮಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅದರಿಂದ ಹೊರ ಬಂದು ಉತ್ತಮ ಜೀವನ ಪಿಸಿಕೊಳ್ಳುವಂತಾಗಬೇಕು ಎಂದು ಆಶಿಸಿದರು. ನಿರಂತರ ಅಭ್ಯಾಸ ಸಾಧನೆಯ ಕೀಲಿ ಕೈ. ವಿದ್ಯಾರ್ಥಿ ಜೀವನದಲ್ಲಿ ಏನು ಮಾಡಬೇಕು, ಏನು ಮಾಡಬಾರದು ಎಂಬುದನ್ನು ತಿಳಿಸುವ ಉದ್ದೇಶಕ್ಕಾಗಿ ಏರ್ಪಡಿಸಿರುವ ಈ ಕಾರ್ಯಕ್ರಮ ಅರ್ಥಪೂರ್ಣ. ಈ ಕಾಲೇಜಿನಲ್ಲಿ ದೊರೆಯುವ ಉತ್ತಮ ಸೌಲಭ್ಯ ಸದುಪಯೋಗಪಡಿಸಿಕೊಂಡು ಜ್ಞಾನವಂತರು, ಸಾಧಕರಾಗಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಪಿ.ಎಸ್. ಶಿವಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ತಂದೆ-ತಾಯಂದಿರ ದೂಷಿಸದೆ ನಿರಂತರ ಪರಿಶ್ರಮದಿಂದ ಸಾಧಕರಾಗಬೇಕು. ಬಾವಿಯೊಳಗಿನ ಕಪ್ಪೆಗಳಾಗದೆ ಸಕಲ ಪಂಡಿತರಾಗಬೇಕು ಎಂದು ಕಿವಿ ಮಾತು ಹೇಳಿದರು.
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಎಚ್.ಎಸ್. ಮಂಜುನಾಥ್ ಕುರ್ಕಿ ಮಾತನಾಡಿ, ಶಿಕ್ಷಣ ಎಂದರೆ ಜೀವನ ಪ್ರಜ್ಞೆ ಮೂಡಿಸುವುದು. ವಿದ್ಯೆ ಜ್ಞಾನಕ್ಕಾಗಿಯೇ ಹೊರತು ಉದ್ಯೋಗಕ್ಕಾಗಿಯೇ ಅಲ್ಲ ಎಂದರು.
ಮೇ| ಆರ್. ಗೌರಮ್ಮ ಮಾತನಾಡಿ, ಎವಿಕೆ ಕಾಲೇಜು ತನ್ನದೇ ಆದ ಭವ್ಯ ಇತಿಹಾಸ ಒಳಗೊಂಡಿದ್ದು ಇಲ್ಲಿ ಅಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿನಿಯರು ರಾಜ್ಯ, ರಾಷ್ಟ್ರ ಮಟ್ಟದ ಹುದ್ದೆಯಲ್ಲಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ| ಬಿ.ಪಿ. ಕುಮಾರ್ ಪ್ರಾಸ್ತಾವಿಕ ನುಡಿಗಳಾನ್ನಾಡಿದರು. ಕಾರ್ಯಕ್ರಮದ ಸಂಘಟಕ ಜಿ.ಓ. ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರು. ಭಾವನಾ ಪ್ರಾರ್ಥಿಸಿದರು. ಸಿಂಧು ಸ್ವಾಗತಿಸಿದರು. ಧನ್ಯತಾ, ಸಂಜನಾ ನಿರೂಪಿಸಿದರು. ಅರ್ಪಿತ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.