ಹೆದ್ದಾರಿ ಡಿನೋಟಿಫೈ: ಶೀಘ್ರ ಕ್ರಮಕ್ಕೆ ಕೇಂದ್ರಕ್ಕೆ ಸಲಹೆ
Team Udayavani, Aug 4, 2017, 8:10 AM IST
ಬೆಂಗಳೂರು: ನಗರ ಪ್ರದೇಶದ ಮಧ್ಯೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ ಡಿನೋಟಿಫೈ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್
ಸಲಹೆ ನೀಡಿದೆ. ಕಂದಾಯ ಇಲಾಖೆ ದಾಖಲೆಗಳಲ್ಲಿ ಹೆದ್ದಾರಿ ವ್ಯಾಪ್ತಿಗೆ ಒಳಪಟ್ಟಿದೆ ಎಂಬ ಕಾರಣಕ್ಕೆ ಪರವಾನಿಗೆ
ನವೀಕರಣ ಮಾಡಲು ನಿರಾಕರಿಸಿರುವ ರಾಜ್ಯ ಅಬಕಾರಿ ಇಲಾಖೆಯ ಕ್ರಮ ಪ್ರಶ್ನಿಸಿ ಎಂ.ಜಿ ರೋಡ್‌ನ ವ್ಯಾಪ್ತಿಯಲ್ಲಿ ಬರುವ 20ಕ್ಕೂ ಹೆಚ್ಚು ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕರು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ ಈ ಸಲಹೆ ನೀಡಿತು. ವಿಚಾರಣೆ ವೇಳೆ ಹಾಜರಿದ್ದ ಕೇಂದ್ರ ಸರ್ಕಾರದ ಪರ ವಕೀಲರು, ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಹೆದ್ದಾರಿಯ ನಿರ್ವಹಣೆ ಸ್ಥಳೀಯಾಡಳಿತ ನೋಡಿಕೊಳ್ಳುತ್ತಿದೆ.
ಅಲ್ಲದೆ ನಗರ ಪ್ರದೇಶದ ಮಧ್ಯೆ ಹಾದು ಹೋಗಿರುವ ರಾಷ್ಟ್ರೀಯ ಹೆ¨ªಾರಿಗಳ ಡಿನೋಟಿಫೈಯನ್ನು ಅಬಕಾರಿ
ಇಲಾಖೆಯೇ ಮಾಡಲು ಅವಕಾಶವಿದೆ. ಈ ಹಿಂದೆ ರಾಜ್ಯ ಸರ್ಕಾರ ಹಲವು ಹೆದ್ದಾರಿಗಳನ್ನು ಇದೇ ರೀತಿ ಡಿನೋಟಿಫೈ ಮಾಡಿದೆ ಎಂದು ತಿಳಿಸಿದರು.
ಸರ್ಕಾರದ ಪರ ವಕೀಲರು ವಾದಿಸಿ, ಬೇರೆ ಜಿಲ್ಲೆಗಳಲ್ಲಿ ಹೆದ್ದಾರಿಗಳನ್ನು ಡಿನೋಟಿಫೈ ಮಾಡಿ ಬಾರ್‌ಗಳಿಗೆ ಪರವಾನಿಗೆ ನೀಡಲು ಅವಕಾಶವಿದೆ. ಆದರೆ ಈ ಅರ್ಜಿಗಳನ್ನು ಮಾಡಲು ಬರುವುದಿಲ್ಲ, ಬೈಪಾಸ್ ಕೂಡ ಇಲ್ಲದಿರುವುದರಿಂದ ಕಾನೂನು ತೊಡಕು ಗಳಿವೆ. ಹೀಗಾಗಿ ಕೇಂದ್ರ ಸರ್ಕಾರವೇ ಡಿನೋಟಿಫೈ ಮಾಡಬೇಕು ಎಂದರು. ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ, ಈ ಕುರಿತಂತೆ ಮುಂದಿನ 10 ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಕೇಂದ್ರಕ್ಕೆ ತಿಳಿಸಿ
ಅರ್ಜಿ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.