ಕೆರೆ ಡಿನೋಟಿಫೈ: ಇಲಾಖೆಗಳ ನಡುವೆಯೇ ಸಂಘರ್ಷ


Team Udayavani, Aug 4, 2017, 7:45 AM IST

ananathkumar.jpg

ಬೆಂಗಳೂರು: ನಿರ್ಜೀವ ಹಾಗೂ ಬತ್ತಿ ಹೋದ ಕೆರೆಗಳನ್ನು ಡಿ ನೋಟಿಫಿಕೇಷನ್‌ ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರದ ಇಲಾಖೆಗಳ ನಡುವೆಯೇ ಸಂಘರ್ಷ ಪ್ರಾರಂಭವಾಗಿದ್ದು, ಆ ಕುರಿತ ಪ್ರಸ್ತಾವನೆಯನ್ನು ಮುಂದಿನ ಸಂಪುಟ ಸಭೆಯಲ್ಲಿ ಸರ್ಕಾರ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಕಾನೂನು, ಆರ್ಥಿಕ ಇಲಾಖೆ ಕೆರೆಗಳ ಡಿ ನೋಟಿಫಿಕೇಶನ್‌ಗೆ ಸಹಮತ ವ್ಯಕ್ತಪಡಿಸಿದ್ದರೆ, ಗ್ರಾಮೀಣಾ ಭಿವೃದಿಟಛಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿದೆ. ಇನ್ನು ಸಣ್ಣ ರಾವರಿ, ನಗರಾಭಿವೃದಿಟಛಿ, ಅರಣ್ಯ ಇಲಾಖೆಗಳು ಮೌಖೀಕವಾಗಿ ಇಂತಹ ಕ್ರಮ ಸರಿಯಲ್ಲ. ಲಿಖೀತವಾಗಿ ಒಪ್ಪಿಗೆ ಕೊಡಲು ಸಾಧ್ಯವಾಗದು ಎಂಬ ಅಭಿಪ್ರಾಯ ನೀಡಿವೆ.

ಪ್ರಸ್ತುತ ಕಂದಾಯ ಇಲಾಖೆ ಪ್ರಸ್ತಾಪದ ಪ್ರಕಾರ ಡಿ ನೋಟಿಫಿಕೇಷನ್‌ ಮಾಡಿದರೆ ರಿಯಲ್‌ ಎಸ್ಟೇಟ್‌ ಮಾಫಿಯಾ ಹಾಗೂ ಭೂ ಒತ್ತುವರಿದಾರರಿಗೆ ಅನುಕೂಲವಾಗುತ್ತದೆ. ಜತೆಗೆ ಸರ್ಕಾರ ಕ್ರಮದ ಬಗ್ಗೆ ಸಾರ್ವಜನಿಕ ವಲಯದಲ್ಲೂ ಶಂಕೆ ಮೂಡುತ್ತದೆ. ಇದೊಂದು ವಿವಾದ ಆಗಿರುವುದರಿಂದ ಸರ್ಕಾರ ಈ ವಿಚಾರದಲ್ಲಿ ಪಾರದರ್ಶಕತೆ ಪ್ರದರ್ಶಿಸಬೇಕಿದೆ. ಇಲ್ಲದಿದ್ದರೆ ಕಷ್ಟ ಎಂದು ಹಿರಿಯ ಸಚಿವರು ಖುದ್ದು ಮುಖ್ಯಮಂತ್ರಿಯವರ ಬಳಿಯೇ ಅಸಮಾಧಾನ
ವ್ಯಕ್ತಪಡಿಸಿದ್ದಾರೆ.

ಹೀಗಾಗಿ, ಗುಣಲಕ್ಷಣ ಕಳೆದುಕೊಂಡು ಮೂಲ ಸ್ಥಿತಿಗೆ ತರಲಾಗದಂತಹ ಕೆರೆ, ಕಟ್ಟೆ, ಕುಂಟೆ ಮತ್ತು ಹಳ್ಳ ಮುಂತಾದವುಗಳನ್ನು ಸಾರ್ವಜನಿಕ ಉದ್ದೇಶಕ್ಕೆ ಅಗತ್ಯವೆಂದು ಕಂಡು ಬಂದಾಗ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 68ರ ಅಡಿಯಲ್ಲಿ ತಿದ್ದುಪಡಿ ತರಲು ಕಂದಾಯ ಇಲಾಖೆಯಿಂದ ತಯಾರಿಸಲಾಗಿರುವ ಪ್ರಸ್ತಾವನೆ ಮುಂದಿನ ಸಂಪುಟ ಸಭೆಯ ಮುಂದಿಟ್ಟು ವಾಪಸ್‌ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕಂದಾಯ ದಾಖಲೆಗಳಲ್ಲಿ ಈಗಲೂ ಕೆರೆ ಎಂದೇ ನಮೂದಾಗಿದ್ದರೂ ಕರ್ನಾಟಕ ಗೃಹ ಮಂಡಳಿ, ಬಿಡಿಎ ಹಾಗೂ ನಗರಾಭಿವೃದಿಟಛಿ ಪ್ರಾಧಿಕಾರಿಗಳ ಮೂಲಕ ಕೆರೆಗಳ ಜಾಗದಲ್ಲಿ ಈಗಾಗಲೇ ಬಡಾವಣೆ ನಿರ್ಮಿಸಿದ್ದರೆ ಅಷ್ಟು ಪ್ರದೇಶಕ್ಕೆ ಸೀಮಿತವಾಗಿ ಡಿನೋಟಿಫೈ ಮಾಡಿ ಸುತ್ತಮುತ್ತ ಒತ್ತುವರಿಯಾಗಿದ್ದರೆ ತೆರವುಗೊಳಿಸಿ ಹಸಿರು ವಲಯ ನಿರ್ಮಿಸುವ
ಪ್ರಸ್ತಾವನೆ ಸಿದಟಛಿಪಡಿಸಲು ಸರ್ಕಾರ ತೀರ್ಮಾನಿಸಿದೆ. ಆದರೆ, ಇದಕ್ಕೂ ಮುನ್ನ ಕೆ.ಬಿ.ಕೋಳಿವಾಡ ಅವರ ಕೆರೆ ಒತ್ತುವರಿ ವರದಿ, ಎ.ಟಿ.ರಾಮಸ್ವಾಮಿ ಹಾಗೂ ಬಾಲಸುಬ್ರಹ್ಮಣ್ಯಂ ಅವರು ನೀಡಿರುವ ಸರ್ಕಾರಿ ಭೂಮಿ ಒತ್ತುವರಿ ವರದಿಗಳು, ಸುಪ್ರೀಂಕೋರ್ಟ್‌ ಹಾಗೂ ಹಸಿರು ಪೀಠದ ತೀರ್ಪು ಇವೆಲ್ಲವನ್ನೂ ಪರಾಮರ್ಶೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ರಾಜ್ಯದ 500 ಕಡೆ ಕೆರೆಯ ಜಾಗದಲ್ಲಿ ಗೃಹ ಮಂಡಳಿ, ಬಿಡಿಎ, ನಗರಾಭಿವೃದಿಟಛಿ ಪ್ರಾಧಿಕಾರಗಳ ಮೂಲಕ ಬಡಾವಣೆ ರಚಿಸಲಾಗಿದೆ. ಆದರೆ, ಕೆಲವೆಡೆ ಕೆರೆಯ ಪ್ರದೇಶದಲ್ಲಿ ಶೇ.50ರಿಂದ 60ರಷ್ಟು ಜಾಗದಲ್ಲಿ ನಗರಾಭಿವೃದಿಟಛಿ, ಕಂದಾಯ ಇಲಾಖೆ ಮೂಲಕ ಅಧಿಸೂಚನೆ ಹೊರಡಿಸಿ ಬಡಾವಣೆ ರಚಿಸಲಾಗಿದೆ. ಉಳಿದ ಭಾಗ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿದೆ. ಇದೀಗ ಬಡಾವಣೆ ರಚನೆಯಾಗಿರುವ ಪ್ರದೇಶವು ಕಂದಾಯ ಮೂಲ ದಾಖಲೆಗಳಲ್ಲಿ ಇನ್ನೂ ಕೆರೆ ಎಂದು ನಮೂದಾಗಿದೆ. ಇಂದಲ್ಲ ನಾಳೆ ಅದು ಸಮಸ್ಯೆಯಾಗುವುದರಿಂದ ಕಾಯ್ದೆಗೆ ತಿದ್ದುಪಡಿ ತರುವುದು ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸುತ್ತಾರೆ.

ನಿರ್ದಿಷ್ಟವಾಗಿ 1500 ಕೆರೆಗಳನ್ನು ಡಿನೋಟಿಫಿಕೇಷನ್‌ ಮಾಡುವ ಅಥವಾ ಆ ರೀತಿಯ ಯಾವುದೇ ಕೆರೆಗಳನ್ನೂ ಗುರುತಿಸಿಲ್ಲ ಎಂದೂ ಅಧಿಕಾರಿಗಳು ಹೇಳುತ್ತಾರೆ.

ಆಗಿದ್ದೇನು?: ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅವರು 2017ರ ಏ.22ರಂದು ಟಿಪ್ಪಣಿ ಸಿದಟಛಿಪಡಿಸಿ 2017ರ ಏ.19 ರಂದು ನಡೆದ ಸಂಪುಟ ಸಭೆಯಲ್ಲಿ, ಮೂಲ ಸ್ಥಿತಿಯನ್ನು ಕಳೆದುಕೊಂಡಿರುವ ಕೆರೆಗಳನ್ನು ಸಾರ್ವಜನಿಕ ಉದ್ದೇಶಕ್ಕೆ ಬೇಕಾದಾಗ ಬಳಸಿಕೊಳ್ಳಲು ಈಗಿರುವ ಕರ್ನಾಟಕ ಭೂ ಕಂದಾಯ ಅಧಿನಿಯಮ
1964ರ ಕಲಂ 68 ರ ಅಡಿ ಸಾಧ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾದಾಗ ಸದರಿ ಕಲಂ ತಿದ್ದುಮಾಡಿ ಅವಕಾಶ ಮಾಡಿಕೊಡಬೇಕೆಂದು ಸಚಿವ ಸಂಪುಟ ಸಭೆ ನಿರ್ಧರಿಸಿ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿ, ಈ ವಿಚಾರದಲ್ಲಿ ಕಾನೂನು, ಆರ್ಥಿಕ, ನಗರಾಭಿವೃದಿಟಛಿ, ಸಣ್ಣ ನೀರಾವರಿ , ಅರಣ್ಯ ಮತ್ತು ಪರಿಸರ ಹಾಗೂ ಗ್ರಾಮೀಣಾಭಿವೃದಿಟಛಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳ ಅಭಿಪ್ರಾಯ ಪಡೆಯುವುದು ಎಂದು ತಿಳಿಸಿದ್ದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.