ತೆಲಗಿಗೆ ವಿಶೇಷ ಆತಿಥ್ಯ: ಇಬ್ಬರು ಅಧಿಕಾರಿಗಳಿಗೆ 5 ವರ್ಷ ಜೈಲು
Team Udayavani, Aug 4, 2017, 7:35 AM IST
ಬೆಂಗಳೂರು: ಬಹುಕೋಟಿ ರೂ. ನಕಲಿ ಛಾಪಾ ಕಾಗದ ಪ್ರಕರಣದ ಪ್ರಮುಖ ಅಪರಾಧಿ ಅಬ್ದುಲ್ ಕರೀಂ ತೆಲಗಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ವಿಶೇಷ ಆತಿಥ್ಯ ಕಲ್ಪಿಸಿದ್ದ ಇಬ್ಬರು ಜೈಲು ಅಧಿಕಾರಿಗಳಿಗೆ ಐದು ವರ್ಷ ಜೈಲು ಹಾಗೂ ತಲಾ 50 ಸಾವಿರ ದಂಡ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ. 2001 ಹಾಗೂ 2002ನೇ ಸಾಲಿನಲ್ಲಿ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳಾಗಿದ್ದ ಪಿ.ಎನ್. ಜಯಸಿಂಹ ಹಾಗೂ ನಂಜಪ್ಪ, ಕರೀಂ ತೆಲಗಿಗೆ ವಿಶೇಷ ಸೌಲಭ್ಯ ಹಾಗೂ ಛಾಪಾ ಕಾಗದ ದಂಧೆ ನಡೆಸಲು ಅವಕಾಶ ಮಾಡಿಕೊಟ್ಟಿದ್ದ ಪ್ರಕರಣದಲ್ಲಿ ಈ ಶಿಕ್ಷೆ ವಿಧಿಸಲಾಗಿದೆ.
ಪ್ರಕರಣದ ಇಬ್ಬರೂ ಆರೋಪಿಗಳ ವಿರುದ್ಧದ ಆರೋಪ ಪ್ರಕರಣವನ್ನು 2010ರಲ್ಲಿ ರದ್ದುಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ನ್ಯಾ| ರವಿ ಮಳಿಮಠ, ನ್ಯಾ| ಮೈಕೆಲ್ ಕುನ್ಹಾ ಅವರಿದ್ದ ವಿಭಾಗೀಯ ಪೀಠ, ಜೈಲು ಅಧಿಕಾರಿಗಳಿಗಿಬ್ಬರಿಗೂ 5 ವರ್ಷ ಜೈಲು, ದಂಡ ವಿಧಿಸಿದೆ.
ಅಲ್ಲದೆ ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಆದೇಶ ರದ್ದುಪಡಿಸಿದೆ. ಪ್ರಕರಣ ಸಂಬಂಧ ಈಗಾಗಲೇ 3 ವರ್ಷ 10 ತಿಂಗಳು ಜೈಲು ಶಿಕ್ಷೆ ಪೂರೈಸಿರುವ ಅಧಿಕಾರಿಗಳಿಬ್ಬರೂ ಉಳಿದ ಅವಧಿಯ ಜೈಲುಶಿಕ್ಷೆ ಪೂರೈಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.