ಭದ್ರತೆಯೊಂದಿಗೆ ಶೋಧ, ಪ್ರಶ್ನೆಗಳ ಸುರಿಮಳೆ..


Team Udayavani, Aug 5, 2017, 7:00 AM IST

PTI8_4_2017_000148A.jpg

ಬೆಂಗಳೂರು: ಕಳೆದ ಮೂರು ದಿನಗಳಿಂದ ಮನೆಯೊಳಗೆ ಬಿಗಿಭದ್ರತೆಯಲ್ಲಿ ಐಟಿ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವಂತೆಯೇ, ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅವರು ಹೈರಾಣಾಗಿದ್ದು, ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ಬೆಳಗ್ಗೆಯಿಂದಲೇಸದಾಶಿವ ನಗರದ ಡಿಕೆಶಿಯವರ ಮನೆಯ ಹೊರ ಭಾಗದಲ್ಲಿ ಕೆಪಿಸಿಸಿ ಕಾನೂನು ಘಟಕದ ಸದಸ್ಯರು, ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಜಮಾಯಿಸಿ, ಡಿಕೆಶಿಯವರನ್ನು ನೋಡಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.

ಇದ್ಯಾವುದಕ್ಕೂ ಮಣೆಹಾಕದ ಭದ್ರತಾ ಸಿಬ್ಬಂದಿ, ಉನ್ನತ ಅಧಿಕಾರಿಗಳ ಅನುಮತಿ ಇಲ್ಲದೆ ಯಾರೊಬ್ಬರಿಗೂ ಮನೆಯೊಳಗೆ ಪ್ರವೇಶ ನೀಡಿಲ್ಲ ಮತ್ತು ಮನೆಯಿಂದ ಯಾರನ್ನೂ ಹೊರಗೆ ಬಿಟ್ಟಿಲ್ಲ. 

ಅಣ್ಣನ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಏರುಪೇರಾಗಿದೆ ಎಂಬ ಸುದ್ದಿ ತಿಳಿದ ತಕ್ಷಣವೇ ಸದಾಶಿವನಗರಕ್ಕೆ ಆಗಮಿಸಿದ್ದ
ಸಂಸದ ಡಿ.ಕೆ.ಸುರೇಶ್‌ ಅವರನ್ನು ಮನೆಯೊಳಗೆ ಬಿಡಲು ಭದ್ರತಾ ಸಿಬ್ಬಂದಿ ಆರಂಭದಲ್ಲಿ ನಿರಾಕರಿಸಿದರು.

ನಂತರ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಘೋಷಣೆ ಕೂಗುತ್ತಿದ್ದಂತೆ ಸ್ಥಳೀಯ ಪೊಲೀಸರು ಸಿಆರ್‌ಪಿಎಫ್ ಯೋಧರ ಮನವೊಲಿಸಿದರು. ಮನೆಯೊಳಗೆ ಪ್ರವೇಶಿಸಿದ ಡಿ.ಕೆ. ಸುರೇಶ್‌, ಅಣ್ಣನೊಂದಿಗೆ ಸ್ವಲ್ಪಹೊತ್ತು ಮಾತುಕತೆ ನಡೆಸಿ, ಮನೆಯವರಿಗೆ ವರಮಹಾಲಕ್ಷ್ಮಿಹಬ್ಬದ ಶುಭಾಶಯ ಕೋರಿ ವಾಪಸ್‌ ಆದರು.

ಸಾಲು ಸಾಲು ಪ್ರಶ್ನೆ: ಡಿಕೆಶಿಯವರ ಮನೆಯೊಳಗೆ ಬೀಡುಬಿಟ್ಟಿರುವ ಐಟಿ ಅಧಿಕಾರಿಗಳು ಒಂದೊಂದು ದಾಖಲೆ ಸಿಕ್ಕಾಗಲೂ ಡಿಕೆಶಿಯವನ್ನು ಪ್ರಶ್ನಿಸುತ್ತಿದ್ದರು. ಅಧಿಕಾರಿಗಳ ಸಾಲು ಸಾಲು ಪ್ರಶ್ನೆಗೆ ತಾಳ್ಮೆಯಿಂದಲೇ ಡಿಕೆಶಿ ಉತ್ತರಿಸುತ್ತಿದ್ದರು ಎನ್ನಲಾಗಿದೆ. ಡಿಕೆಶಿ ಸೇರಿ ಕುಟುಂಬ ಸದಸ್ಯರಿಗೆ ಮನೆಯಿಂದ ಹೊರಗೆ ಹೋಗಲು ಅಥವಾ ಸಂಬಂಧಿಗಳಿಗೆ ಮನೆಯೊಳಗೆ ಹೊಗಲು ಅವಕಾಶವೇ ನೀಡುತ್ತಿರಲಿಲ್ಲ.

ಐಟಿ ಇಲಾಖೆಯ ಹಿರಿಯ ಅಧಿಕಾರಿ ಬಿ.ಆರ್‌.ಬಾಲಕೃಷ್ಣ ಅವರು ಶೋಧ ಕಾರ್ಯದಿಂದ ದೊರತ ಎಲ್ಲಾ ದಾಖಲೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದಿದ್ದಾರೆ ಎನ್ನಲಾಗಿದೆ. ಆರೋಗ್ಯದಲ್ಲಿ ವ್ಯತ್ಯಾಸ: ಕಳೆದ ಎರಡು ದಿನಗಳಿಂದ ಐಟಿ ಅಧಿಕಾರಿಗಳು ಮನೆಯೊಳಗೆ ಇರುವುದರಿಂದ ಸ್ವಲ್ಪ ಮಟ್ಟಿನ ಇರುಸುಮುರಿಸಿಗೆ ಒಳಗಾಗಿರುವ ಸಚಿವ ಡಿ.ಕೆ.ಶಿವಕುಮಾರ್‌ ಸರಿಯಾಗಿ ಊಟ ಮತ್ತು ನಿದ್ದೆ ಮಾಡದೇ ಇರುವುದರಿಂದ ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಏರುಪೇರಾಗಿತ್ತು. ನಂತರ ವೈದ್ಯರನ್ನು ಕರೆಸಿ, ಆರೋಗ್ಯವನ್ನು ಪರಿಶೀಲಿಸಲಾಯಿತು. ಡಿಕೆಶಿ ಹಾಗೂ ಅವರ ಮನೆಯವರ ಮೊಬೈಲ್‌ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಸ್ಥಿರ ದೂರವಾಣಿ ಕಡಿತಗೊಳಸಲಾಗಿತು.

ದಾಖಲೆ ಪರಿಶೀಲನೆ 
ಬೆಂಗಳೂರಿನ ಪ್ರತಿಷ್ಠಿತ ಏರಿಯಾದಲ್ಲಿ ಒಂದಾದ ಸದಾಶಿವ ನಗರದಲ್ಲಿರುವ ಡಿಕೆಶಿಯವರ ನಿವಾಸ ಕೆಂಕೇರಿಗೆ ಎರಡು ದಿನದ ಹಿಂದೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬುಧವಾರ ಮುಂಜಾನೆ ಆರಂಭವಾಗಿದ್ದ ದಾಳಿ, ಗುರುವಾರ ಪೂರ್ತಿ
ನಡೆದಿದ್ದು, ಅಧಿಕಾರಿಗಳು ಅಲ್ಲಿಯೇ ತಂಗಿದ್ದರು. ಶುಕ್ರವಾರ ಬೆಳಗ್ಗೆಯಿಂದಲೇ ಶೋಧಕಾರ್ಯ ಆರಂಭಿಸಿದ್ದರು. ಮನೆ ಹಾಗೂ ಮನೆಯ ಸಮೀಪವೇ ಇರುವ ಕಚೇರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಂಪೂರ್ಣವಾಗಿ ಶೋಧಿಸಿದ್ದಾರೆ.

ಕಾರ್ಯಕರ್ತರ ತಳಮಳ 
ಬೆಳಗ್ಗೆಯಿಂದಲೇ ಡಿಕೆಶಿಯವರ ನಿವಾಸದೆಡೆಗೆ ಜಮಾಯಿಸಿದ್ದ ಕಾರ್ಯಕರ್ತರು ಅವರನ್ನು ನೋಡಲು ಮತ್ತು ಅವರೊಂದಿಗೆ ಮಾತನಾಡಲು ಅವಕಾಶ ನೀಡಬೇಕೆಂದು ಆಗ್ರಹಿಸುತ್ತಿದ್ದರು. ಕಾರ್ಯಕರ್ತರ ಎಲ್ಲ ಮನವಿಗೂ ಭದ್ರತಾ ಸಿಬ್ಬಂದಿ ನಿರಾಕರಿಸಿದ್ದರಿಂದ ಕಾರ್ಯಕರ್ತರು ಗಂಟೆಗಟ್ಟಲೇ ರಸ್ತೆ ಬದಿಯಲ್ಲೇ ನಿಂತಿದ್ದರು. ಅಧಿಕಾರಿಗಳ ಒಂದೊಂದು ವಾಹನ ಬರುತ್ತಿದ್ದಂತೆ ಹಾಗೂ ಮನೆಯೊಳಗಿಂದ ಕಾರುಗಳು ಹೊರಗೆ ಹೋಗುತ್ತಿದ್ದಂತೆ ಕಾರ್ಯಕರ್ತರಲ್ಲಿ ತಳಮಳ ಉಂಟಾಗುತಿತ್ತು. ಆಗಾಗಾ ಡಿಕೆಶಿಯವರ ಪರ ಘೋಷಣೆ ಕೂಗುತ್ತಾ ತಮ್ಮ ಬೆಂಬಲ ವ್ಯಕ್ತಪಡಿಸುತ್ತಿದ್ದರು.

ಕಾನೂನು ಘಟಕ
ಪದಾಧಿಕಾರಿಗಳ ಪ್ರತಿಭಟನೆ

ಡಿ.ಕೆ.ಶಿವಕುಮಾರ್‌ ಅವರ ಮೇಲಿನ ದಾಳಿ ರಾಜಕೀಯ ಪ್ರೇರಿತವಾಗಿದೆ. ಗುಜರಾತ್‌ ಶಾಸಕರಿಗೆ ರಾಜ್ಯದಲ್ಲಿ ಆತಿಥ್ಯ ನೀಡಿರುವುದಕ್ಕೆ ಕೇಂದ್ರ ಬಿಜೆಪಿ ನಾಯಕರು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಘಟಕದ ಪದಾಧಿಕಾರಿಗಳು ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ ಸೇರಿ ಪದಾಧಿಕಾರಿಗಳು ಸದಾಶಿವ ನಗರದ ಡಿಕೆಶಿಯವರ ಮನೆಯ ಎದುರು ಬಂದು ಪ್ರತಿಭಟನೆ ನಡೆಸಿದರು. 

ವರಮಹಾಲಕ್ಷ್ಮಿ ಹಬ್ಬ ಇರುವುದರಿಂದ ಅವರಿಗೆ ಹಬ್ಬದ ಸಂದೇಶ ತಿಳಿಸಲು ಅವಕಾಶ ಮಾಡಿಕೊಡಬೇಕು ಎಂದು ಘಟಕ ಮಹಿಳಾ
ಪದಾಧಿಕಾರಿಗಳು ಆಗ್ರಹಿಸಿದರು. ಭದ್ರತಾ ಸಿಬ್ಬಂದಿ ಇದಕ್ಕೆ ಅವಕಾಶ ಮಾಡಿಕೊಡದಿದ್ದಾಗ ಸ್ವಲ್ಪ ಹೊತ್ತು ಪೊಲೀಸರ ನಡುವೆ ಮಾತಿನ ಚಕಮುಕಿ ನಡೆಯಿತು. ಮನೆಯೊಳಗೆ ಬಿಡುವುದಿಲ್ಲ ಎಂಬುದು ಖಚಿತವಾದ ನಂತರ ಕೆಲಕಾಲ ಪ್ರತಿಭಟನೆ ನಡೆಸಿ, ಡಿಕೆಶಿ ಪರವಾಗಿ ಘೋಷಣೆ ಕೂಗಿ ಅಲ್ಲಿಂದ ವಾಪಸ್‌ ಆದರು. ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ್‌ ಮಾತನಾಡಿ, ಇದೊಂದು ರಾಜಕೀಯ ಪ್ರೇರಿತ ದಾಳಿ. ಸಿಆರ್‌ಪಿಎಫ್ ಯೋಧರ ಮೂಲಕ ಭದ್ರತೆ ನೀಡಿ, ಭಯ ಹುಟ್ಟಿಸುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದವರಿದರೆ, ಕಾನೂನು ಘಟಕದಿಂದ ನ್ಯಾಯಾಲಯದ ಮೆಟ್ಟಿಲೇರಲಿದ್ದೇವೆ ಎಂಬ ಎಚ್ಚರಿಕೆ ನೀಡಿದರು.

ದಾಳಿ ಖಂಡಿಸಿ ಪಂಜಿನ ಮೆರವಣಿಗೆ 
ಬೆಂಗಳೂರು:
ಡಿ.ಕೆ.ಶಿವಕುಮಾರ್‌ ಮನೆ ಮೇಲಿನ ಐಟಿ ದಾಳಿ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ರಾತ್ರಿ ಸದಾಶಿವನಗರ ನಿವಾಸದ ಮುಂಭಾಗ ಪಂಜಿನ ಪ್ರತಿಭಟನೆ ನಡೆಸಿದರು. ಏಕಾಏಕಿ ನೂರಾರು ಕಾರ್ಯಕರ್ತರು ಬಂದ ಹಿನ್ನೆಲೆಯಲ್ಲಿ ಪೊಲೀಸರು ಶಿವಕುಮಾರ್‌ ಮನೆಯ ಪಕ್ಕದ ರಸ್ತೆಯಲ್ಲೇ ರಸ್ತೆ ವಿಭಜಕ ಹಾಕಿ ತಡೆದರು. ಗಂಟೆಗೂ ಅಧಿಕ ಕಾಲ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ವಿರುದಟಛಿ ಘೋಷಣೆ ಕೂಗಿದರು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಡಿಕೆಶಿ ಮನೆ ಮುಂದೆ ಮೂರು ದಿನಗಳಿಂದ ವಾಸ್ತವ್ಯ ಹೂಡಿದ್ದ ಹತ್ತಾರು ಮಂದಿ ಬೆಂಬಲಿಗರನ್ನು ಪೊಲೀಸರು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಬೆಂಬಲಿಗರು ಮತ್ತು ಪೊಲೀಸರು ನಡುವೆ ಮಾತಿನ ಚಕಮಕಿ ನಡೆಯಿತು.

ಟಾಪ್ ನ್ಯೂಸ್

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.