ನಿಟ್ಟೆ ಲೆಮಿನಾ ಬಳಿ ಬಾವಿಗೆ ಬಿದ್ದ ಚಿರತೆ ರಕ್ಷಣೆ
Team Udayavani, Aug 5, 2017, 8:15 AM IST
ಬೆಳ್ಮಣ್: ನಿಟ್ಟೆ ಗ್ರಾಮದ ಲೆಮಿನಾ ಬಳಿ ಶುಕ್ರವಾರ ಚಿರತೆಯೊಂದು ಬಾವಿಗೆ ಬಿದ್ದಿದ್ದು ಕಾರ್ಕಳ ವಲಯ ಅರಣ್ಯಾಧಿಕಾರಿಗಳು ರಕ್ಷಿಸಿ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ. ನಿಟ್ಟೆ ಲೆಮಿನಾ ಬಳಿಯ ಜುಲಿಯಾನ ನೊರೋನ್ಹಾ ಅವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ಗಮನಿಸಿದ್ದು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು.
ಈ ಸಂದರ್ಭ ಕಾರ್ಕಳ ವಲಯ ಅರಣ್ಯಾಧಿಕಾರಿ ಜಿ.ಡಿ. ದಿನೇಶ್, ಬೆಳ್ಮಣ್ ಉಪವಲಯ ಅರಣ್ಯಾಧಿಕಾರಿ ಪ್ರಕಾಶ್ಚಂದ್ರ, ಕಾರ್ಕಳ ವಲಯದ ಉಪವಲಯ ಅರಣ್ಯಾಧಿಕಾರಿಗಳಾದ ಮಂಜುನಾಥ್, ರಾಜಶೇಖರ್ ಸ್ಥಳಕ್ಕಾಗಮಿಸಿ ಶ್ರಮವಹಿಸಿ ಚಿರತೆಯನ್ನು ರಕ್ಷಿಸಿದರು. ಅರಣ್ಯ ರಕ್ಷಕರಾದ ಗಣೇಶ್ ದೇವಾಡಿಗ, ಆನಂದ್, ಕೃಷ್ಣಪ್ಪ, ಅರಣ್ಯ ವೀಕ್ಷಕರಾದ ಶ್ರೀಧರ್ ಪೂಜಾರಿ, ಬಾಬು, ಪ್ರಕಾಶ್, ಪಕೀರಪ್ಪ, ವಾಹನ ಚಾಲಕ ಅನ್ವರ್ ಹಾಗೂ ಗ್ರಾಮಸ್ಥರು ಚಿರತೆಯನ್ನು ರಕ್ಷಿಸುವಲ್ಲಿ ಸಹಕರಿಸಿದರು. ಈ ಚಿರತೆ ಹಲವಾರು ದಿನಗಳಿಂದ ಈ ಪ್ರದೇಶದಲ್ಲಿ ರಾತ್ರಿ ಹೊತ್ತು ತಿರುಗಾಟ ನಡೆಸುತ್ತಿತ್ತೆಂದು ಗ್ರಾಮಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.