ವಿವಿಧೆಡೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ


Team Udayavani, Aug 5, 2017, 2:29 PM IST

05-BJP-6.jpg

ಮುದ್ದೇಬಿಹಾಳ: ಇಲ್ಲಿಯ ತಾಲೂಕಾಸ್ಪತ್ರೆಗೆ ವಿಜಯಪುರ ಜಿಲ್ಲಾಧಿಕಾರಿ ಶಿವಕುಮಾರ ಕೆ.ಬಿ. ಅವರು ಶುಕ್ರವಾರ ದಿಢೀರ್‌ ಭೇಟಿ ನೀಡಿ ಅಲ್ಲಿಯ ಹಣಕಾಸು ನಿರ್ವಹಣೆ ಹಾಗೂ ರೋಗಿಗಳ ರೋಗ್ಯದ ಬಗ್ಗೆ ಸ್ಥಳೀಯ ವೈದ್ಯರ ಸ್ಪಂದನೆ ಬಗ್ಗೆ ವಿಚಾರಿಸಿದರು. ಆಸ್ಪತ್ರೆಗೆ ಪ್ರವೇಶಿಸುತ್ತಿದಂತೆ ಸಿಬ್ಬಂದಿಗಳ ಹಾಜರಿ ಪುಸ್ತಕ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಎಲ್ಲ ಸಿಬ್ಬಂದಿಗಳನ್ನು ಕರೆಸಿ ಹಾಜರಿ ಹಾಕಿದ ಸಿಬ್ಬಂದಿಗಳನ್ನು ಖಚಿತಪಡಿಸಿಕೊಂಡರು. ನಂತರ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೋಣೆ, ಎಕ್ಸರೇ ಸೌಲಭ್ಯ, ರಕ್ತ, ಮೂತ್ರ ತಪಾಸಣಾ ವಿಭಾಗ, ಬಯೋವೇಸ್ಟ್‌ ನಿರ್ವಹಣೆ ಘಟಕ, ಶವಾಗಾರ ಹೀಗೆ ಆಸ್ಪತ್ರೆಯಲ್ಲಿರುವ ಹಲವು ಸೌಕರ್ಯಗಳಿಗೆ ಖುದ್ದು ಭೇಟಿ ನೀಡಿ ಅಲ್ಲಿನ ಉಸ್ತುವಾರಿ ಸಿಬ್ಬಂದಿಯಿಂದ ಆಯಾ
ವಿಭಾಗಕ್ಕೆ ಸಂಬಂಧಿ ಸಿದ ಮಾಹಿತಿ ಪಡೆದುಕೊಂಡರು. ನಂತರ ರೋಗಿಗಳನ್ನು ಖುದ್ದಾಗಿ ಬೇಟಿ ಮಾಡಿದ ಅವರು ಆಸ್ಪತ್ರೆ ಸಿಬ್ಬಂದಿಗಳು ಚಿಕಿತ್ಸೆಗಾಗಿ ಹಣ ಪಡೆದುಕೊಳ್ಳುತ್ತಿದ್ದಾರೆಯೇ ಎಂದು ಮಾಹಿತಿ ಪಡೆದುಕೊಂಡರು.

ಆಸ್ಪತ್ರೆಗೆ ಜಾಗ ನೀಡಿದ ಜಮೀನಿನ ಮೂಲ ಮಾಲೀಕರು ಹೆಚ್ಚಿನ ಭೂಪರಿಹಾರ ಕೋರಿ ಕೋರ್ಟ್‌ ಮೆಟ್ಟಿಲೇರಿದ್ದು ಪ್ರಕರಣ ಇನ್ನೂ ನ್ಯಾಯಾಯದಲ್ಲಿದೆ. ತಹಶೀಲ್ದಾರ್‌ ಕಚೇರಿಯಿಂದ ಪೋಡಿ, 11ಇ ನಕ್ಷೆ ಮುಂತಾದವುಗಳು ಶೀಘ್ರ ಲಭ್ಯವಾದಲ್ಲಿ ಪ್ರಕರಣ ಇತ್ಯರ್ಥಕ್ಕೆ ಅನುಕೂಲವಾಗುತ್ತದೆ ಎಂದು ಡಾ| ಓಂಕಾರ ತಿಳಿಸಿದಾಗ ಜೊತೆಯಲ್ಲೇ ಇದ್ದ ತಹಶೀಲ್ದಾರ್‌ ಎಂ.ಎ.ಎಸ್‌. ಬಾಗವಾನಗೆ ಈ ಕುರಿತು ಆದ್ಯತೆ ಮೇರೆಗೆ ಸಹಕಾರ ನೀಡಲು ಜಿಲ್ಲಾಧಿಕಾರಿ ಸೂಚಿಸಿ ವರದಿ ಪಡೆದುಕೊಂಡರು. ಒಂದು ಕಡೆ ಆಸ್ಪತ್ರೆ ಕಚೇರಿಯಲ್ಲಿ ಡಿಸಿ ಲೆಕ್ಕಪತ್ರ ತಪಾಸಣೆ, ಹಾಜರಿ ಪುಸ್ತಕ ಪರಿಶೀಲನೆ ನಡೆಸುತ್ತಿದ್ದರೆ ಇನ್ನೊಂದು ಕಡೆ ಆಸ್ಪತ್ರೆ ಮೇಲ್‌ನರ್ಸ್ಗಳು ಒಳರೋಗಿಗಳ ವಾರ್ಡ್‌ನಲ್ಲಿನ ಬೆಡ್‌ಗೆ ಸ್ವತ್ಛಗೊಳಿಸಿದ ಬೆಡ್‌ ಶೀಟ್‌ ಹಾಕುತ್ತಿರುವುದು ಮಾಧ್ಯಮದವರ ಗಮನಕ್ಕೆ ಬಂತು.

ಜಮ್ಮಲದಿನ್ನಿ-ಸರೂರ ಗ್ರಾಮಕ್ಕೆ ಭೇಟಿ
ತಾಳಿಕೋಟೆ: ಸಮೀಪದ ಜಮ್ಮಲದಿನ್ನಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹಾಗೂ ಸರೂರಿನ ಘನತ್ಯಾಜ್ಯ ವಿಲೇವಾರಿ ಘಟಕಗಳಿಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ ಶುಕ್ರವಾರ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಸತಿ ಶಾಲೆಗೆ ಭೇಟಿ ನೀಡಿದ ಡಿಸಿ ಶಾಲಾ ಮಕ್ಕಳಿಗೆ ಪಾಠ ಮಾಡಿದರು. ಅಲ್ಲದೇ ಅಡುಗೆ ಕೋಣೆಗೆ ತೆರಳಿ ಊಟದ ರುಚಿ ಸವಿದರು.

ವಸತಿ ನಿಲಯದಲ್ಲಿ ಪಾತ್ರೆಗಳನ್ನು ಇಡುವ ವ್ಯವಸ್ಥೆ ಬದಲಾಯಿಸುವಂತೆ ಸಿಬ್ಬಂದಿಗೆ ಸೂಚಿಸಿದರು. ಶಾಲೆಯ ಆಟದ ಮೈದಾನ, ಉಟದ ತಟ್ಟೆಗಳ ಖರೀದಿ ಅಗತ್ಯವಿದೆ ಎಂಬುದನ್ನು ಮನಗಂಡ ಡಿಸಿ ಅವರು ಸಂಬಂಧಿ ಸಿದ ಅಧಿಕಾರಿಗಳಿಗೆ ಪತ್ರ ಬರೆದು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ನಿಲಯದ ಸಿಬ್ಬಂದಿಗೆ ತಿಳಿಸಿದರು. ಶಾಲೆಯಲ್ಲಿಯ ಶಿಕ್ಷಣದ ಕುರಿತು ಮೆಚ್ಚುಗೆಯನ್ನೂ ವ್ಯಕ್ತಪಡಿಸಿದರು. 

ನಂತರ ಸರೂರ ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕ ಭೇಟಿ ನೀಡಿದ ಅವರು, ಘಟಕದಲ್ಲಿನ ವ್ಯವಸ್ಥೆ ಪರಿಶೀಲನೆ ನಡೆಸಿದರು. ವೈಜ್ಞಾನಿವಕವಾಗಿ ಕಸ ವಿಲೇವಾರಿ ಮಾಡುವುದು ಯಾವಾಗ ಎಂದು ಸಿಬ್ಬಂದಿ ವಿನೋದ ಝಿಂಗಾಡೆ, ಮುಖ್ಯಾಧಿಕಾರಿ ಎಸ್‌.ಎಸ್‌. ಬಾಗಲಕೋಟ ಅವರನ್ನು ಪ್ರಶ್ನಿಸಿದರು. ಎರೆಹುಳು ಗೊಬ್ಬರದ ಘಟಕವನ್ನು ಆರಂಭಿಸಿ ಸ್ವಯಂ ಸೇವಾ ಸಂಘಗಳಿಗೆ ನಿರ್ವಹಣೆಗೆ ನೀಡುವಂತೆ ಸೂಚಿಸಿದರು. ಅಲ್ಲದೇ ಘಟಕಕ್ಕೆ
ಅಗತ್ಯವಾಗಿರುವ ವಿದ್ಯುತ್‌ ವ್ಯವಸ್ಥೆ ಕಲ್ಪಿಸಲು ಹೆಸ್ಕಾಂ ಅಧಿಕಾರಿಗೆ ಪತ್ರ ಬರೆಯುವಂತೆಯೂಸೂಚಿಸಿದರು. 

ಎಸಿ ಡಾ| ಶಂಕರ ವಣಕ್ಯಾಳ, ತಹಶೀಲ್ದಾರ್‌ ಎಂ.ಎ.ಎಸ್‌. ಬಾಗವಾನ, ಪುರಸಭೆ ಸದಸ್ಯ ಮಹಿಬೂಬ ಗೊಳಸಂಗಿ, ಕಂದಾಯ ನಿರೀಕ್ಷಕ ಎಸ್‌.ಸಿ. ವಡವಡಗಿ, ಬಿ.ಸಿ. ಭದ್ರಣ್ಣವರ, ಪುರಸಭೆ ಸಿಬ್ಬಂದಿ ಶಿವಣ್ಣ ಬೋಳಿ, ಶಮುದ್ದೀನ್‌ ಮೂಲಿಮನಿ ಇದ್ದರು.

ಮುದ್ದೇಬಿಹಾಳ ತಾಲೂಕಾಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಇದ್ದ ಸಿಬ್ಬಂದಿ ಸಂತೃಪ್ತಿಯಿಂದ ಕೆಲಸ ಮಾಡದ ಪರಿಸ್ಥಿತಿ ಇದೆ. ಇವರಿಗೆ ತೃಪ್ತಿ ಇಲ್ಲ ಎಂದ ಮೇಲೆ ಇವರಿಂದ ರೋಗಿಗಳಿಗೆ ತೃಪ್ತಿಕರ ಸೇವೆ ನಿರೀಕ್ಷೆ ಸಾಧ್ಯವಿಲ್ಲ. ಸಿಬ್ಬಂದಿ ಕೊರತೆ ಬಗೆಹರಿಸುವಂತೆ ಆರೋಗ್ಯ ಇಲಾಖೆ
ನಿರ್ದೇಶಕರಿಗೆ ವರದಿ ಸಲ್ಲಿಸಲಾಗುತ್ತದೆ.  
ಶಿವಕುಮಾರ ಕೆ.ಬಿ.

ಟಾಪ್ ನ್ಯೂಸ್

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Vijayapura: Protest against Waqf led by many Seers

Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Court-1

Puttur: ರಸ್ತೆ ಅಪಘಾತದಲ್ಲಿ ಸಾವು; ಆರೋಪಿ ಚಾಲಕ ಖುಲಾಸೆ

2

Kasaragod: ರೈಲು ಹಳಿಯಲ್ಲಿ ಬಾಟಲಿ, ನಾಣ್ಯ ಇರಿಸಿ ದುಷ್ಕೃತ್ಯಕ್ಕೆ ಸಂಚು

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.