ಮೇಲ್ಮನೆ ಘನತೆ ಎತ್ತಿಹಿಡಿಯುವೆ; ವೆಂಕಯ್ಯ ನಾಯ್ಡು 13ನೇ ಉಪರಾಷ್ಟ್ರಪತಿ
Team Udayavani, Aug 6, 2017, 6:10 AM IST
ನವದೆಹಲಿ: ನಿರೀಕ್ಷೆಯಂತೆಯೇ ಎನ್‌ಡಿಎ ಅಭ್ಯರ್ಥಿ ಎಂ.ವೆಂಕಯ್ಯ ನಾಯ್ಡು ಅವರು ದೇಶದ 13ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಮೂರನೇ ಎರಡರಷ್ಟು ಮತಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ನಾಯ್ಡು ಅವರು ವಿಪಕ್ಷಗಳ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು 272 ಮತಗಳ ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶನಿವಾರ ಉಪರಾಷ್ಟ್ರಪತಿ ಆಯ್ಕೆಗೆ ಮತದಾನ ನಡೆದಿದ್ದು, ಲೋಕಸಭೆ ಮತ್ತು ರಾಜ್ಯಸಭೆಯ 771 ಮಂದಿ ಸದಸ್ಯರು ಮತ ಚಲಾಯಿಸಿದ್ದರು. ಈ ಪೈಕಿ ನಾಯ್ಡು ಅವರು 516 ಮತಗಳನ್ನು ಪಡೆದರೆ, ಗಾಂಧಿ ಅವರು 244 ಮತಗಳಿಗೆ ತೃಪ್ತಿ ಪಡಬೇಕಾಯಿತು. ಫಲಿತಾಂಶ ಪ್ರಕಟಗೊಂಡ ಬಳಿಕ ಮಾತನಾಡಿದ ನಾಯ್ಡು ಅವರು, “ಕೃಷಿ ಹಿನ್ನೆಲೆಯಿಂದ ಬಂದಿರುವ ನಾನು ಎಂದಿಗೂ ಈ ಹುದ್ದೆಗೇರುತ್ತೇನೆಂದು ಊಹಿಸಿರಲಿಲ್ಲ. ಪ್ರಧಾನಿ ಮೋದಿ, ಎಲ್ಲ ಪಕ್ಷಗಳ ನಾಯಕರಿಗೆ ನಾನು ಧನ್ಯವಾದ ಹೇಳಬಯಸುತ್ತೇನೆ. ಮೇಲ್ಮನೆಯ ಘನತೆಯನ್ನು ಎತ್ತಿಹಿಡಿಯುತ್ತೇನೆ ಎಂದ್ದಾರೆ. ಇದೇ ವೇಳೆ, ಪ್ರಧಾನಿ ಮೋದಿ, ವಿಪಕ್ಷಗಳ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಅನೇಕರು ನಾಯ್ಡು ಅವರನ್ನು ಅಭಿನಂದಿಸಿದರು.
ಒಟ್ಟು ಚಲಾವಣೆಯಾದ ಮತ- 771
ವೆಂಕಯ್ಯ ನಾಯ್ಡುಗೆ ಸಿಕ್ಕಿದ್ದು- 516
ಗೋಪಾಲಕೃಷ್ಣ ಗಾಂಧಿಗೆ ಸಿಕ್ಕಿದ್ದು- 244
ಎಷ್ಟು ಅಂತರದ ಗೆಲುವು- 272
ಅಸಿಂಧುವಾದ ಮತಗಳು- 11
ವೆಂಕಯ್ಯ ನಾಯ್ಡು ಅವರು ಉಪರಾಷ್ಟ್ರಪತಿಯಾಗಿ ಬದ್ಧತೆ ಹಾಗೂ ಶ್ರದ್ಧೆಯಿಂದ ದೇಶಕ್ಕೆ ಸೇವೆ ಸಲ್ಲಿಸುತ್ತಾರೆ ಹಾಗೂ ರಾಷ್ಟ್ರ ನಿರ್ಮಾಣದ ನಿಲುವಿಗೂ ಬದ್ಧರಾಗಿರುತ್ತಾರೆ ಎಂಬ ನಂಬಿಕೆಯಿದೆ.
– ನರೇಂದ್ರ ಮೋದಿ, ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.